ಬೆಳಗಾವಿ, ಸುವರ್ಣಸೌಧ,ಡಿಸೆಂಬರ್ ; ರೈತರಿಗೆ ತೂಕದಲ್ಲಿ ಮೋಸ ಆಗದಂತೆ ತಡೆಯಲು ಕಾರ್ಖಾನೆಗಳಲ್ಲಿ ಕಡ್ಡಾಯವಾಗಿ ಎಲೆಕ್ಟ್ರಾನಿಕ್ ಆಧಾರಿತ ತೂಕ ಮಷಿನ್ ಅಳವಡಿಸಲು ಕ್ರಮ ವಹಿಸಿ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಕಾನೂನು ಮಾಪನ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬೆಳಗಾವಿಯ ಸುವರ್ಣ ಸೌಧದಲ್ಲಿ ಆಹಾರ ಮತ್ತು ಕಾನೂನು ಮಾಪನ ಶಾಸ್ತ್ರ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬೆಳಗಾವಿ ಜಿಲ್ಲೆಯ ಎಲ್ಲಾ ತಾಲೂಕಿನ ಆಯ್ದ 100 ಜನ ಅಂಗಡಿಕಾರರ ಕುಂದು ಕೊರತೆ ಆಲಿಸಿದ ಸಚಿವರು ಸಾರ್ವಜನಿಕರ ದೂರು ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು ಪಡಿತರ ಅಕ್ಕಿ ಜೊತೆಗೆ, ಡಿಬಿಟಿ ಮೊತ್ತ ಫಲಾನುಭವಿಗಳಿಗೆ ನಿಯಮಾನುಸಾರ ಪ್ರತಿ ಮಾಹೆ ಜಮೆ ಮಾಡಿಸಬೇಕು. ಅರ್ಹ ಫಲಾನುಭವಿಗಳಿಗೆ ನಿಯಮಾನುಸಾರ ಪಡಿತರ ಚೀಟಿ ಅನುಮೋದನೆ ಮಾಡಲು ಆಹಾರ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಸಕ್ಕರೆ ಸಚಿವರಾದ ಶಿವಾನಂದ ಎಸ್ ಪಾಟೀಲ್, ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರದ ಶಾಸಕರಾದ ಲಕ್ಷಣ ಸವದಿ ಹಾಗೂ ಬೀಳಗಿ ಕ್ಷೇತ್ರದ ಶಾಸಕರಾದ ಜೆಟಿ ಪಾಟೀಲ್, ಆಹಾರ ಇಲಾಖೆಯ ಕಾರ್ಯದರ್ಶಿ, ಆಯುಕ್ತರು, ಕರ್ನಾಟಕ ಆಹಾರ ನಿಗಮ ವ್ಯವಸ್ಥಾಪಕ ನಿರ್ದೇಶಕರು, ಕಾನೂನು ಮಾಪನ ಶಾಸ್ತ್ರ ಇಲಾಖೆ ನಿಯಂತ್ರಕರು, ಆಹಾರ ಇಲಾಖೆ ಸಚಿವರ ಆಪ್ತ ಕಾರ್ಯದರ್ಶಿ, ವಿಶೇಷ ಅಧಿಕಾರಿಗಳು ಹಾಗೂ ಬೆಳಗಾವಿ , ಕಲಬುರ್ಗಿ ವಿಭಾಗದ ಆಹಾರ ಇಲಾಖೆಯ ಕಾನೂನು ಮಾಪನ ಶಾಸ್ತ್ರ ಇಲಾಖೆ ಅಧಿಕಾರಿಗಳು ಹಾಗೂ ಜಿಲ್ಲಾ ವ್ಯವಸ್ಥಾಪಕರು ಸಭೆಯಲ್ಲಿ ಉಪಸ್ಥಿತರಿದ್ದರು.
ವಾಡಿ (ಕಲಬುರಗಿ): ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಅವರ ವೃತ್ತದಲ್ಲಿರುವ ಬಾಬಾಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸಂವಿಧಾನ ಪೂರ್ವ ಪೀಠಿಕೆ ಓದುವ ಮೂಲಕ…
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…