ಕನ್ನಡನಾಡು ಲೇಖಕರ ಓದುಗರ ಸಹಕಾರ ಸಂಘದಿಂದ ಪ್ರಶಸ್ತಿಗಾಗಿ ಪುಸ್ತಕಗಳ ಆಹ್ವಾನ

ಕಲಬುರಗಿ : ಕನ್ನಡನಾಡು ಲೇಖಕರ ಮತ್ತು ಓದುಗರ ಸಹಕಾರ ಸಂಘ ನಿಯಮಿತ, ಕಲಬುರಗಿ ವತಿಯಿಂದ ಕಲ್ಯಾಣ ಕರ್ನಾಟಕ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಲೇಖಕರ ಪುಸ್ತಕಗಳಿಗೆ ಪ್ರಶಸ್ತಿಗಳನ್ನು ಕೊಡುವ ಯೋಜನೆಯನ್ನು ರೂಪಿಸಲಾಗಿದೆ.

ಈಗಾಗಲೇ ಕಳೆದ ಒಂಬತ್ತು ವರ್ಷಗಳಿಂದ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ. ಅದರಂತೆ ಈಗ 2022 ರಲ್ಲಿ ಪ್ರಥಮ ಮುದ್ರಣವಾದ ಕವನ ಸಂಕಲನ, ಕಥಾ ಸಂಕಲನ, ಕಾದಂಬರಿ, ಮಹಿಳಾ ಸಾಹಿತ್ಯ, ಹಾಗೂ ಸಂಕೀರ್ಣ ಕೃತಿಗಳನ್ನು ಅಹ್ವಾನಿಸಲಾಗಿದೆ.

ಲೇಖಕರು ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬೀದರ ಜಿಲ್ಲೆಗಳ ನಾಗರಿಕರಾಗಿರಬೇಕು. ಕನ್ನಡನಾಡು ಪ್ರಕಾಶನದ ಪುಸ್ತಕಗಳನ್ನು ಮತ್ತು ಸಂಘದ ಆಡಳಿತ ಮಂಡಳಿ ಸದಸ್ಯರ ಪು ಸ್ತಕಗಳು ಹಾಗೂ ಸಂಪಾದಿತ ಪುಸ್ತಕಗಳನ್ನು ಪ್ರಶಸ್ತಿಗೆ ಪರಿಗಣಿಸಲಾಗುವುದಿಲ್ಲ.

ಪ್ರಶಸ್ತಿಗಳು 5,000 ನಗದು, ಪ್ರಮಾಣ ಪತ್ರವನ್ನು ಒಳಗೊಡಿರುತ್ತದೆ. 2022ರಲ್ಲಿ ಪ್ರಕಟವಾದ ಉತ್ತಮ ಕಥಾಸಂಕಲನ, ಉತ್ತಮ ಕವನ ಸಂಕಲನ, ಉತ್ತಮ ಕಾದಂಬರಿ, ಮಹಿಳಾ ಸಾಹಿತ್ಯ ಮತ್ತು ಸಂಕೀರ್ಣ ವಿಭಾಗದಲ್ಲಿ ಉತ್ತಮ ಕೃತಿಗೆ ಪ್ರಶಸ್ತಿ ನೀಡಲಾಗುವುದು.

ಪುಸ್ತಕಗಳನ್ನು ಸಲ್ಲಿಸಲು ಕೊನೆಯ ದಿನಾಂಕ 30-12-2023 ತಮ್ಮ ಕೃತಿಯ ಮೂರು ಪ್ರತಿಗಳನ್ನು ಅಧ್ಯಕ್ಷರು “ಕನ್ನಡನಾಡು ಲೇಖಕರ ಮತ್ತು ಓದುಗರ ಸಹಕಾರ ಸಂಘ ನಿಯಮಿತ” ಜಿ.2 ವಿ. ವಿ.ಹಾಸ್ಟೇಲ್ ಕಾಂಪ್ಲೆಕ್ಸ್ ಸೇಡಂ ರಸ್ತೆ ಕಲಬುರಗಿ.-585105. ಈ ವಿಳಾಸಕ್ಕೆ ಖುದ್ದಾಗಿ ಇಲ್ಲವೆ ಅಂಚೆ ಮೂಲಕ ಕಳಿಸಿಕೊಡಲು ಕೋರಲಾಗಿದೆ.

ಈ ಪ್ರಶಸ್ತಿಯ ನೀಡಿಕೆಯಲ್ಲಿ ನಿರ್ಣಾಯಕರ ನಿರ್ಣಯವೇ ಅಂತಿಮ ಈ ಕುರಿತು ಪತ್ರ ವ್ಯವಹಾರ ಇಲ್ಲವೇ ವಿಚಾರಣೆಗೆ ಅವಕಾಶವಿಲ್ಲ. ಪ್ರಶಸ್ತಿಗೆ ಬಂದ ಪುಸ್ತಕಗಳನ್ನು ಹಿಂದುರಿಗಿಸಲಾಗುವುದಿಲ್ಲ.

ವಿವರಗಳಿಗಾಗಿ ಅಧ್ಯಕ್ಷರಾದ ಶ್ರೀ ಅಪ್ಪಾರಾವ ಅಕ್ಕೋಣಿ-9448570985, ಉಪಾಧ್ಯಕ್ಷರಾದ ಡಾ. ಸ್ವಾಮಿರಾವ ಕುಲಕರ್ಣಿ- 9448333539 ಹಾಗೂ ನಿರ್ದೇಶಕರು ಮತ್ತು ಸಂಚಾಲಕರಾದ ಡಾ.ಶರಣಬಸಪ್ಪ ವಡ್ಡನಕೇರಿ 9108790711 ಇವರನ್ನು ಸಂಪರ್ಕಿಸಬಹುದಾಗಿದೆ.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

5 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

8 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

8 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

8 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

8 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

8 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420