ಬಿಸಿ ಬಿಸಿ ಸುದ್ದಿ

4 ಲಕ್ಷ ರೈತರ ಕೃಷಿ ಪಂಪ್ ಸೆಟ್‍ಗಳಿಗೆ ಮೂಲಭೂತ ಸೌಕರ್ಯ : ಇಂಧನ ಸಚಿವ ಕೆ.ಜೆ.ಜಾರ್ಜ್

ಬೆಂಗಳೂರು/ಬೆಳಗಾವಿ;  ರಾಜ್ಯದ 4 ಲಕ್ಷ ರೈತರ ಕೃಷಿ ಪಂಪ್ ಸೆಟ್‍ಗಳಿಗೆ ಸರ್ಕಾರದಿಂದ ಮೂಲಭೂತ ಸೌಕರ್ಯ ಕಲ್ಪಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದರು.

ಇಂದು ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಗುರುವಾರ ವಿಧಾನ ಸಭೆ ಪ್ರಶ್ನೋತ್ತರ ಕಲಾಪದಲ್ಲಿ ಶಾಸಕರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ನೊಂದಾಯಿಸಲ್ಪಟ್ಟ 500 ಮೀಟರ್ ವ್ಯಾಪ್ತಿಯೊಳಗಡೆ ಇರುವ ಪಂಪ್ ಸೆಟ್‍ಗಳಿಗೆ ವಿದ್ಯುತ್ ಸರಬರಾಜು ಕಂಪನಿಗಳಿಂದ ಮೂಲಭೂತ ಸೌಕರ್ಯ ಕಲ್ಪಿಸಲಾಗುವುದು. 500 ಮೀಟರ್‍ನಿಂದ ಆಚೆ ಇರುವ ಪಂಪ್ ಸೆಟ್‍ಗಳಿಗೆ ಕೇಂದ್ರ ಸರ್ಕಾರದ ಶೇಕಡ 30 ಹಾಗೂ ರಾಜ್ಯ ಸರ್ಕಾರ ಶೇಕಡ 50 ರಷ್ಟು ಸಬ್ಸಿಡಿ ನೀಡಿ, ಸೋಲಾರ್ ಪಂಪ್ ಸೆಟ್ ಅಳವಡಿಸಲು ಕ್ರಮವಹಿಸಲಾಗಿದೆ. 2023ನೇ ಸೆಪ್ಟೆಂಬರ್ 22ರ ನಂತರ ನೊಂದಾಯಿಸಲ್ಪಡುವ ಐಪಿ ಸೆಟ್‍ಗಳಿಗೆ ಮೂಲಸೌಕರ್ಯಗಳನ್ನು ರೈತರು ಸ್ವಯಂ-ಕಾರ್ಯನಿರ್ವಹಣೆಯಡಿ ತಾವೇ ಮಾಡಿಕೊಳ್ಳಬೇಕು ಎಂಬ ನಿಯಮವಿತ್ತು. ಇದನ್ನು ಮಾರ್ಪಡಿಸಿ ಸರ್ಕಾರವೇ ಮೂಲ ಸೌಕರ್ಯ ಒದಗಿಸುವ ಪ್ರಸ್ತಾವನೆಯನ್ನು ಸಚಿವ ಸಂಪುಟಕ್ಕೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಕೃಷಿಗೆ 7 ಗಂಟೆ ವಿದ್ಯುತ್ ನೀಡಲಾಗುತ್ತಿದೆ. ಪ್ರಸಕ್ತ ವರ್ಷದಲ್ಲಿ ಮಳೆ ಕೊರತೆಯಿಂದಾಗಿ ಜಲಮೂಲದಿಂದ ಉತ್ಪತ್ತಿಯಾಗುತ್ತಿದ್ದ ವಿದ್ಯುತ್ ಪ್ರಮಾಣ ಕಡಿಮೆಯಾಗಿದೆ. ಇದರೊಂದಿಗೆ ರಾಜ್ಯದ ವಿದ್ಯುತ್ ಬೇಡಿಕೆ 8000 ಮೆಗಾ ವ್ಯಾಟ್ ನಿಂದ 16500 ಮೆಗಾ ವ್ಯಾಟ್‍ಗೆ ಏರಿಕೆಯಾಗಿ, ವಿದ್ಯುತ್ ಅಭಾವ ಉಂಟಾಗಿತ್ತು. ಹೊರ ರಾಜ್ಯಗಳಿಂದ ಒಪ್ಪಂದ ಮಾಡಿಕೊಂಡು ವಿದ್ಯುತ್ ಖರೀದಿಸಲಾಗಿದೆ. ಇದರೊಂದಿಗೆ ರಾಜ್ಯದ ಉಷ್ಣ ವಿದ್ಯುತ್ ಸ್ಥಾವರಗಳಲ್ಲಿಯೂ ಹೆಚ್ಚಿನ ವಿದ್ಯುತ್ ಉತ್ಪಾದನೆ ಮಾಡುತ್ತಿದ್ದು, ಸದ್ಯ ರಾಜ್ಯದಲ್ಲಿ ಯಾವುದೇ ವಿದ್ಯುತ್ ಕೊರೆತೆ ಇಲ್ಲ. ಅಗತ್ಯಕ್ಕಿಂತ ಹೆಚ್ಚಿನ ವಿದ್ಯುತ್ ಲಭ್ಯವಿದೆ ಸಚಿವ ಕೆ.ಜೆ.ಜಾರ್ಜ್ ಸ್ಪಷ್ಟಪಡಿಸಿದರು.

2004ರಲ್ಲಿ ಹೆಚ್.ಡಿ.ರೇವಣ್ಣ ಅವರು ಇಂಧನ ಸಚಿವರಿದ್ದಾಗ 60 ಸಾವಿರ ಹಾಗೂ 2008ರಲ್ಲಿ ಶೋಭಾ ಕರಂದ್ಲಾಜೆ ಅವರು ಇಂಧನ ಸಚಿವರಿದ್ದಾಗ 1.50 ಲಕ್ಷ ಕೃಷಿ ಪಂಪ್ ಸೆಟ್‍ಗಳನ್ನು ಅಕ್ರಮ -ಸಕ್ರಮದಡಿ ಕ್ರಮಬದ್ದಗೊಳಿಸಲು ತೀರ್ಮಾನಿಸಲಾಗಿತ್ತು. ಅಂದಿನಿಂದಲೂ ಸರ್ಕಾರಗಳು ಅನಧಿಕೃತ ಕೃಷಿ ಪಂಪ್ ಸೆಟ್‍ಗಳನ್ನು ಸಕ್ರಮಗೊಳಿಸುವುದನ್ನು ಮುಂದುವರಿಸುಕೊಂಡು ಬಂದಿವೆ. ರಾಜ್ಯದಲ್ಲಿ ವಿದ್ಯುತ್ ಪರಿವರ್ತಕಗಳ ಕೊರತೆ ಇಲ್ಲ. ಹಾನಿಯಾದ ವಿದ್ಯುತ್ ಪರಿವರ್ತಕಗಳನ್ನು ನಿಗದಿತ ಸಮಯದಲ್ಲಿ ಬದಲಾವಣೆ ಮಾಡಿಕೊಡಲಾಗುತ್ತಿದೆ. ಆದರೂ ಕೆಲವು ಕಡೆ ಪರಿವರ್ತಕದ ಸಾಮಥ್ರ್ಯಕ್ಕಿಂತ ಹೆಚ್ಚಿನ ಒತ್ತಡ ಬೀಳುವುದರಿಂದ ಪದೇ ಪದೇ ಪರಿವರ್ತಕಗಳು ಹಾನಿಗೆ ಒಳಗಾಗುತ್ತಿವೆ ಎಂದರು.

ರೈತರು ತಮ್ಮ ಕೃಷಿ ಪಂಪ್ ಸೆಟ್‍ಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿಕೊಳ್ಳಲು ವಿದ್ಯುತ್ ಕಂಬ, ಪರಿವರ್ತಕ, ವಿದ್ಯುತ್ ತಂತಿ ಹಾಗೂ ಸೇವಾ ಶುಲ್ಕಗಳನ್ನು ವಿದ್ಯುತ್ ಸರಬರಾಜು ಕಂಪನಿಗಳಿಗೆ ನೀಡಬೇಕು. ಇದಕ್ಕೆ ಸುಮಾರು 2 ರಿಂದ 3 ಲಕ್ಷ ರೂಪಾಯಿಗಳು ಖರ್ಚಾಗುತ್ತವೆ. ಇದು ರೈತರಿಗೆ ಹೊರೆಯಾಗುವುದರಿಂದ ಸರ್ಕಾರಕವೇ ಈ ಎಲ್ಲಾ ವೆಚ್ಚಗಳನ್ನು ಭರಿಸಿ ವಿದ್ಯುತ್ ಸಂಪರ್ಕ ಕಲ್ಲಿಸಿಕೊಡಬೇಕು ಎಂದು ಕಾಗವಾಡ ಶಾಸಕ ಭರಮಗೌಡ ಅಲಗೌಡ ಕಾಗೆ ಇಂಧನ ಸಚಿವರಲ್ಲಿ ಕೋರಿದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

14 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

24 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

24 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

24 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago