ಬಿಸಿ ಬಿಸಿ ಸುದ್ದಿ

ಉನ್ನತ ಶಿಕ್ಷಣದಲ್ಲಿ ಸಂಸ್ಕಾರ ಅತ್ಯಗತ್ಯ: ಅಕ್ರಮ್ ಪಾಷಾ

ಕಲಬುರಗಿ: ಉನ್ನತ ಶಿಕ್ಷಣದಲ್ಲಿ ಸಂಸ್ಕಾರ ಅತ್ಯಂತ ಅಗತ್ಯವಾಗಿದೆ ಎಂದು ಮಹಾನಗರ ಪಾಲಿಕೆಯ ಕಂದಾಯ ಅಧಿಕಾರಿ ಅಕ್ರಮ್ ಪಾಷಾ ಅವರು ಇಲ್ಲಿ ಹೇಳಿದರು.

ನಗರದ ಹೊಸ ಜೇವರ್ಗಿ ರಸ್ತೆಯಲ್ಲಿರುವ ಎಸ್.ಕೆ. ಯಾತ್ರಿಕ್ ನಿವಾಸದ ಹಿಂದಿರುವ ಎಂ.ಎನ್. ದೇಸಾಯಿ ಪದವಿ ಮಹಾವಿದ್ಯಾಲಯದಲ್ಲಿ ಶನಿವಾರ ಸ್ವಾಗತ ಸಮಾರಂಭವನ್ನು ಸಸಿಗೆ ನೀರು ಹಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಉನ್ನತ ಹಂತದ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ಸಂಸ್ಕಾರ ದೊರೆತರೆ ಅವರು ಎಂದಿಗೂ ಕೆಟ್ಟ ಹಾದಿಯನ್ನು ಹಿಡಿಯುವುದಿಲ್ಲ. ಉತ್ತಮ ವಿದ್ಯಾರ್ಥಿಗಳಾಗಿ ಹೊರಹೊಮ್ಮುತ್ತಾರೆ ಎಂದು ಅಭಿಪ್ರಾಯಪಟ್ಟರು.

ಹೈದ್ರಾಬಾದ್ ಕರ್ನಾಟಕ ಪ್ರದೇಶಕ್ಕೆ ಸಂವಿಧಾನದ ೩೭೧(ಜೆ) ಕಲಂ ಜಾರಿಯಾಗಿದೆ. ಇದರಿಂದಾಗಿ ಉದ್ಯೋಗವಕಾಶ, ವೃತ್ತಿ ಶಿಕ್ಷಣ ಪ್ರವೇಶಾತಿ ಹಾಗೂ ಅಭಿವೃದ್ಧಿಯಲ್ಲಿ ಸಾಕಷ್ಟು ಮೀಸಲಾತಿ ಸೌಲಭ್ಯ ದೊರಕುವ ಮೂಲಕ ಈ ಭಾಗದವರಿಗೆ ಹೆಚ್ಚಿನ ಅನುಕೂಲ ಆಗಿದೆ ಎಂದು ಅವರು ಹೇಳಿದರು. ೩೭೧(ಜೆ) ಕಲಂನಿಂದಾಗಿ ಈ ಭಾಗದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಇಂಜಿನಿಯರಿಂಗ್, ವೈದ್ಯಕೀಯ ಸೀಟುಗಳನ್ನು ಪಡೆಯಲು ಸಾಧ್ಯವಾಗಿದೆ ಎಂದು ಅವರು ಹೇಳಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕಲಬುರ್ಗಿ ಮೀಡಿಯಾ ಕ್ಲಬ್ ಸಂಸ್ಥಾಪಕ ಅಧ್ಯಕ್ಷ ಬಸವರಾಜ್ ಅ. ಚಿನಿವಾರ್ ಅವರು ಮಾತನಾಡಿ, ಹಿಂದುಳಿದ ಹೈದ್ರಾಬಾದ್ ಕರ್ನಾಟಕದಲ್ಲಿ ೩೭೧(ಜೆ) ಕಲಂ ಸಮರ್ಪಕವಾಗಿ ಜಾರಿಯಾಗುತ್ತಿಲ್ಲ. ಇದರಿಂದಾಗಿ ಸರ್ಕಾರವು ಶೈಕ್ಷಣಿಕ ಕ್ಷೇತ್ರದಲ್ಲಿ ಸಮರ್ಪಕವಾಗಿ ಕಾರ್ಯನಿರ್ವಹಿಸಲು ಆಗುತ್ತಿಲ್ಲ. ಅದರ ಬದಲಾಗಿ ಖಾಸಗಿ ಶಿಕ್ಷಣ ಸಂಸ್ಥೆಗಳಿಂದಾಗಿ ಈ ಭಾಗದಲ್ಲಿ ಸಾಕಷ್ಟು ಶೈಕ್ಷಣಿಕ ಅಭಿವೃದ್ಧಿಯಾಗಿದೆ ಎಂದರು.
ಗುಲಬರ್ಗಾ ವಿಶ್ವವಿದ್ಯಾಲಯಕ್ಕೆ ನಾಲ್ವತ್ತು ವರ್ಷಗಳ ಇತಿಹಾಸವಿದ್ದರೂ ಸಹ ನೇಮಕಾತಿ ಸಹ ಆಗಿಲ್ಲ. ಇದರಿಂದ ಉನ್ನತ ಶಿಕ್ಷಣಕ್ಕೆ ಹೆಚ್ಚಿನ ಹೊಡೆತ ಬಿದ್ದಿದೆ. ಅದೇ ಶರಣಬಸವ ವಿಶ್ವವಿದ್ಯಾಲಯ ಹಾಗೂ ಖಾಜಾ ಬಂದೇ ನವಾಜ್ ವಿಶ್ವವಿದ್ಯಾಲಯಗಳು ಒಂದೆರಡು ವರ್ಷಗಳಲ್ಲಿಯೇ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಸಾಕಷ್ಟು ಕೊಡುಗೆಯನ್ನು ನೀಡುತ್ತಿವೆ. ಅಂತಹ ಖಾಸಗಿ ಶಿಕ್ಷಣ ಸಂಸ್ಥೆಯ ಸೇವಾ ವಲಯಕ್ಕೆ ಎಂ.ಎನ್. ದೇಸಾಯಿ ಪದವಿ ಕಾಲೇಜು ಸಹ ಸೇರಿದೆ ಎಂದು ಅವರು ಹೇಳಿದರು.

ಇನ್ನೋರ್ವ ಮುಖ್ಯ ಅತಿಥಿ ಸಿಂಣದಗಿಯ ಆರ್‌ಡಿಪಿಆರ್ ಇಲಾಖೆಯ ಕಿರಿಯ ಅಭಿಯಂತರ ಶಂಕರಗೌಡ ಎಸ್. ಪಾಟೀಲ್ ಅವರು ಮಾತನಾಡಿ, ಶಿಕ್ಷಣ ಸಂಸ್ಥೆಗಳನ್ನು ಕಟ್ಟುವುದು ಸುಲಭದ ಮಾತಲ್ಲ. ಪೈಪೋಟಿಯ ನಡುವೆಯೂ ದೇಸಾಯಿ ಪದವಿ ಮಹಾವಿದ್ಯಾಲಯ ಅತ್ಯಂತ ಕಡಿಮೆ ಅವಧಿಯಲ್ಲಿ ಮೇಲ್ಮಟ್ಟದವರೆಗೆ ಬೆಳೆದಿದೆ ಎಂದು ಸಂತೋಷ ವ್ಯಕ್ತಪಡಿಸಿದರು. ಮತ್ತೋರ್ವ ಮುಖ್ಯ ಅತಿಥಿ ಮಹಾನಗರ ಪಾಲಿಕೆಯ ಕಿರಿಯ ಅಭಿಯಂತರ ಸುಧೀರಕುಮಾರ್ ಮೇತ್ರಿ ಅವರು ಮಾತನಾಡಿ, ವಿದ್ಯಾರ್ಥಿಗಳಾದವರಲ್ಲಿ ತಾಳ್ಮೆ, ಪ್ರಾಮಾಣಿಕತೆ, ಸಂಯಮತೆ ಬೇಕು. ಅಂದಾಗ ಜೀವನದಲ್ಲಿ ಏನನ್ನಾದರೂ ಸಾಧಿಸಲು ಸಾಧ್ಯವಾಗಲಿದೆ ಎಂದರು.

ಅಧ್ಯಕ್ಷತೆಯನ್ನು ಸಂಸ್ಥೆಯ ಗೌರವಾಧ್ಯಕ್ಷ ಚಂದ್ರಕಾಂತ್ ಎನ್. ದೇಸಾಯಿ ಅವರು ವಹಿಸಿದ್ದರು. ಪ್ರಿನ್ಸಿಪಾಲ್ ವಿಜಯಕುಮಾರ್ ಬೋಳೆಗೈ ಅವರು ಮಾತನಾಡಿ, ಯುವಶಕ್ತಿಯ ಪಾತ್ರ ಅತ್ಯಂತ ದೊಡ್ಡದು. ಯುವ ಶಕ್ತಿಯು ಸಮಾಜಕ್ಕೆ ಹಾಗೂ ನಾಡಿಗೆ ಕೊಡುಗೆಯನ್ನು ನೀಡಲು ಸಿದ್ಧರಾಗಬೇಕು ಎಂದರು.

ವೇದಿಕೆಯ ಮೇಲೆ ಸಂಸ್ಥೆಯ ಅಧ್ಯಕ್ಷ ಸಂದೀಪ್ ದೇಸಾಯಿ, ಕಾರ್ಯದರ್ಶಿ ಜಗನ್ನಾಥ್ ನಾಗೂರ್ ಮುಂತಾದವರು ಉಪಸ್ಥಿತರಿದ್ದರು. ಪ್ರಾರಂಭದಲ್ಲಿ ಅನುಷಾ ಮತ್ತು ಸಂಧ್ಯಾ ಅವರು ಪ್ರಾರ್ಥನಾಗೀತೆ ಹಾಡಿದರು. ಪ್ರಶಾಂತ್ ಅವರು ಸ್ವಾಗತಿಸಿದರು. ಇದೇ ಸಂದರ್ಭದಲ್ಲಿ ಸಿದ್ದು ಪಾಟೀಲ್ ಸುಂಬಡ್, ಮಂಜುನಾಥ್ ಕಣ್ಣಿ, ರಾಜಕುಮಾರ್ ಪಾಟೀಲ್ ಅವರಿಗೆ ವಿಶೇಷವಾಗಿ ಸನ್ಮಾನಿಸಲಾಯಿತು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

21 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago