ಕಲಬುರಗಿ; ಬೆಳಗಾವಿ ತಾಲೂಕಿನ ಹೊಸ ವಂಟಮುರಿ ಗ್ರಾಮದಲ್ಲಿ ನಿನ್ನೆ ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿ ಮೆರವಣಿಗೆ ಮಾಡಿರುವುದು ಅತ್ಯಂತ ಅಮಾನವೀಯ ಘಟನೆ ಎಂದು ಜನಪರ ಹೋರಾಟಗಾರ ನ್ಯಾಯವಾದಿ ಹಣಮಂತರಾಯ ಎಸ್ ಅಟ್ಟೂರ ಖಂಡಿಸಿದ್ದಾರೆ.

ಯುವಕ ಯುವತಿಯರು ಪ್ರೀತಿಸಿ ಓಡಿ ಹೋಗಿದ್ದಾರೆ ಎಂಬ ಕಾರಣಕ್ಕಾಗಿ ಯುವತಿಯ ಕಡೆಯವರು ಯುವಕನ ಮನೆಗೆ ಹೋಗಿ ಅವರ ತಾಯಿಯ ಮೇಲೆ ಹಲ್ಲೆ ಮಾಡಿ ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ್ದಾರೆ.

ಈ ಘಟನೆಯಿಂದ ಸಮಾಜವೆ ತಲೆ ತಗ್ಗಿಸುವಂತಾಗಿದೆ. ಬೆಳಗಾವ ಜಿಲ್ಲೆ ಕಿತ್ತೂರು ರಾಣಿ ಚೆನ್ನಮ್ಮ ಅವರು ದುಷ್ಟರನ್ನು ಸಂಹಾರ ಮಾಡಿ ಶಿಷ್ಟರನ್ನು ರಕ್ಷಿಸಿ ಮಹಿಳಾ ಶಕ್ತಿಯನ್ನು ಜಗತ್ತಿಗೆ ಪರಿಚಯಿಸಿದ ಪವಿತ್ರವಾದ ಸ್ಥಳ.ಅಂತಹ ಸ್ಥಳದಲ್ಲಿ ಹೀನ ಕೃತ್ಯ ವೆಸಗಿರುವುದು ಮಹಿಳಾ ಕುಲಕ್ಕೆ ಅವಮಾನಗೊಳಿಸಿದಂತಾಗಿದೆ.

ಯಾವುದೇ ಘಟನೆಯಾದರೂ ಕಾನೂನು ಮೂಲಕ ಹೋಗಬೇಕೆ ವಿನಹ ಕಾನೂನು ಕೈಗೆತ್ತಿಕೊಂಡು ಹಲ್ಲೆ ಮಾಡುವುದು ಸಮಂಜಸವಲ್ಲ. ಹೀನ ಕೃತ್ಯವೆಸಗಿದವರನ್ನು ಕೂಡಲೇ ಎಲ್ಲರನ್ನು ಬಂಧಿಸಿ ಕಾನೂನು ಕ್ರಮ ಕೈಗೊಂಡು ಕಠಿಣವಾಗಿ ಶಿಕ್ಷಿಸುವಂತಾಗಬೇಕು ಮತ್ತು ಇಂತಹ ಘಟನೆ ಮುಂದೆ ಆಗದಂತೆ ನೋಡಿಕೊಳ್ಳಬೇಕೆಂದು ಒತ್ತಾಯಿಸಿದರು.

emedialine

Recent Posts

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

23 mins ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

44 mins ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

3 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

14 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

16 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

17 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420