ಬಿಸಿ ಬಿಸಿ ಸುದ್ದಿ

ಕೋಲಿ ಸಮಾಜವನ್ನು ಮುಖ್ಯ ವಾಹಿನಿಗೆ ತಂದ ಮಹಾನ ನಾಯಕ ವಿಠ್ಠಲ್ ಹೇರೂರ್

ಶಹಾಬಾದ: ತಾಲೂಕಿನ ಹೊನಗುಂಟಾ ಗ್ರಾಮದಲ್ಲಿ ಕೋಲಿ ಸಮಾಜದ ವತಿಯಿಂದ ದಿ.ವಿಠ್ಠಲ ಹೇರೂರ ಅವರ ಪುಣ್ಯಸ್ಮರಣೆ ಅಂಗವಾಗಿ ಅವರ ಪ್ರತಿಮೆಗೆ ದೇವೆಂದ್ರ ಕಾರೊಳ್ಳಿ ಮಾಲಾರ್ಪಣೆ ಮಾಡಿ ಕಾರ್ಯಕ್ರಮ ಚಾಲನೆ ನೀಡಿದರು.

ಕೋಲಿ ಸಮಾಜದ ಮುಖಂಡ ದೇವೆಂದ್ರ ಕಾರೊಳ್ಳಿ ಮಾತನಾಡಿ, ರಾಜ್ಯದಾದ್ಯಂತ ಸುಧೀರ್ಘವಾಗಿ ನಾಲ್ಕು ದಶಕಗಳ ಕಾಲ ತಮ್ಮ ಬದುಕಿನಲ್ಲಿ ಕೋಲಿ (ಕಬ್ಬಲಿಗ) ಸಮಾಜವನ್ನು ಎಸ್.ಟಿ ಸೇರಿಸಲು ಹೋರಾಟ ಮಾಡುವುದರ ಜೊತೆಗೆ ರಾಜಕೀಯ ಶೈಕ್ಷಣಿಕ ಅಭಿವೃದ್ಧಿಗಾಗಿ ಮುಂದೆ ಬರಲು ಕೋಲಿ ಸಮಾಜವನ್ನು ಮುಖ್ಯ ವಾಹಿನಿಗೆ ತಂದಿರುತಕ್ಕಂತ ಮಹಾನ ನಾಯಕ ಅವರು. ಇಂಥ ಮಹಾನ್ ನಾಯಕನನ್ನು ನಾವು ಕಳೆದುಕೊಂಡಿದ್ದೇವೆ. ಹೇರೂರ ಅವರಿಗೆ ಸಮಾಜದ ಬಗ್ಗೆ ಇರುವ ಕಾಳಜಿ ನಾವೆಂದು ಮರೆಯುವಂತಿಲ್ಲ. ಅವರ ವಿಚಾರಗಳನ್ನು ನಮ್ಮ ಆದರ್ಶವನ್ನಾಗಿಟ್ಟು ನಾವು ಹೇರೂರರವರು ಹಾಕಿದ ಮಾರ್ಗದಲ್ಲಿ ನಡೆಯಬೇಕೆಂದು ಹೇಳಿದರು.

ಗ್ರಾಪಂ ಮಾಜಿ ಅಧ್ಯಕ್ಷ ಆನಂದ ಕೊಡಸಾ ಮಾಥನಾಡಿ, ದಿ.ವಿಠ್ಠಲ್ ಹೇರೂರ ಅವರು ನಮ್ಮ ಸಮಾಜಕ್ಕಾಗಿ ಶ್ರಮಿಸಿದ ಮಹಾನ್ ವ್ಯಕ್ತಿ.ಅವರು ಬಿಟ್ಟು ಹೋದ ಆಧರ್ಶಗಳನ್ನು ನಾವೆಲ್ಲರೂ ಚಾಚು ತಪ್ಪದೇ ಅಳವಡಿಸಿಕೊಂಡು ಜೀವನದಲ್ಲಿ ಮುಂದೆ ಬರಬೇಕೆಂದು ಹೇಳಿದರು.

ಮಾರ್ಥಂಡಪ್ಪ ಬುರ್ಲಿ,ಶರಣು ಹಲಕರ್ಟಿ,ರಾಜು ಆಡಿನ್, ರಾಜು ಸಣಮೋ, ಭಾಗಪ್ಪ ಕೊಡಸಾ, ಮಲ್ಲಿಕಾರ್ಜುನ ಆಡಿನ್,ಬಾಬು ಆಡಿನ್, ಮರೆಪ್ಪ ಮರಗೋಳ, ಸಾಬಣ್ಣ ಕಾರೊಳ್ಳಿ, ಮಲ್ಲು ಸುಣಗಾರ,ಈಶಪ್ಪ ಹಾಬಾ ಸೇರಿದಂತೆ ಅನೇಕರು ಇದ್ದರು.

emedialine

Recent Posts

ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ ಸಂವಿಧಾನ ಓದು ಕಾರ್ಯಕ್ರಮ

ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…

2 hours ago

ಶೋಷಿತ ಜನಜಾಗೃತಿ ವೇದಿಕೆ ವತಿಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಮನವಿ

ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…

2 hours ago

ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರು: ಡಾ. ಎಸ್.ಎಸ್. ಗುಬ್ಬಿ ಬೇಸರ

ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…

2 hours ago

ಹಣೆಯ ಮೇಲೆ ಹಚ್ಚಿದ ವಿಭೂತಿ ಆತ್ಮವಿಶ್ವಾಸ ಹೆಚ್ಚಿಸುತ್ತದೆ: ಅರ್ಪಿತಾ ಪಾಟೀಲ

ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…

2 hours ago

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಸಂವಿಧಾನ ದಿನ ಆಚರಣೆ

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…

2 hours ago

ಸಂವಿಧಾನವನ್ನು ರಕ್ಷಿಸಲು ಜವಾಬ್ದಾರಿ ಯುವಕರು ಮೇಲಿದೆ : ಹಿರಿಯ ವಕೀಲ ವೈಜನಾಥ ಎಸ್ ಝಳಕಿ

ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…

2 hours ago