ಕಲಬುರಗಿ: ನಗರದ ಖಾಸಗಿ ಹೋಟೆಲ್‌ನಲ್ಲಿ ಶನಿವಾರ ಸಂಜೆ ಅಫಜಲಪುರ ತಾಲೂಕಿನ ಗೌಡಗಾಂವ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಶಿಕ್ಷಕ ವಿಜಯಕುಮಾರ ಶ್ರೀನಿವಾಸರಾವ ಕುಲಕರ್ಣಿ ಅವರ ಜನ್ಮದಿನಾಚರಣೆ ಹಾಗೂ ಬೀಳ್ಕೊಡುಗೆ ಸಮಾರಂಭವನ್ನು ಸಮಾನ ಮನಸ್ಕರು, ಅಭಿಮಾನಿಗಳ ಬಳಗ, ಶಿಷ್ಯಂದಿರು ಮತ್ತು ಬಂಧು ಬಳಗದವರು ಸೇರಿ ಆತ್ಮೀಯವಾಗಿ ಜನ್ಮದಿನ ಆಚರಿಸಿ ಸಂಭ್ರಮಿಸಿದರು.
ಸಾರ್ವಜನಿಕ ಶಿಕ್ಷಣ ಇಲಾಖೆಯಡಿ ವಿವಿಧ ಸರ್ಕಾರಿ ಶಾಲೆಗಳಲ್ಲಿ ಸುಮಾರು ೩೦ ವರ್ಷ ಸುದೀರ್ಘ ಸೇವೆ ಸಲ್ಲಿಸಿ, ಕೊನೆಗೆ ಅಫಜಲಪುರ ತಾಲೂಕಿನ ಗೌಡಗಾಂವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮೂರು ವರ್ಷ, ಆರು ತಿಂಗಳ ಕಾಲ ಸೇವೆ ಸಲ್ಲಿಸಿ ಈಗ ನಿವೃತ್ತರಾಗಿದ್ದಾರೆ.
ಎರಡು ದಿನಗಳ ಹಿಂದೆಯಷ್ಟೆ ವಯೋನಿವೃತ್ತಿಯಾದ ಹಿನ್ನೆಲೆಯಲ್ಲಿ ಅಫಜಲಪುರ ಬಿಇಓ ಕಚೇರಿ ಹಾಗೂ ಸ್ಥಳೀಯ ಶಾಲೆಯ ಸಮಸ್ತ ಶಿಕ್ಷಕ ವೃಂದ, ಎಸ್‌ಡಿಎಂಸಿ ಪದಾಧಿಕಾರಿಗಳು, ಗ್ರಾಮಸ್ಥರು ಸೇರಿ ಎಲ್ಲರು ಆತ್ಮೀಯವಾಗಿ ಬೀಳ್ಕೊಡುಗೆ ನೀಡಿ ಅವರ ಕರ್ತವ್ಯದ ದಿನಗಳನ್ನು ಸ್ಮರಿಸಿಕೊಂಡು ಮೆಚ್ಚುಗೆ ವ್ಯಕ್ತಪಡಿಸಿದರು.
ಶಾಲೆಯ ಮುಖ್ಯಗುರು, ಶಿಕ್ಷಕರು, ಪ್ರಾಥಮಿಕ ಶಾಲೆ ಶಿಕ್ಷಕರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಶಿಕ್ಷಕರ ಸಹಕಾರ ಸಂಘದ ಸರ್ವ ಸದಸ್ಯರು, ಶಿಷ್ಯ ವೃಂದ ಸೇರಿ ಅನೇಕರು ಆಗಮಿಸಿ ಶುಭ ಕೋರಿ ಅಭಿನಂದಿಸಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…