ಡಾ. ಬಿ ಆರ್ ಅಂಬೇಡ್ಕರ್ ಆಧುನಿಕ ಭಾರತದ ನಿರ್ಮಾತೃ

0
58

ಕಲಬುರಗಿ: ಡಾ. ಬಿ ಆರ್ ಅಂಬೇಡ್ಕರ್ ಅವರು ಆಧುನಿಕ ಭಾರತದ ನಿರ್ಮಾತೃ ಮಾತ್ರವಲ್ಲದೆ ಅಸಮಾನತೆ ವಿರುದ್ಧ ಹೋರಾಡಿದ ಮಹಾನ್ ಚೇತನ ಎಂದು ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷರಾದ ಡಾ ಅಂಬಾರಾಯ ಅಷ್ಠಗಿ ಬಣ್ಣಿಸಿದ್ದಾರೆ.

ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಡಾ. ಅಂಬೇಡ್ಕರ್ ರವರ ೬೭ ನೇ ಮಹಾ ಪರಿನಿರ್ವಾಣ ದಿನದ ನಿಮಿತ್ತವಾಗಿ ನಗರದ ಡಾ ಬಿ ಆರ್ ಅಂಬೇಡ್ಕರ್ ರವರ ಪ್ರತಿಮೆಗೆ ಗೌರವ ನಮನ ಸಲ್ಲಿಸಿ ಮಾತನಾಡಿದರು.

Contact Your\'s Advertisement; 9902492681

ಬಡತನ ಹಾಗೂ ಅಸ್ಪೃಶ್ಯತೆ ನಡುವೆ ಬೆಳೆದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು, ನಮ್ಮ ದೇಶದ ಮಹಾನ್ ನಾಯಕರಲ್ಲಿ ಒಬ್ಬರಾಗಿದ್ದಾರೆ. ಕೋಟ್ಯಂತರ ಜನರಿಗೆ ಸ್ಫೂರ್ತಿಯ ಚಿಲುಮೆಯಾಗಿದ್ದಾರೆ. ಸಂವಿಧಾನ ನಮ್ಮ ದೇಶದ ಪವಿತ್ರ ಗ್ರಂಥವಾಗಿದೆ.

ನಮ್ಮ ದೇಶದಲ್ಲಿನ ಅಸಮಾನತೆಯನ್ನು ತೊಡೆದು ಹಾಕಿದ ಡಾ.ಅಂಬೇಡ್ಕರ್ ಅವರ ತತ್ವ ಆದರ್ಶವನ್ನು ನಾವೆಲ್ಲರೂ ಮೈಗೂಡಿಸಿಕೊಳ್ಳಬೇಕಾಗಿದೆ.

ಈ ಮೂಲಕ ನಮ್ಮ ದೇಶವನ್ನು ಮತ್ತಷ್ಟು ಸಧೃಡಗೊಳಿಸಲು ಎಲ್ಲರೂ ಕೈಜೋಡಿಸಬೇಕಾಗಿದೆ ಎಂದು ಡಾ ಅಂಬಾರಾಯ ಅಷ್ಠಗಿ ಅಭಿಪ್ರಾಯ ಪಟ್ಟಿದ್ದಾರೆ.

ಸಂದರ್ಭದಲ್ಲಿ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಶಿವ ಅಷ್ಠಗಿ, ಮುಖಂಡರಾದ ರಾಜು ಕಗ್ಗನಮಡಿ, ಡಾ. ಗುಂಡಪ್ಪ ಸಿಂಗೆ, ರಾಜು ಬೆಹೆರೆ, ಗೋಪಾಲ್ ಕೃಷ್ಣ ಕುಲಕರ್ಣಿ, ಲಕ್ಷ್ಮಣ ಮೂಲಭಾರತಿ, ಗೋರಖನಾಥ್ ದೊಡ್ಮನಿ, ನಾಗು ಸಿರಸಗಿ ಉಪಸ್ಥಿತರಿದ್ದರು.

ಸಂವಿಧಾನದ ಮೂಲಕ ನಮ್ಮ ದೇಶದ ಪ್ರಜಾಪ್ರಭುತ್ವಕ್ಕೊಂದು ಅರ್ಥ ಕಲ್ಪಿಸಿಕೊಡುವ ಮೂಲಕ ದೇಶದ ಭದ್ರ ಬುನಾದಿಗೆ ಅಡಿಪಾಯ ಹಾಕಿದ್ದಾರೆ. ಆ ಪ್ರಯುಕ್ತ ಸಂವಿಧಾನದ ಅಡಿಯಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಪ್ರೇರಣೆಯಾಗಿದ್ದಾರೆ. ಡಾ ಅಂಬಾರಾಯ ಅಷ್ಠಗಿ, ರಾಜ್ಯ ಉಪಾಧ್ಯಕ್ಷರು, ಬಿಜೆಪಿ ಎಸ್ಸಿ ಮೋರ್ಚಾ- ಕರ್ನಾಟಕ

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here