ಬಿಸಿ ಬಿಸಿ ಸುದ್ದಿ

ಪಂಚರಾಜ್ಯಗಳ ಚುನಾವಣೆ: ಶಹಾಬಾದನಲ್ಲಿ ಬಿಜೆಪಿ ವಿಜಯೋತ್ಸವ

ಶಹಾಬಾದ : ನಗರದ ನೆಹರು ವೃತ್ತದಲ್ಲಿ ಪಂಚರಾಜ್ಯ ಚುನಾವಣೆಯಲ್ಲಿ ರಾಜಸ್ಥಾನ, ಮಧ್ಯಪ್ರದೇಶ, ಛತ್ತಿಸ್‍ಗಢ್ ಬಿಜೆಪಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ರವಿವಾರ ಬಿಜೆಪಿ ಮುಖಂಡರು, ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.

ಬಿಜೆಪಿ ಹಿರಿಯ ಮುಖಂಡ ಅರುಣ ಪಟ್ಟಣಕರ್ ಮಾತನಾಡಿ, ಈ ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಮೂರು ರಾಜ್ಯಗಳಲ್ಲಿ ಜಯ ಸಾಧಿಸಿದ್ದು ಮುಂಬರುವ ಲೋಕಸಭಾ ಚುನಾವಣೆಯಲ್ಲಿಯೂ ಸಹ ದೇಶದಲ್ಲಿ ಮತ್ತೆ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರಲಿದೆ.ಈ ಚುನಾವಣೆಯ ಫಲಿತಾಂಶ ಲೋಕಶಭೆ ಚುನಾವಣೆಗೆ ದಿಕಸೂಚಿಯಾಗಿದೆ.

ಫಲಿತಾಂಶದಿಂದ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ಮೂಡಿದೆ.ಪ್ರಧಾನಿ ಮೋದಿಜಿ ಅವರ ನೇತೃತ್ವದ ಬಿಜೆಪಿ ಪಕ್ಷ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದು ವಿಶ್ವದಲ್ಲಿಯೇ ಭಾರತ ದೇಶಕ್ಕೆ ಅತ್ಯುತ್ತಮ ಮನ್ನಣೆ ಸಿಕ್ಕಿದೆ ಎಂದು ಹೇಳಿದರು.

ಅಧ್ಯಕ್ಷರಾದ ಅಣವೀರಪ್ಪ ಇಂಗಿನಶೆಟ್ಟಿ ಮಾತನಾಡಿ, ಭಾರತ ದೇಶದ ಭದ್ರತೆಗಾಗಿ ಮತದಾರರು ಬಿಜೆಪಿ ಗೆಲ್ಲಿಸಿದ್ದಾರೆ. ಬಿಟ್ಟಿ ಗ್ಯಾರಂಟಿಗೆ ಬಗ್ಗದೆ ದೇಶದ ಭದ್ರತೆಗಾಗಿ ಮತದಾರರು ಬಿಜೆಪಿ ಗೆಲ್ಲಿಸಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಡವರ ಜೆಬಿಗೆ ಕತ್ರಿ ಹಾಕಿ ಬಿಟ್ಟಿ ಭಾಗ್ಯಗಳು ನೀಡುತ್ತಿದ್ದಾರೆ.ಅಂತಹ ಬಿಟ್ಟಿ ಭಾಗ್ಯಗಳಿಗೆ ಪಂಚ ರಾಜ್ಯ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್ಸಕ್ಕೆ ತಕ್ಕ ಪಾಠ ಕಲಿಸಿದ್ದಾರೆ. ದೇಶದ ಸುಭದ್ರತೆ ಮತ್ತು ಮೋದಿಯವರ ಕಾರ್ಯ ವೈಖರಿಯಗಳನ್ನು ನೋಡಿ ರಾಜಸ್ಥಾನ ಮಧ್ಯಪ್ರದೇಶ, ಛತ್ತಿಸ್‍ಗಢದಲ್ಲಿ ಅಭೂತಪೂರ್ವ ಬಿಜೆಪಿ ಗೆಲ್ಲಿಸುವುದರ ಜೊತೆಗೆ ಕಾಂಗ್ರೆಸ್ಸಕ್ಕೆ ತಕ್ಕ ಪಾಠ ಕಲಿಸಿದ್ದಾರೆ ಎಂದರು.

ಈ ಸಂಧರ್ಭದಲ್ಲಿ ದುರ್ಗಪ್ಪ ಪವಾರ, ಮಹಾದೇವ ಗೊಬ್ಬೂರಕರ್, ಸದಾನಂದ ಕುಂಬಾರ, ಜ್ಯೋತಿ ಶರ್ಮ, ಚಂದ್ರಕಾಂತ ಗೊಬ್ಬೂರಕರ, ಬಸವರಾಜ ಬಿರಾದಾರ, ನಿಂಗಪ್ಪ ಹುಳಗೋಳಕರ, ಬಸವರಾಜ ಮದ್ರಿಕಿ, ಸೂರ್ಯಕಾಂತ ವಾರದ, ಅಪ್ಪಾರಾವ ನಾಗಶೆಟ್ಟಿ, ಸಾಬಣ್ಣ ಬೆಳಗುಂಪಿ, ಭೀಮಯ್ಯ ಗುತ್ತೆದಾರ,ಸಿದ್ದು ಮಾಣಿಕ್, ಸಂಜಯ ವಿಟಕರ, ಶ್ರೀನಿವಾಸ ದೇವಕರ, ಶ್ರೀನಿವಾಸ ನೆದಲಗಿ, ದತ್ತಾತ್ರೇಯ ಘಂಟಿ, ಶಿವಕುಮಾರ ತಳವಾರ, ನಿಂಗಪ್ಪ ಕನಗನಳಿರೀರಣ್ಣ ನಾಲವಾರ,ನಿಂಗಾರೆಡ್ಡಿ, ಅಮರ ಕೋರೆ, ಸಂತೋಷ ಹುಲಿ,ರೇವಣಸಿದ್ದ ಮತ್ತಿಮಡು ಸೇರಿದಂತೆ ಅನೇಕರು ಇದ್ದರು.

emedialine

Recent Posts

ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ ಸಂವಿಧಾನ ಓದು ಕಾರ್ಯಕ್ರಮ

ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…

4 hours ago

ಶೋಷಿತ ಜನಜಾಗೃತಿ ವೇದಿಕೆ ವತಿಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಮನವಿ

ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…

4 hours ago

ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರು: ಡಾ. ಎಸ್.ಎಸ್. ಗುಬ್ಬಿ ಬೇಸರ

ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…

4 hours ago

ಹಣೆಯ ಮೇಲೆ ಹಚ್ಚಿದ ವಿಭೂತಿ ಆತ್ಮವಿಶ್ವಾಸ ಹೆಚ್ಚಿಸುತ್ತದೆ: ಅರ್ಪಿತಾ ಪಾಟೀಲ

ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…

4 hours ago

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಸಂವಿಧಾನ ದಿನ ಆಚರಣೆ

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…

4 hours ago

ಸಂವಿಧಾನವನ್ನು ರಕ್ಷಿಸಲು ಜವಾಬ್ದಾರಿ ಯುವಕರು ಮೇಲಿದೆ : ಹಿರಿಯ ವಕೀಲ ವೈಜನಾಥ ಎಸ್ ಝಳಕಿ

ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…

4 hours ago