ಬಿಸಿ ಬಿಸಿ ಸುದ್ದಿ

25 ವರ್ಷಗಳ ಅವಧಿಯಲ್ಲಿ ಮಹಾನ್ ರಾಜ್ಯ ನಿರ್ಮಾಣಕ್ಕೆ ಸ್ಪಷ್ಟ ದಿಕ್ಸೂಚಿ ಹೊಂದಲಿ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ವಿಧಾನ ಮಂಡಲದ ಮಾಜಿ ಸಭಾಪತಿಗಳು,ಸಭಾಧ್ಯಕ್ಷರಿಗೆ ಸನ್ಮಾನ

ಸುವರ್ಣಸೌಧ ,ಬೆಳಗಾವಿ, ಡಿ.12: ದೇಶದಲ್ಲಿಯೇ ಅತಿಹೆಚ್ಚು ತೆರಿಗೆ ಪಾವತಿಸುವ ಎರಡನೇ ರಾಜ್ಯ ಕರ್ನಾಟಕವಾಗಿರುವುದು ಇಲ್ಲಿನ ಉದ್ಯೋಗಶೀಲತೆಗೆ ಸಾಕ್ಷಿಯಾಗಿದೆ.ಉತ್ತರದ ಬೆಳಗಾವಿಯಿಂದ ದಕ್ಷಿಣದ ಬೆಂಗಳೂರಿನವರೆಗೆ ನಾಡು ವೈವಿಧ್ಯಮಯ ಐತಿಹಾಸಿಕ,ನೈಸರ್ಗಿಕ ತಾಣಗಳನ್ನು ಹೊಂದಿದೆ.ಮುಂಬರುವ 25 ವರ್ಷಗಳ ಅವಧಿಯಲ್ಲಿ ರಾಜ್ಯದ ಸರ್ವಾಂಗೀಣ ಪ್ರಗತಿಗೆ ಸ್ಪಷ್ಟ ದಿಕ್ಸೂಚಿಯನ್ನು ರಾಜ್ಯ ಹಾಕಿಕೊಂಡು ಮಹಾನ್ ಕರ್ನಾಟಕ,ಮಹಾನ್ ಭಾರತ ನಿರ್ಮಿಸಬೇಕು ಎಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹೇಳಿದರು.

ಸುವರ್ಣಸೌಧದ ಮುಂಭಾಗದಲ್ಲಿ ಕರ್ನಾಟಕ ವಿಧಾನ ಮಂಡಲವು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣಗೊಂಡು 50 ವರ್ಷಗಳಾದ ಸಂದರ್ಭದಲ್ಲಿ ಆಯೋಜಿಸಿದ್ದ ಸುವರ್ಣ ಸಂಭ್ರಮಾಚರಣೆ ಹಾಗೂ ಕರ್ನಾಟಕ ವಿಧಾನ ಮಂಡಲದ ಮಾಜಿ ಸಭಾಪತಿಯವರು ಹಾಗೂ ಸಭಾಧ್ಯಕ್ಷರುಗಳ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಕಳೆದ ಐವತ್ತು ವರ್ಷಗಳ ಅವಧಿಯಲ್ಲಿ ರಾಜ್ಯವು ಪ್ರತಿಯೊಂದು ಕ್ಷೇತ್ರದಲ್ಲಿ ಅಭಿವೃದ್ಧಿಯ ದಾಪುಗಾಲು ಹಾಕುತ್ತಿದೆ.ಪ್ರಾಚೀನ ಹಾಗೂ ಮಧ್ಯಕಾಲೀನ‌ ಇತಿಹಾಸದ ಪುಟಗಳನ್ನು ತಿರುವಿದಾಗ ಈ ನಾಡು ಭವ್ಯ ಪರಂಪರೆ, ಭೌಗೋಳಿಕ ವ್ಯಾಪ್ತಿ ಹೊಂದಿತ್ತು ಎಂದು ತಿಳಿಯುತ್ತದೆ.ಸಂಗೀತ,ಕಲೆ,ಸಾಂಸ್ಕೃತಿಕ ಕ್ಷೇತ್ರಕ್ಕೆ ನಾಡಿನ ಕೊಡುಗೆ ದೊಡ್ಡದು.ಶಿಕ್ಷಣ,ಔದ್ಯೋಗೀಕರಣದಲ್ಲಿಯೂ ರಾಜ್ಯ ಪ್ರಗತಿ ಸಾಧಿಸಿದೆ.ಕನ್ನಡ ಎಂಟು ಸಾಹಿತಿಗಳು ಜ್ಞಾನಪೀಠ ಪ್ರಶಸ್ತಿಗೆ ಭಾಜನರಾಗಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ರಾಜ್ಯ ಕ್ಕೆ ಕರ್ನಾಟಕವೆಂದು ನಾಮಕರಣವಾಗಿ 50 ವರ್ಷಗಳು ಪೂರ್ಣಗೊಂಡ ಸಂದರ್ಭದಲ್ಲಿ ವರ್ಷವೀಡಿ ಅರ್ಥಪೂರ್ಣ ಸುವರ್ಣ ಸಂಭ್ರಮಾಚರಣೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.ಸ್ವಾತಂತ್ರ್ಯಾ ನಂತರ ಇಂದು ಇರುವ ವಿಶಾಲ ಕರ್ನಾಟಕ ಒಂದಾಗಿರಲಿಲ್ಲ.ವಿವಿಧ ಆಡಳಿತ ಪ್ರಾಂತ್ಯಗಳಲ್ಲಿ ಕನ್ನಡ ಭಾಷಿಕರು ಹರಿದು ಹಂಚಿ ಹೋಗಿದ್ದರು.ಅನೇಕ ಮಹನೀಯರ ತ್ಯಾಗ,ಬಲಿದಾನಗಳಿಂದ ಅಖಂಡ ಕರ್ನಾಟಕ ನಿರ್ಮಾಣ ಸಾಧ್ಯವಾಯಿತು.

ಆ ಹೋರಾಟಗಾರರನ್ನೆಲ್ಲ ಸ್ಮರಿಸಬೇಕು.1956 ರಲ್ಲಿ ಒಂದಗೂಡಿದರೂ ಕೂಡ ರಾಜ್ಯಕ್ಕೆ ಮೈಸೂರು ರಾಜ್ಯ ಎಂದೇ ಕರೆಯಲಾಗುತ್ತಿತ್ತು.1973 ರಲ್ಲಿ ಡಿ.ದೇವರಾಜ ಅರಸು ಅವರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣ ಮಾಡಿದ್ದು ಐತಿಹಾಸಿಕ ಕಾರ್ಯವಾಗಿದೆ.ಭಾಷೆಯ ಅಭಿಮಾನ ಇರಬೇಕು,ದುರಭಿಮಾನಗಳಾಗಬಾರದು.ಯಾವುದೇ ಭಾಷೆ ಕಲಿಯಬಹುದು ನಮ್ಮ ಮಾತೃ ಭಾಷೆ ಮರೆಯಬಾರದು. ಸುವರ್ಣ ಸಂಭ್ರಮಾಚರಣೆ. ಈ ಸಂದರ್ಭದಲ್ಲಿ ನಾವು ಕನ್ನಡಿಗರ ಜೊತೆ ಕನ್ನಡದಲ್ಲಿಯೇ ಮಾತನಾಡುವ ನಿರ್ಣಯ ಪಾಲಿಸಬೇಕು .ನಮ್ಮ ನೆಲ,ಜಲ,ಕಲೆ,ಸಂಸ್ಕೃತಿ ,ಪರಂಪರೆಗಳ ಅರಿವು ಹೊಂದಬೇಕು ಎಂದರು.

ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಮಾತನಾಡಿ,ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣಗೊಂಡ ನಂತರ ಆಗಿರುವ ಸರ್ವಾಂಗೀಣ ವಿಕಾಸಕ್ಕೆ ಕೊಡುಗೆ ನೀಡಿರುವ ಹಿರಿಯರನ್ನು ಸ್ಮರಿಸುವುದು ನಮ್ಮೆಲ್ಲರ ಜವಾಬ್ದಾರಿ ಮತ್ತು ಕರ್ತವ್ಯವಾಗಿದೆ.ಮುಂದಿನ ಪೀಳಿಗೆಗೆ ಒಂದು ಮಾದರಿಯಾದ ರಾಜ್ಯ ಮತ್ತು ಪರಂಪರೆಯನ್ನು ನಾವು ನೀಡುವ ಕೆಲಸ ಕಾರ್ಯಗಳನ್ನು ನಾವು ಮಾಡಬೇಕು.ಪ್ರೀತಿ ಪೂರ್ವಕ ದ್ವೇಷ ರಹಿತ ರಾಜ್ಯ ನಮ್ಮದು ಆ ಹಿರಿಮೆ ಗರಿಮೆ ಎತ್ತಿ ಹಿಡಿಯಬೇಕು ಎಂದರು.

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮಾತನಾಡಿ,ಹಿಂದಿನ ಹಿರಿಯರು ಸವೆಸಿದ ಹಾದಿ ಹಾಗೂ ಮಾರ್ಗದರ್ಶನ ಸದಾ ಕಾಲ ನಮಗೆ ಬೇಕು.ಸರ್ಕಾರ ಹಾಗೂ ವಿಧಾನಮಂಡಲದ ಸಮನ್ವಯ,ಸಹಕಾರದಿಂದ ಈ ಅರ್ಥಪೂರ್ಣ ಕಾರ್ಯಕ್ರಮ ಸಾಧ್ಯವಾಗಿದೆ ಎಂದರು.

ಕಾನೂನು,ಸಂಸದೀಯ ವ್ಯವಹಾರಗಳು,ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ ಮಾತನಾಡಿ,1973 ರ ನವೆಂಬರ್ 1 ರಂದು ರಾಜ್ಯಕ್ಕೆ ಕರ್ನಾಟಕವೆಂದು ನಾಮಕರಣವಾಯಿತು.ಕಳೆದ ಐವತ್ತು ವರ್ಷಗಳ ಅವಧಿಯಲ್ಲಿ ನಾಡಿನಲ್ಲಿ ಮಹತ್ವದ ಬದಲಾವಣೆಗಳು, ಅಭಿವೃದ್ಧಿಯಾಗಿವೆ.ಗಂಡು ಮೆಟ್ಟಿನ ನಾಡು ಬೆಳಗಾವಿಯ ಸುವರ್ಣ ಸೌಧದ ಎದುರಿನಲ್ಲಿ ಈ ಮಹತ್ವದ ಕಾರ್ಯಕ್ರಮ ನಡೆಯುತ್ತಿರುವುದು ಸಂತಸದ ಸಂಗತಿಯಾಗಿದೆ ಎಂದರು.

ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಮಾತನಾಡಿ,ರಾಜ್ಯವನ್ನು ಸಮಗ್ರವಾಗಿ ಗುರುತಿಸಬೇಕು, ಪ್ರಾದೇಶಿಕ ಭೇಧ ಭಾವಗಳಿಗೆ ಅವಕಾಶ ಉಂಟು ಮಾಡಬಾರದು,ರಾಜ್ಯದ ಅಖಂಡತೆ,ಏಕತೆ ನಾವು ಉಳಿಸಬೇಕು ಎಂದರು.

ಸನ್ಮಾನ ಸ್ವೀಕರಿಸಿದ ಮಾಜಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿ, ಪ್ರಜಾತಾಂತ್ರಿಕ ವ್ಯವಸ್ಥೆಯು ವಿವಿಧ ಕಾಲಘಟ್ಟಗಳಲ್ಲಿ ರೂಪುಗೊಂಡು,ಗಟ್ಟಿಗೊಳ್ಳುತ್ತ ಸಾಗಿದೆ.ಪ್ರತಿಯೊಬ್ಬ ಸಂಸದೀಯ ಪಟುಗಳೂ ಇದಕ್ಕೆ ಮಹತ್ವದ ಕೊಡುಗೆ ನೀಡಿದ್ದಾರೆ.1856 ರಲ್ಲಿ ಭಾಷಾವಾರು ಪ್ರಾಂತಗಳ ರಚನೆಯ ಕೂಗಿಗೆ 1858 ರಲ್ಲಿ ಧಾರವಾಡದಲ್ಲಿ ಡೆಪ್ಯುಟಿ ಚೆನ್ನಬಸಪ್ಪನವರು ಧ್ವನಿ ಸೇರಿಸಿದರು.

ಮುಂದೆ ,1890 ರಲ್ಲಿ ಧಾರವಾಡದಲ್ಲಿ ಸ್ಥಾಪಿತವಾದ ಕರ್ನಾಟಕ ವಿದ್ಯಾವರ್ಧಕ ಸಂಘ,1915 ರಲ್ಲಿ ಬೆಂಗಳೂರಿನಲ್ಲಿ ಸ್ಥಾಪನೆಯಾದ ಕನ್ನಡ ಸಾಹಿತ್ಯ ಪರಿಷತ್ ಸಂಸ್ಥೆಗಳು, ಮಹನೀಯರು ಕನ್ನಡಿಗರು ಒಂದು ಆಡಳಿತದ ವ್ಯಾಪ್ತಿಗೆ ಒಳಪಡಬೇಕು ಎಂಬ ದೃಢ ಹೋರಾಟಗಳನ್ನು ಮುನ್ನಡೆಸಿದ ಇತಿಹಾಸ ನಮಗಿದೆ‌.1956 ರಲ್ಲಿ ವಿಶಾಲ ಮೈಸೂರು ಪ್ರಾಂತ್ಯ ಅಸ್ತಿತ್ವಕ್ಕೆ ಬಂತು ,1973 ರಲ್ಲಿ ಅಂದಿನ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣ ಮಾಡಿದ್ದು ಸ್ಮರಣೀಯ.ಕೆಲವರು ರಾಜಕೀಯ ಕಾರಣಗಳಿಗೆ ಪದೇ ಪದೇ ಗಡಿ ವಿಚಾರದಲ್ಲಿ ತಕರಾರು ತೆಗೆಯುತ್ತಿರುವುದು ಸರಿಯಲ್ಲ.ಅಖಂಡ ಕರ್ನಾಟಕದ ಸಂದೇಶ ನಾವು ಗಟ್ಟಿಯಾಗಿ ಸಾರಬೇಕು ಎಂದರು.

ಮಾಜಿ ಸಭಾಪತಿ ಬಿ.ಎಲ್.ಶಂಕರ್ ಮಾತನಾಡಿ, ರಾಷ್ಟ್ರಕ್ಕೆ ಕರ್ನಾಟಕ ಏಕೀಕರಣದ ಸ್ಪಷ್ಟ ಸಂದೇಶವನ್ನು ಬೆಳಗಾವಿಯ ಸುವರ್ಣಸೌಧದ ಮೂಲಕ ಕಳಿಸಿರುವುದು ಸ್ವಾಗತಾರ್ಹ.ಕರ್ನಾಟಕ ಏಕೀಕರಣ ಹಾಗೂ ಕರ್ನಾಟಕ ನಾಮಕರಣದ ಸಂದರ್ಭದ ಐತಿಹಾಸಿಕ ಕಾರಣಗಳನ್ನು ನಾವೆಲ್ಲ ಮನನ ಮಾಡಿಕೊಳ್ಳಬೇಕು.ಬೆಳಗಾವಿಯ ಸುವರ್ಣಸೌಧದಲ್ಲಿ ಈಗ ಒಂದು ಅಧಿವೇಶನ ಮಾತ್ರ ನಡೆಯುತ್ತಿದೆ.ಇಲ್ಲಿ ಸರ್ಕಾರದ ಚಟುವಟಿಕೆಗಳು ಹೆಚ್ಚಾಗಬೇಕು.ತಿಂಗಳಿಗೆ ಕನಿಷ್ಟ ಒಂದು ಸಚಿವ ಸಂಪುಟ ಸಭೆಯನ್ನಾದರೂ ಇಲ್ಲಿ ಆಯೋಜಿಸಬೇಕು.ಕಲಬುರಗಿ ಭಾಗವನ್ನು ಕೂಡ ಪರಿಗಣಿಸಬೇಕು ಎಂದು ಸಲಹೆ ನೀಡಿದರು‌.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿದರು.

ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ, ವಿಧಾನಪರಿಷತ್ ಉಪಸಭಾಪತಿ ಎಂ.ಕೆ‌.ಪ್ರಾಣೇಶ, ವಿಧಾನಸಭೆ ಸರಗಕಾರದ ಮುಖ್ಯ ಸಚೇತಕ ಅಶೋಕ ಪಟ್ಟಣ,ಸಚಿವೆ ಲಕ್ಷ್ಮಿ ಹೆಬ್ಬಾಳಕರ್, ಡಾ.ಜಿ.ಪರಮೇಶ್ವರ, ಕೆ.ಹೆಚ್.ಮುನಿಯಪ್ಪ ,ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಕೆ ಪಾಟೀಲ ಮತ್ತಿತರ ಗಣ್ಯರು ವೇದಿಕೆಯಲ್ಲಿ ಇದ್ದರು.

ಸನ್ಮಾನ: ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್,ಮುಖ್ಯ ವಿಧಾನಪರಿಷತ್ ಮಾಜಿ ಸಭಾಪತಿಗಳಾದ ಡಿ.ಹೆಚ್.ಶಂಕರಮೂರ್ತಿ,ವೀರಣ್ಣ ಮತ್ತಿಕಟ್ಟಿ, ಪ್ರೊ.ಬಿ.ಕೆ.ಚಂದ್ರಶೇಖರ, ವಿ.ಆರ್. ಸುದರ್ಶನ, ಬಿ.ಎಲ್.ಶಂಕರ್, ವಿಧಾನಸಭೆಯ ಮಾಜಿ ಸಭಾಧ್ಯಕ್ಷರುಗಳಾದ ಜಗದೀಶ್ ಶೆಟ್ಟರ್, ಕೆ.ಜಿ.ಬೋಪಯ್ಯ, ಕೆ.ಬಿ.ಕೋಳಿವಾಡ,ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಆಕರ್ಷಕ ಕಿನ್ನಾಳ ಚೌಕಿ ಕಲೆಯ ಸ್ಮರಣಿಕೆ ,ಮೈಸೂರು ಪೇಟ,ಶಾಲು,ಹಾರ ಹಾಕಿ ಸನ್ಮಾನಿಸಿ ಗೌರವಿಸಲಾಯಿತು.

ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು: ಮೂಡಬಿದಿರೆಯ ಆಳ್ವ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

emedialine

Recent Posts

371 (ಜೆ) ವಿಧಿಯ ನಿಬಂಧನೆಗಳ ಪರಿಣಾಮಕಾರಿ ಅನುμÁ್ಠನಕ್ಕೆ ಒತ್ತಾಯ

ಕಲಬುರಗಿ: ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿಯು, ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಚುನಾಯಿತ ಪ್ರತಿನಿಧಿಗಳು ಮತ್ತು ಸಚಿವರ ಸಭೆ ನಡೆಸಿ,…

7 hours ago

ಮರಗಮ್ಮ ದೇವಿ ಮೂರ್ತಿ ಗಂಗಾಸ್ನಾನ | ಎಂಟು ಗಂಟೆಗಳ ಕಾಲ ಮೆರವಣಿಗೆ

ಸುರಪುರ: ಇಲ್ಲಿಯ ರಂಗಂಪೇಟೆ-ತಿಮ್ಮಾಪುರದ ಆರಾಧ್ಯ ದೇವತೆ ಮರಗಮ್ಮ ದೇವಿಯ ನೂತನ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ದೇವಿಯ ಬೆಳ್ಳಿಯ ಮೂರ್ತಿ ಗಂಗಾಸ್ನಾನ…

7 hours ago

ಒತ್ತಡ ನಿಭಾಯಿಸಲು ಪರಿಹಾರ ಒದಗಿಸುವುದು ಯುವ ಸ್ಪಂದನೆ ಉದ್ದೇಶ

ಸುರಪುರ: ಯುವ ಸಬಲೀಕರಣ, ಅರೋಗ್ಯ ಜೀವನಶೈಲಿ,ಲೈಂಗಿಕತೆ ಮತ್ತು ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ನಿಭಾಯಿಸುತ್ತಿರುವ ಸವಾಲುಗಳು, ಭಾವನಾತ್ಮಕ ಸಮಸ್ಯೆಗಳು ಭಾವನೆಗಳ ನಿಭಾಯಿಸುವಿಕೆ,ನೆನಪಿನ…

7 hours ago

ಶಹಾಬಾದ: ಸಂಪೂರ್ಣತಾ ಅಭಿಯಾನ ಉತ್ಸವಕ್ಕೆ ಚಾಲನೆ

ಶಹಾಬಾದ: ನೀತಿ ಆಯೋಗವು ಮಾನವ ಅಭಿವೃದ್ಧಿ ಸೂಚಕಗಳಲ್ಲಿ ಹಿಂದುಳಿದ ತಾಲೂಕಗಳಿಗೆ ಆರೋಗ್ಯ, ಪೆÇೀಷಣೆ, ಕೃಷಿ ಮೇಲೆ ಕೇಂದ್ರೀಕರಿಸಿದ ಸಂಪೂರ್ಣತಾ ಅಭಿಯಾನ…

7 hours ago

ಗಿಡ-ಮರಗಳ ಸಂರಕ್ಷಣೆ ಮಾಡದಿದ್ದರೇ ಪ್ರಕೃತಿಗೆ ಗಂಡಾಂತರ ತಪ್ಪಿದ್ದಲ್ಲ

ಶಹಾಬಾದ: ಕೇವಲ ಒಂದು ದಿನ ವನಮಹೋತ್ಸವ ಪರಿಸರ ದಿನಾಚರಣೆಯಂತಹ ಕಾರ್ಯಕ್ರಮ ಮಾಡಿದರೆ ಸಾಲದು, ಬದಲಾಗಿ ಗಿಡ-ಮರಗಳ ಸಂರಕ್ಷಣೆ ಮಾಡುವುದು ಅವಶ್ಯವಾಗಿದೆ.…

7 hours ago

ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮ

ಶಹಾಬಾದ: ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು ಎಂದು ಕಾರ್ಮಿಕ ಪ್ರಧಾನ…

8 hours ago