ರೂ.40 ಕೋಟಿ ವೆಚ್ಚದಲ್ಲಿ 19.30ಲಕ್ಷ ಹದಿಹರೆಯದ ಹೆಣ್ಮಕ್ಕಳಿಗೆ ಸ್ಯಾನಿಟರಿ ನ್ಯಾಪ್‌ಕಿನ್ ಪ್ಯಾಡ್ ವಿತರಣೆಗೆ ಕ್ರಮ

ಬೆಳಗಾವಿ ಸುವರ್ಣಸೌಧ,ಡಿ.04; ರಾಜ್ಯದಲ್ಲಿ ಮುಟ್ಟು ಮತ್ತು ಮುಟ್ಟಿನ ಶುಚಿತ್ವದ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಶುಚಿ ಕಾರ್ಯಕ್ರಮ ರೂಪಿಸಲಾಗಿದ್ದು, ಅದರಡಿ ವಿವಿಧ ಕಾರ್ಯಕ್ರಮಗಳನ್ನು ಕೈಗೆತ್ತಿಕೊಳ್ಳಲಾಗಿದೆ. 40 ಕೋಟಿ ರೂ. ವೆಚ್ಚದಲ್ಲಿ ಸರಕಾರಿ ಹಾಗೂ ಸರಕಾರಿ ಅನುದಾನಿತ ಶಾಲಾ/ಕಾಲೇಜುಗಳ 10 ರಿಂದ 18 ವಯೋಮಾನದ 19.30ಲಕ್ಷ ವಿದ್ಯಾರ್ಥಿನಿಯರಿಗೆ ಶಾಲೆ ಮತ್ತು ಹಾಸ್ಟೆಲ್‌ಗಳಲ್ಲಿ ಸ್ಯಾನಿಟರಿ ನ್ಯಾಪ್‌ಕಿನ್ ಪ್ಯಾಡ್ ವಿತರಣೆಗೆ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ ಗುಂಡೂರಾವ್ ಅವರು ಹೇಳಿದರು.

ವಿಧಾನಪರಿಷತ್‌ನಲ್ಲಿ ಸದಸ್ಯ ಕೆ.ಎ.ತಿಪ್ಪೇಸ್ವಾಮಿ ಅವರ ಪ್ರಶ್ನೆಗೆ ಅವರು ಉತ್ತರಿಸಿದರು.ಶುಚಿ ಕಾರ್ಯಕ್ರಮದಡಿ ಹದಿಹರೆಯದವರಲ್ಲಿ ಋತುಸ್ರಾವದ ಶುಚಿತ್ವ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಹದಿಹರೆಯದವರಿಗೆ ಸ್ಯಾನಿಟರಿ ನ್ಯಾಪಕಿನ್ ಬಳಕೆ ಹಾಗೂ ಉಪಯೋಗಗಳ ಬಗ್ಗೆ ತಿಳಿವಳಿಕೆ ನೀಡಲಾಗುತ್ತಿದೆ. ಸಮುದಾಯ ಮತ್ತು ವಿಶೇಷವಾಗಿ ಹದಿಹರೆಯದವರಲ್ಲಿ ಋತುಸ್ರಾವ ನೈರ್ಮಲ್ಯದ ಕುರಿತು ದೃಷ್ಟಿಕೋನ ಬದಲಾಯಿಸಲಾಗುತ್ತಿದೆ. ಸ್ಯಾನಿಟರಿ ನ್ಯಾಪ್‌ಕಿನ್‌ಗಳನ್ನು ಒದಗಿಸುವುದರ ಮುಖಾಂತರ ಬಳಕೆಯನ್ನು ಪ್ರೋತ್ಸಾಹಿಸುವುದು ಹಾಗೂ ಮುಟ್ಟಿನ ವೈಜ್ಞಾನಿಕ ನಿರ್ವಹಣೆಯ ಕುರಿತು ಮಾರ್ಗದರ್ಶನ ನೀಡಲಾಗುತ್ತಿದೆ ಎಂದರು.

2030 ರೊಳಗೆ ಅಪೌಷ್ಠಿಕತೆ ಗಣನೀಯ ಪ್ರಮಾಣದಲ್ಲಿ ನಿಯಂತ್ರಣ;  ಮಹಿಳೆಯರು ಮತ್ತು ಮಕ್ಕಳಲ್ಲಿರುವ ರಕ್ತಹೀನತೆ(ಅನೀಮಿಯಾ)ವನ್ನು 2030 ರೊಳಗೆ ಸಂಪೂರ್ಣವಾಗಿ ನಿವಾರಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ವಿಧಾನಪರಿಷತ್ತಿನ  ಶೂನ್ಯ ವೇಳೆಯಲ್ಲಿ ಸದಸ್ಯ ನಾಗರಾಜ್ ಅವರು ವಿಷಯ ಪ್ರಸ್ತಾಪಿಸಿ, ರಕ್ತಹೀನತೆ ಮತ್ತು ಅಪೌಷ್ಠಿಕತೆಯಿಂದ ಮಹಿಳೆಯರು ಮತ್ತು  ಮಕ್ಕಳು ಬಳಲುತ್ತಿರುವ ಸಮಸ್ಯೆಗಳ ಕುರಿತು ಪ್ರಸ್ತಾಪಿಸಿದ ವಿಷಯಕ್ಕೆ ಪ್ರತಿಕ್ರಿಯಿಸಿದ ಸಚಿವರು, ರಾಜ್ಯದಲ್ಲಿ ಅನೀಮಿಯಾದಿಂದ ಬಳಲುತ್ತಿರುವ ಮಹಿಳೆಯರು ಮತ್ತು ಹದಿಹರೆಯದವರ ಸಂಖ್ಯೆ ಸುಮಾರು 2 ಕೋಟಿ ಎಂದು ಗುರುತಿಸಲಾಗಿದೆ, ಇದರ ನಿವಾರಣೆಗೆ 185 ಕೋಟಿ ರೂ ವೆಚ್ಚದಲ್ಲಿ  ಕಾರ್ಯಕ್ರಮ ರೂಪಿಸಲಾಗುತ್ತಿದ್ದು, 2030 ರ ವೇಳೆಗೆ ರಜ್ಯದಲ್ಲಿ ಈ ಪ್ರಮಾಣದಲ್ಲಿ ಗಣನೀಯವಾಗಿ ಕಡಿಮೆಗೊಳಿಸುವ ಗುರಿ ಹೊಂದಲಾಗಿದೆ ಎಂದರು.

ರಾಜ್ಯದಲ್ಲಿ ಇತ್ತೀಚೆಗೆ ಬೆಳಕಿಗೆ ಬಂದ ಭ್ರೂಣ ಹತ್ಯೆ ಕುರಿತಂತೆ ಸದಸ್ಯ ಯು.ಬಿ.ವೆಂಕಟೇಶ್ ಪ್ರಸ್ತಾಪಿಸಿದರು. ಈ ಪ್ರಕರಣವನ್ನು  ಈಗಾಗಲೇ ಸಿಓಡಿ ತನಿಖೆಗೆ ಆದೇಶಿಸಿದ್ದು, ಇದರಲ್ಲಿ ಭಾಗಿಯಾದ ಎಲ್ಲರ ವಿರುದ್ಧ ಅತ್ಯಂತ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

emedialine

Recent Posts

ಸ್ಲಂ ಜನರಿಗೆ ಹಕ್ಕು ಪತ್ರ ನೀಡುವಂತೆ ರೇಣುಕಾ ಸರಡಗಿ ಸಿಎಂಗೆ ಮನವಿ

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ. ಯಾದಗಿರಿ. ಬೀದರ್. ಕೊಪ್ಪಳ. ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಸ್ಲಂ ನಿವಾಸಿಗಳ ಕುಟುಂಬ 1ಲಕ್ಷ…

2 hours ago

ಶರಣಬಸವ ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ

ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದಲ್ಲಿ ಮಂಗಳವಾರದಂದು, ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ವಿವಿಯ ಧ್ವಜಸ್ಥಂಭದಲ್ಲಿ ಉಪಕುಲಪತಿ ಪ್ರೊ. ಅನಿಲಕುಮಾರ ಬಿಡವೆ ಧ್ವಜಾರೋಹಣ…

2 hours ago

ವಕ್ಫ್ ಬೋರ್ಡ್ ನಿಂದ 15 ಜಿಲ್ಲೆಗಳಲ್ಲಿ ಮಹಿಳಾ ಪದವಿ ಕಾಲೇಜು ಸ್ಥಾಪನೆಗೆ ಸಂಪುಟ ಅಸ್ತು: ಸಚಿವ ಜಮೀರ್ ಅಹಮದ್ ಖಾನ್

ಕಲಬುರಗಿ : ಐತಿಹಾಸಿಕ ವಿಶೇಷ ಸಂಪುಟ ಸಭೆ ಯಲ್ಲಿ ಕರ್ನಾಟಕ ವಖ್ಫ್ ಬೋರ್ಡ್ ವತಿಯಿಂದ ರಾಜ್ಯದ ಹದಿನೈದು ಜಿಲ್ಲೆಗಳಲ್ಲಿ ಮಹಿಳಾ…

4 hours ago

ಸೆ.22 ರಂದು ತುಂಗಭದ್ರೆಗೆ ಬಾಗಿನ ಅರ್ಪಣೆ: ಡಿ.ಕೆ ಶಿವಕುಮಾರ್

ಕಲಬುರಗಿ: ಬರುವ ಸೆಪ್ಟೆಂಬರ್ 22 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಸಚಿವ ಸಂಪುಟದ ಸಹೊದ್ಯೋಗಿಗಳೊಂದಿಗೆ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲಾಗುವುದು…

4 hours ago

ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ: ಡಿಕೆ ಶಿವುಕುಮಾರ್

ಕಲಬುರಗಿ: ಅಮೇರಿಕಾದ ಪ್ರವಾಸದಲ್ಲಿ ತಾವು ಯಾರನ್ನೂ ಭೇಟಿಯಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು. ಸಚಿವ ಸಂಪುಟದ ಸಭೆಯಲ್ಲಿ ಪಾಲ್ಗೊಳ್ಳಲು…

4 hours ago

ನಾಗಮಂಗಲ ಘಟನೆ: ತನಿಖೆ ನಂತರ ಇನ್ನಷ್ಟು ಕ್ರಮ: ಗೃಹ ಸಚಿವ ಪರಮೇಶ್ವರ

ಕಲಬುರಗಿ: ನಾಗಮಂಗಲದ ಅಹಿತರ ಘಟನೆ ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದ್ದು, ತನಿಖಾ ವರದಿ ನಂತರ ಮುಂದಿನ ಹೆಚ್ಚಿನ ಕ್ರಮ ಕೈಗೊಳ್ಳಲಾಗುವುದು…

4 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420