ಬಿಸಿ ಬಿಸಿ ಸುದ್ದಿ

ಆರೋಗ್ಯಕ್ಕೆ ಸತ್ವಯುತ ಆಹಾರ ಹಣ್ಣು ಅವಶ್ಯಕ: ಡಾ.ಅಶ್ವಿನಿ.ಎಸ್.ಮಾಲಿ ಪಾಟೀಲ್

ಕಲಬುರಗಿ: ಮನುಷ್ಯ ಆರೋಗ್ಯವಂತನಾಗಿರಲು ಸತ್ವಯುತ ಆಹಾರ ಸೇವನೆಯ ಅವಶ್ಯಕತೆ ಇದೆ.ಎಂದು ಶ್ರೀ ಬಸವೇಶ್ವರ ಆಯುರ್ವೇದಿಕ್ ಮಹಾವಿದ್ಯಾಲಯ ಕಲಬುರಗಿಯ ಸಹಾಯಕ ಪ್ರಾಧ್ಯಾಪಕರಾದ ಡಾ.ಅಶ್ವಿನಿ ಎಸ್.ಮಾಲಿಪಾಟೀಲ ಹೇಳಿದರು.

ಸತ್ಯಂ ಪದವಿ ಪೂರ್ವ ಕಾಲೇಜಿನಲ್ಲಿ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ರಾ.ಸೇ.ಯೋ.ಘಟಕಗಳು ಮತ್ತು UNICEF ಯುನಿಸೆಫ್ ಹಾಗೂ ಮಹಾದೇವಪ್ಪ ರಾಂಪುರೆ ವೈದ್ಯಕೀಯ ಮಹಾವಿದ್ಯಾಲಯದ ನಗರ ಸಮುದಾಯ ಆರೋಗ್ಯ ಕೇಂದ್ರ ರಾಜಾಪುರ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ “ರಕ್ತಹೀನತೆ ಮುಕ್ತ ಪೌಷ್ಟಿಕ ಕರ್ನಾಟಕ” ಕಾರ್ಯಕ್ರಮದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಾತನಾಡಿದರು.

ಯುವಕ ಯುವತಿಯರು ಸತ್ವಯುತ ಆಹಾರ ಹಾಗೂ ಹಣ್ಣುಗಳನ್ನು ಸೇವಿಸುವದರಿಂದ ದೂರಸರಿದು ಝಂಕ್ ಪದಾರ್ಥಗಳ ಹಿಂದೆ ಬಿದ್ದು ತಮ್ಮ‌ಆರೋಗ್ಯವನ್ನು ಕೆಡಿಸಿಕೊಳ್ಳುತ್ತಿದ್ದಾರೆ ಅದರಲ್ಲೂ ವಿಶೇಷವಾಗಿ ಯುವಕ- ಯುವತಿಯರು ಹೆಚ್ಚಾಗಿ ಚಹಾ,ಕಾಫಿ ಸೇವನೆ ಮಾಡುವುದರಿಂದ ಹಸಿರು ತರಕಾರಿಗಳನ್ನು ಸೇವಿಸದೆ ಇರುವುದರಿಂದ ಹದಿಹರೆಯದ ವಯೋಮಾನದವರಲ್ಲಿ ರಕ್ತಹೀನತೆಯಂತಹ ತೊಂದರೆ ಹೆಚ್ಚಾಗುತ್ತಿವೆ ಎಂದು ಹೇಳಿದರು .

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯರಾದ ಡಾ.ಬಿ.ಹೆಚ್.ನಿರಗುಡಿ ಅವರು ಮಾತನಾಡುತ್ತಾ ಇಂದಿನ ಯುವಕ ಯುವತಿಯರಿಗೆ ಆರೋಗ್ಯದ ಬಗ್ಗೆ ಜಾಗೃತಿ ಮುಡಿಸುವ ಕಾರ್ಯಕ್ರಮಗಳ ಅವಶ್ಯಕತೆ ಇದೆ ಎಂದು ಹೇಳಿದರು.

ರಾ.ಸೇ.ಯೋ.ಕಾರ್ಯಕ್ರಮಾಧಿಕಾರಿ ಡಾ.ಮಹೇಶ ಗಂವ್ಹಾರ ಪ್ರಾಸ್ತಾವಿಕ ಮಾತುಗಳನ್ನಾಡಿ ಎಲ್ಲರನ್ನೂ ಸ್ವಾಗತಿಸಿದರು. ಭಾರತಿ ಹಾಗೂ ಸುಮಾ ಇವರು ಕಾರ್ಯಕ್ರಮ ನಿರುಪಿಸಿದರು ಡಾ.ವಿಶ್ವನಾಥ ದೇವರಮನಿ ವಂದಿಸಿದರು.

ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಉಪನ್ಯಾಸಕರಾದ ಪ್ರೊ.ನಮ್ರತಾ ಹವಾ,ಪ್ರೊ.ಅಂಬಿಕಾ,ಪ್ರೊನಿರ್ಮಲಾ ಅಂಕಲಗಿ ವಿದ್ಯಾರ್ಥಿ – ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

7 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

7 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

9 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

9 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

9 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

10 hours ago