ಬಿಸಿ ಬಿಸಿ ಸುದ್ದಿ

ತೆಲಂಗಾಣದಲ್ಲಿ ಕಾಂಗ್ರೆಸ್‌ ಭರ್ಜರಿ ಗೆಲುವು; ಶಾಸಕ ಅಲ್ಲಂಪ್ರಭು ಪಾಟೀಲ್‌ ಹರ್ಷ

ಕಲಬುರಗಿ; ತೆಲಂಗಾಣಾ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಭರ್ಜರಿ ಗೆಲುವು ಸಾಧಿಸಿರುವುದಕ್ಕೆ ಕಲಬುರಗಿ ದಕ್ಷಿಣ ಕಾಂಗ್ರೆಸ್‌ ಶಾಸಕರಾದ ಅಲ್ಲಂಪ್ರಭು ಪಾಟೀಲ್‌ ಹರುಷ ವ್ಯಕ್ತಪಡಿಸಿದ್ದಾರೆ.

ತೆಲಂಗಾಣದ ಬಿಎಸ್ ಆರ್ ಸರ್ಕಾರ ನಡೆಸಿರುವ ಭ್ರಷ್ಟಾಚಾರದ ವಿರುದ್ದ ಅಲ್ಲಿನ ಜನರ ಆಕ್ರೋಶ ಈ ಫಲಿತಾಂಶದಲ್ಲಿ ವ್ಯಕ್ತವಾಗಿದೆ. ಅಲ್ಲಿ ಬಿಎಸ್‌ಆರ್‌ ಪಕ್ಷದ ವಿರೋಧದಲ್ಲಿ ಭಾರಿ ಅಲೆ ಇತ್ತು ಎಂಬುದು ಅಲ್ಲಿನ ಚುನಾವಣಾ ಪ್ರಚಾರದಲ್ಲಿ ತಾವು ಹೋದಾಗೆಲ್ಲಾ ಅನುಭ‍ಕ್ಕೆ ಬಂದಿತ್ತು. ಅದೀಗ ವಿಜಯಲಕ್ಷ್ಮೀಯಾಗಿ ಕಾಂಗ್ರೆಸ್‌ಗೆ ಒಲಿದಿದೆ ಎಂದು ಅಲ್ಲಂಪ್ರಭು ಪಾಟೀಲ್‌ ಹೇಳಿದ್ದಾರೆ.

ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ, ರಾಜ್ಯದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌, ಸಚಿವರೊಂದಿಗೆ ತೆಲಂಗಾಣದಲ್ಲಿ ಅಲ್ಲಂಪ್ರಭು ಪಾಚೀಲರು ಎಐಸಿಸಿ ಆದೇಶದಂತೆ ಪಕ್ಷದ ಸಭೆ- ಸಮಾರಂಭಗಳಲ್ಲಿ ನಿರಂತರವಾಗಿ ಪಲ್ಗೊಂಡಿದ್ದಲ್ಲದೆ ಅಲ್ಲಿನ ಅನೇಕ ಅಸಂಬ್ಲಿ ಕ್ಷೇತ್ರಗಳಲ್ಲಿ ಸುತ್ತಾಡಿ ಅಭ್ಯರ್ಥಿಗಳ ಪರವಾಗಿ ಬಿರುಸಿನ ಪ್ರಚಾರದಲ್ಲಿಯೂ ತೊಡಗಿಸಿಕೊಂಡಿದ್ದರು.

ಬಿಎಸ್‌ಆರ್‌ ಪಕ್ಷ ತನ್ನ ಅಧಿಕಾರ ಅವಧಿಯಲ್ಲಿ ಅನೇಕ ಹಗರಣಗಳನ್ನು ಮಾಡಿ ಜನರ ಕೆಂಗಣ್ಣಿಗೆ ಗುರಿಯಾಗಿತ್ತು. ಅಲ್ಲಿನ ಜನ ತೆಲಂಗಾಣ ಸುರಕ್ಷಿತವಾಗಿರಬೇಕಾದರೆ ಕಾಂಗ್ರೆಸ್‌ ಗೆಲ್ಲಿಸಬೇಕು ಎಂದು ಸಂಕಲ್ಪಿಸಿದ್ದರು, ಅದರ ಫಳವಾಗಿಯೇ ಇಂದು ತೆಲಂಗಾಣದಲ್ಲಿ ಕಾಂಗ್ರೆಸ್‌ ಜಯಭೇರಿ ಬಾರಿಸಿದೆ. ಮಂದಿನ ದಿನಗಳಲ್ಲಿ ತೆಲಂಗಾಣದಲ್ಲಿ ಪಕ್ಷದ ಆಡಳಿತ ಎಲ್ಲಾ ರಂಗದಲ್ಲಿಯೂ ಸುಭಿಕ್ಷೆ ತರಲಿದೆ ಎಂದು ಅಲ್ಲಂಪ್ರಭು ಪಾಟೀಲ್‌ ಹೇಳಿದ್ದಾರೆ.

emedialine

Recent Posts

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

1 hour ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

1 hour ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

3 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

3 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

3 hours ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

3 hours ago