ಕೊಲಂಬೋ: ಈಸ್ಟರ್ ಹಬ್ಬದ ನಿಮಿತ್ತ ಚರ್ಚ್‌ಗೆ ಪ್ರಾರ್ಥನೆ ಸಲ್ಲಿಸಲು ಬಂದಾಗ ಶ್ರೀಲಂಕಾದ ಮೂರು ಚರ್ಚ್, ಮೂರು ಫೈವ್‍ಸ್ಟಾರ್ ಹೋಟೆಲ್‍ಗಳು ಸೇರಿದಂತೆ ಒಟ್ಟು 6 ಕಡೆ ಸರಣಿ ಬಾಂಬ್ ಸ್ಫೋಟಕ್ಕೆ 160 ಮಂದಿ ಮಂದಿ ಮೃತಪಟ್ಟು, 275ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ.
ಶ್ರಿಲಂಕಾ ರಾಜಧಾನಿ ಕೊಲಂಬೋದ ಒಂದು ಚರ್ಚ್ ಮತ್ತು ಮೂರು ಹೊಟೇಲ್‌ಗಳನ್ನು ಗುರಿಯಾಗಿಸಿದ ದುಷ್ಕರ್ಮಿಗಳು, ಬೆಳಿಗ್ಗೆ ಮೊದಲ ಬಾಂಬ್ ಸ್ಪೋಟ ಮಾಡಿದ್ದಾರೆ. ಕೋಲಂಬೋ ಹೊರಗಡೆಯೂ ಎರಡು ಚರ್ಚ್ ಮೇಲೆ ದಾಳಿಕೋರರು ಬಾಂಬ್ ಸ್ಪೋಟಿಸಬೇಕೆಂದು ಪ್ಲಾನ್ ಮಾಡಿದ್ದರೆಂದು ಅಲ್ಲಿನ ಪೊಲೀಸರು ತಿಳಿಸಿದ್ದಾರೆ.
ಚರ್ಚ್ ಒಳಗಡೆಯಿದ್ದ ಬೆಂಚ್‍ಗಳು ಮುರಿದು ಹೋಗಿದೆ. ಚರ್ಚ್ ಒಳಗಡೆ ಎಲ್ಲಿ ನೋಡಿದರಲ್ಲಿ ರಕ್ತವೇ, ಛಿದ್ರ ಛಿದ್ರ ಮೃತದೇಹಗಳೇ ಕಾಣಸಿಗುತ್ತಿದೆ. ಈ ನಡುವೆ ಗಾಯಳುಗಳ ನರಳಾಟ, ತಮ್ಮವರನ್ನು ಕಳೆದುಕೊಂಡ ಜನರ ಆಕ್ರಂಧನ ಮುಗಿಲು ಮುಟ್ಟಿದೆ.
ಹಬ್ಬದ ಸಂಭ್ರಮದಲ್ಲಿ ಇದಾಗ ಈ ಕೃತ್ಯೆ ನಡೆದಿರುವುದರಿಂದ ಸಾವಿನ ಸಂಖ್ಯೆ ಹೆಚ್ಚುವ ಶಂಕೆ ವ್ಯಕ್ತವಾಗುತ್ತಿದೆ. ಕೃತ್ಯ ಯಾರು ನಡೆಸಿದ್ದಾರೆ ಎಂಬುದರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಘಟನಾ ಸ್ಥಳಕ್ಕೆ ರಕ್ಷಣಾ ಕಾರ್ಯಚರಣೆ ನಡೆಯುತಿದ್ದು, ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಯಲ್ಲಿ ಕರ್ನಾಟಕದ ಮಹಿಳೆಯ ಸಾವು
ದುರಂತದಲ್ಲಿ ಕರ್ನಾಟಕದ ಮಂಗಳೂರು ಮೂಲದ ಬೈಕಂಪಾಡಿಯ ಮಹಿಳೆ ರಝೀನಾ ಸಾವು. ಸಂಬಂಧಿಕರ ಭೇಟಿಗೆಂದು ಕೊಲಂಬೋಗೆ ತೆರಳಿದರು. ಪತಿ ಖಾದರ್ ಮತ್ತು ಸಂಬಂಧಿಕರ ಜೊತೆ ರೆಸ್ಟೋರೆಂಟ್ ನಲ್ಲಿ ಇದ್ದಾಗ ಘಟನೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಶ್ರೀಲಂಕಾ ಪ್ರಧಾನಿ ಟ್ವೀಟ್ ಮಾಡಿ ಘಟನೆಯನ್ನು ಖಂಡಿಸಿದ್ದಾರೆ.
ಶ್ರೀಲಂಕಾ ಪ್ರಧಾನಿ ರನಿಲ್ ವಿಕ್ರಮಸಿಂಘೆ ಈ ದಾಳಿಯನ್ನು ಖಂಡಿಸಿ, ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಭಯಪಡಬೇಡಿ ನಾವು ನಿಮ್ಮೊಂದಿಗೆ ಇದ್ದೇವೆ. ಈ ಸಮಯದಲ್ಲಿ ನಮಗೆ ಸಹಕರಿಸಿ ಎಂದು ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ. “ಇಂದು ನಮ್ಮ ಜನರ ಮೇಲೆ ನಡೆದಿರುವ ಹೇಡಿತನದ ದಾಳಿಗಳನ್ನು ಬಲವಾಗಿ ಖಂಡಿಸುತ್ತಿದ್ದೇನೆ. ಈ ದುರ್ಘಟನೆಯ ಸಮಯದಲ್ಲಿ ಎಲ್ಲಾ ಶ್ರೀಲಂಕಾದ ನಾಗರಿಕರು ಒಟ್ಟಾಗಿದ್ದು ನಮಗೆ ಸಹಕರಿಸಬೇಕು. ದಯವಿಟ್ಟು ಸುಳ್ಳು ವರದಿಗಳು ಹಾಗೂ ಊಹಾಪೋಹಗಳನ್ನು ಪ್ರಚಾರ ಮಾಡುವುದನ್ನು ತಪ್ಪಿಸಿ, ಈ ಪರಿಸ್ಥಿತಿಯನ್ನು ಸರಿಪಡಿಸಲು ಸರ್ಕಾರ ತಕ್ಷಣ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ” ಎಂದು ತಿಳಿಸಿದ್ದಾರೆ. ಅಲ್ಲದೆ ಸ್ಫೋಟ ಸಂಭವಿಸಿರುವ ಸ್ಥಳಗಳಲ್ಲಿ ರಕ್ಷಣಾ ಕಾರ್ಯಚರಣೆ ಮುಂದುವರಿದಿದ್ದು ಈ ಬಗ್ಗೆ ತುರ್ತು ಸಭೆಯನ್ನು ಕರೆಯಲಾಗಿದೆ ಎಂದು ಶ್ರೀಲಂಕಾ ಸರ್ಕಾರ ಟ್ವೀಟ್ ಮಾಡಿದೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…