ಬಿಸಿ ಬಿಸಿ ಸುದ್ದಿ

ಬಜೆಟ್‍ನಲ್ಲಿ ವಿಕಲಚೇತನರಿಗೆ 284 ಕೋಟಿ ಮೀಸಲು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು; ಈ ವರ್ಷದ ಬಜೆಟ್‍ನಲ್ಲಿ ವಿಕಲಚೇತನರ ಕಲ್ಯಾಣಕ್ಕಾಗಿ 284 ಕೋಟಿ ರೂಗಳನ್ನು ಮೀಸಲಿಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಮ್ಮಿಕೊಂಡಿದ್ದ “ವಿಶ್ವ ವಿಕಲಚೇತನರ ದಿನಾಚರಣೆ-2023” ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸರ್ಕಾರ ವಿಲಚೇತನರಿಗೆ ಅನೇಕ ಯೋಜನೆಗಳನ್ನು ಹಮ್ಮಿಕೊಂಡಿದೆ. 2011ರ ಜನಗಣತಿ ಪ್ರಕಾರ ನಮ್ಮ ರಾಜ್ಯದಲ್ಲಿ 13,24,205 ವಿಕಲಚೇತನರಿದ್ದಾರೆ. ವಿಕಲಚೇತನರು ಭಾರವೆಂದು ನಾವು ಭಾವಿಸಬಾರದು. ಅವರಿಗೆ ಶಿಕ್ಷಣ, ಉದ್ಯೋಗ ಹಾಗೂ ಇತರ ಹಕ್ಕುಗಳನ್ನು ನೀಡುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದರು.

ವಿಕಲಚೇತನರಿಗೆ ಶೇ.5 ರಷ್ಟು ಮೀಸಲಾತಿಯನ್ನು ನೀಡಲು ಸರ್ಕಾರದ ಆದೇಶವಿದೆ. ಕಳೆದ ತಿಂಗಳ ಜನಸ್ಪಂದನದಲ್ಲಿ ವಿಕಲಚೇತನರ ಅನೇಕ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರಕ್ಕೆ ಕ್ರಮಕೈಗೊಳ್ಳಲಾಗಿದೆ ಎಂದು ಹೇಳಿದರು.

ವಿಕಲಚೇತನರಿಗೆ 4000 ಯಂತ್ರಚಾಲಿತ ತ್ರಿಚಕ್ರವಾಹನವನ್ನು 40ಕೋಟಿ ಅನುದಾನದಲ್ಲಿ ನೀಡಲಾಗಿದೆ. ಅಂಧ ವಿದ್ಯಾರ್ಥಿಗಳಿಗೆ 40 ಲ್ಯಾಪ್ ಟಾಪ್ ವಿತರಿಸಲಾಗಿದೆ. ಉನ್ನತ ಶಿಕ್ಷಣದ ಶಿಕ್ಷಣ ಶುಲ್ಕವನ್ನು ಮನ್ನಾ ಮಾಡಲಾಗಿದೆ ಎಂದರು.

ಈ ವರ್ಷ 10 ಬುದ್ದಿಮಾಂದ್ಯ ಶಾಲೆಗಳನ್ನು 7 ಜಿಲ್ಲೆಗಳಲ್ಲಿ ತಲಾ 2 ಕೋಟಿಗಳಲ್ಲಿ ಸ್ಥಾಪಿಸಲು ಆಯವ್ಯಯದಲ್ಲಿ ಘೋಷಿಸಲಾಗಿದೆ. ಕ್ರೀಡೆಗಳಲ್ಲಿ ಸಹ ವಿಕಲಚೇತನರು ಒಳ್ಳೆಯ ಸಾಧನೆ ಮಾಡಿ ಪ್ರಶಸ್ತಿ ಗಳಿಸಿದ್ದಾರೆ. ಇವರಿಗೆ ಶಿಕ್ಷಣ, ಪುನರ್ವಸತಿ, ವೈದ್ಯಕೀಯ ಸೌಲಭ್ಯ ಕಲ್ಪಿಸಲು ನಾವು ಬದ್ಧ ಎಂದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ದೈಹಿಕವಾಗಿ ಅಶಕ್ತರಾದರೂ ವಿಕಲಚೇತನರು ಮಾನಸಿಕವಾಗಿ ಸದೃಢರು. ಇವರಿಗೆ ಸರ್ಕಾರ ಬಜೆಟ್ ನಲ್ಲಿ 284 ಕೋಟಿ ಮೀಸಲಿಟ್ಟಿದೆ. ಅಲ್ಲದೆ ಹಲವು ಯೋಜನೆಗಳನ್ನು ನೀಡುತ್ತಿದೆ ಎಂದರು.

ಇದೇ ಸಂದರ್ಭದಲ್ಲಿ ವಿಕಲಚೇತನರ ಕಲ್ಯಾಣಕ್ಕಾಗಿ ದುಡೆಯುತ್ತಿರುವ ವ್ಯಕ್ತಿಗಳು ಹಾಗೂ ಸಂಸ್ಥೆಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು ಹಾಗೂ ವಿಕಲಚೇತನರ ಯೋಜನೆಗಳ ಕೈಪಿಡಿ ಬಿಡುಗಡೆಗೊಳಿಸಲಾಯಿತು.

ಕಾರ್ಯಕ್ರಮದಲ್ಲಿ ಮಾಜಿ ಸಚಿವ ಹೆಚ್.ಎಂ.ರೇವಣ್ಣ, ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮದ ರಾಜ್ಯ ಆಯುಕ್ತರಾದ ದಾಸ್ ಸೂರ್ಯವಂಶಿ, ಕರ್ನಾಟಕ ಬೌದ್ಧಿಕ ವಿಕಲಚೇತನ ಮಕ್ಕಳ ಪಾಲಕರ ಸಂಸ್ಥೆಯ ಮಾಜಿ ಕಾರ್ಯದರ್ಶಿಗಳಾದ ಗಡ್ಕರಿ.ಜೆ.ಪಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ಡಾ.ಜಿ.ಸಿ. ಪ್ರಕಾಶ್, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿರ್ದೇಶಕರಾದ ಎನ್. ಸಿದ್ದೇಶ್ವರ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

emedialine

Recent Posts

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

8 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

8 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

11 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

11 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

11 hours ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

11 hours ago