ಬಿಸಿ ಬಿಸಿ ಸುದ್ದಿ

ವಿಕಲಚೇತನರಿಗೆ ಸರ್ಕಾರದ ಸೌಲಭ್ಯ ಒದಗಿಸುವ ಪ್ರಮಾಣಿಕ ಪ್ರಯತ್ನ ಮಾಡಲಾಗುವುದು: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ನಮ್ಮದು ಆಳುವ ಸರ್ಕಾರವಲ್ಲ ಆಲಿಸುವ ಸರ್ಕಾರವಾಗಿದೆ. ವಿಕಲಚೇತನರಿಗೆ ನಮ್ಮ ಸರ್ಕಾರ ಎಲ್ಲಾ ಸೌಲಭ್ಯಗಳನ್ನು ಒದಗಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಭರವಸೆ ನೀಡಿದರು.

ವಿಕಲಚೇತನರ ಹಾಗೂ ಹಿರಿಯ‌ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ನಗರದ ಎಸ್ ಎಂ ಪಂಡಿತ ರಂಗ ಮಂದಿರದಲ್ಲಿ ಏರ್ಪಡಿಸಲಾಗಿದ್ದ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ವಿಕಲಚೇತನರ ರಾಜಕೀಯ ಸಾಮಾಜಿಕ ಆರ್ಥಿಕ ಮತ್ತು ಸಾಂಸ್ಕೃತಿಕ ಜೀವನದ ಪ್ರತಿಯೊಂದು ಅಂಶಗಳಲ್ಲಿ ವಿಕಲಾಂಗ ವ್ಯಕ್ತಿಗಳ ಏಕೀಕರಣದಿಂದ ಪಡೆಯಬಹುದಾದ ಲಾಭಗಳ ಅರಿವನ್ನು ಹೆಚ್ಚಿಸಲು ವಿಶ್ವ ವಿಕಲಚೇತನರ ದಿನವನ್ನು ಆಚರಿಸಲಾಗುತ್ತಿದೆ. “2011 ರ ಜನಗಣತಿ ಪ್ರಕಾರ ಜಿಲ್ಲೆಯಲ್ಲಿ ಒಟ್ಟು 66392 ವಿಕಲಚೇತನರಿದ್ದು ಅವರಲ್ಲಿ 53213 ವಿಕಲಚೇತನರು ಮಾಶಾಸಲ ಪಡೆಯುತ್ತಿದ್ದಾರೆ. ಇಲಾಖೆಯವತಿಯಿಂದ ಈ ಸಾಲಿನಲ್ಲಿ 36 ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ವಿತರಿಸಲಾಗಿದೆ” ಎಂದು ಅವರು ಹೇಳಿದರು.

ಇತ್ತೀಚಿಗೆ ಬೆಂಗಳೂರಿನಲ್ಲಿ ನಡೆದ ಟೆಕ್ ಸಮ್ಮಿಟ್ ನಲ್ಲಿ ಅಸಿಸ್ಟಿಂಗ್ ಟೆಕ್ನಾಲಜಿ ಬಳಕೆಗೆ ರೂ 5 ಕೋಟಿ ಒಪ್ಪಂದ ಮಾಡಿಕೊಳ್ಳಲಾಗಿದೆ. ಡಿಸೆಂಬರ್ ಅಂತ್ಯದವರಗೆ ಕಂಪನಿಗಳನ್ನು ಕರೆಸಿ ಸಂಘ ಸಂಸ್ಥೆ ಗಳೊಂದಿಗೆ ಚರ್ಚೆ ನಡೆಸಿ ವಿಕಲಚೇತನರಿಗೆ ತಂತ್ರಜ್ಞಾನ ಬಳಸಿಕೊಂಡು ಏನು ಅನುಕೂಲ ಮಾಡಿಕೊಡಬೇಕು ಎನ್ನುವುದಕ್ಕೆ ರೂಪುರೇಷ ನೀಡಲಿದ್ದೇನೆ.

ಜೊತೆಗೆ ಪಂಚಾಯತ ರಾಜ್ ಇಲಾಖೆಯ ವತಿಯಿಂದ ಒಂದು ವಿಶೇಷ ಕಾರ್ಯಕ್ರಮವನ್ನು ಮಾರ್ಚ್ ಒಳಗೆ ಮಾಡಲಿದ್ದೇನೆ. ಇದಲ್ಲದೆ ಕಲಬುರಗಿ ಯಲ್ಲಿ ಸಧ್ಯ ಇರುವ ತೀರಾ ಹಳೆಯದಾದ ಬ್ಲೈಂಡ್ ಶಾಲೆಯನ್ನು ನೆಲಸಮ ಮಾಡಿ ರೂ‌ 10 ಕೋಟಿ ವೆಚ್ಚದಲ್ಲಿ ನೂತನ ಶಾಲೆ ನಿರ್ಮಾಣ ಮಾಡಲಾಗುವುದು ಎಂದು‌ ಸಚಿವರು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ದೃಷ್ಟಿ ಹೀನ ವಿಶೇಷ ಚೇತನರಿಗೆ ಲ್ಯಾಪ್ ಟಾಪ್ ಹಾಗೂ ಬ್ರೈಲ್ ಕಿಟ್ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಸೇರಿದಂತೆ ಹಲವರಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

8 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

18 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

18 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

18 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago