ಕಲಬುರಗಿ; ಬೆಂಗಳೂರಿನ ಎಚ್.ಎ.ಎಲ್. ಟಿ.ಟಿ.ಐ. ದಲ್ಲಿ ಐಟಿಐ ಪಾಸಾದ ಅಭ್ಯರ್ಥಿಗಳಿಗೆ ಫಿಟ್ಟರ್, ಟರ್ನರ್, ಮಶಿನಿಷ್ಟ್, ವೆಲ್ಡರ್, ಕೋಪಾ, ಫೌಂಡರಿಮ್ಯಾನ್, ಶಿಟ್ ಮೆಟಲ್ ವರ್ಕರ್, ಕಾರಪೆಂಟರ್, ಮೆಕ್ಯಾನಿಕ್, ಆರ್ ಆಂಡ್ ಎಸಿ, ಟೂಲ್ ಆಂಡ್ ಡೈ ಮೇಕರ್ ಟ್ರೇಡ್, ಅಡ್ವಾನ್ಸ್ಡ್ ಸಿಎನ್ಸಿ ಮಶಿನಿಂಗ್ ಕೋರ್ಸ್ಗಳಲ್ಲಿ ಅಪ್ರೆಂಟಿಸ್ ತರಬೇತಿ ನೀಡಲಾಗುತ್ತಿದೆ. ಇದಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಐಟಿಐ ಪಾಸಾದ ಅಭ್ಯರ್ಥಿಗಳು ಅಪ್ರೆಂಟಿಸ್ ತರಬೇತಿ ಪಡೆಯಲು ಇಚ್ಛೆ ಹೊಂದಿದ್ದಲ್ಲಿ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ ಅರ್ಜಿಯೊಂದಿಗೆ ಎಸ್.ಎಸ್.ಎಲ್.ಸಿ. ಹಾಗೂ ಐಟಿಐ ಪಾಸಾದ ಅಂಕಪಟ್ಟಿ, ಆಧಾರ್ ಕಾರ್ಡ್ ಹಾಗೂ ಮೀಸಲಾತಿ ಬಯಸಿದ್ದಲ್ಲಿ ಎಸ್ಸಿ/ಎಸ್ಟಿ, ಓಬಿಸಿ, ಆರ್ಮಡ್ ಫೋರ್ಸ್, ಪ್ರಮಾಣ ಪತ್ರ ಹೊಂದಿದ್ದಲ್ಲಿ ಅರ್ಜಿಯೊಂದಿಗೆ ಲಗತ್ತಿಸಿ 2023ರ ಡಿಸೆಂಬರ್ 28 ರೊಳಗಾಗಿ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-274846 ಗೆ ಸಂಪರ್ಕಿಸಲು ಕೋರಲಾಗಿದೆ.
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…