ಬಿಸಿ ಬಿಸಿ ಸುದ್ದಿ

ಬೆಂಗಳೂರು ರಸ್ತೆ, ಚರಂಡಿ ಅಭಿವೃದ್ಧಿಗೆ 800 ಕೋಟಿ ರೂಪಾಯಿ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ

ಬೆಂಗಳೂರು/ಬೆಳಗಾವಿ; ಬೃಹತ್ ಬೆಂಗಳೂರಿನ ರಸ್ತೆಗಳು ಮತ್ತು ಚರಂಡಿಗಳ ಅಭಿವೃದ್ಧಿಗಾಗಿ ಪ್ರಸಕ್ತ 2023-24ನೇ ಸಾಲಿನಲ್ಲಿ 800 ಕೋಟಿ ರೂಪಾಯಿಗಳನ್ನು ಸರಕಾರ ಮೀಸಲಿಟ್ಟಿದೆ ಎಂದು ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ವಿಧಾನ ಪರಿಷತ್‍ನಲ್ಲಿ ಹೇಳಿದರು.
ಸದಸ್ಯ ಎಚ್.ಎಸ್.ಗೋಪಿನಾಥ್ ಅವರ 1010ನೇ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಅವರು, ಬೆಂಗಳೂರಿನ ರಸ್ತೆ ಮತ್ತು ಚರಂಡಿಗಳ ಸ್ಥಿತಿಯು ಅದರ ಬಳಕೆ ಮತ್ತು ನೈಸರ್ಗಿಕ ಅಂಶಗಳನ್ನು ಆಧರಿಸಿರುತ್ತದೆ. ಆದ್ದರಿಂದ ಕಾಲಕಾಲಕ್ಕೆ ನಿರ್ವಹಣೆ ಮತ್ತು ದುರಸ್ತಿ ಕಾರ್ಯ ನಡೆಸಬೇಕಾಗುತ್ತದೆ ಎಂದರು.

2023-24ನೇ ಸಾಲಿನಲ್ಲಿ ಕನಿಷ್ಠ ನಿರ್ವಹಣಾ ವೆಚ್ಚವಿರುವ ವೈಟ್ ಟಾಪಿಂಗ್ ಕಾಮಗಾರಿಗಳನ್ನು ನಿರ್ವಹಿಸಲು 800 ಕೋಟಿ ರೂಪಾಯಿಗಳ ಪ್ರಸ್ತಾವನೆಯು ಸರಕಾರದ ಪರಿಶೀಲನೆಯಲ್ಲಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸ್ವಂತ ಸಂಪನ್ಮೂಲದಲ್ಲಿ 1000 ಕೋಟಿ ರೂಪಾಯಿಗಳನ್ನು ಎಸ್ಕ್ರೋ ಖಾತೆಯಲ್ಲಿ ಇರಿಸಿ ವೈಟ್ ಟಾಪಿಂಗ್ ಕಾಮಗಾರಿಗಳನ್ನು ನಿರ್ವಹಿಸಲು ಕ್ರಮ ವಹಿಸಲಾಗುತ್ತಿದೆ. ರಸ್ತೆ ಮತ್ತು ಪಾದಚಾರಿ ಮಾರ್ಗಗಳ ನಿರ್ವಹಣೆಗಾಗಿ ಪ್ರತಿ ವಾಡ್ರ್ಗೆ ರೂ.75 ಲಕ್ಷ ರೂ. ಅನುದಾನ ನೀಡಲಾಗಿದೆ.

ಅಮೃತ ನಗರೋತ್ಥಾನ ಯೋಜನೆಯಡಿ 2501.16 ಕೋಟಿ ರೂ. ವೆಚ್ಚದಲ್ಲಿ 1705.32 ಕಿಮೀ ವಾರ್ಡ್ ರಸ್ತೆಗಳನ್ನು ಮತ್ತು 641.09 ಕೋಟಿ ರೂ.ಗಳಲ್ಲಿ ಆರ್ಟಿರಿಯಲ್ ಮತ್ತು ಸಬ್ ಆರ್ಟಿರಿಯಲ್ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿಗಳು ಉತ್ತರಿಸಿದರು.

ಸಕ್ಷಮ ಪ್ರಾಧಿಕಾರಿಗಳಿಂದ ಅನುಮೋದನೆ ಪಡೆದು ಮೇಕೆದಾಟು ಯೋಜನೆ ಅನುಷ್ಠಾನ ಕ್ಕೆ ಕ್ರಮ;  ಮೇಕೆದಾಟು ಯೋಜನೆಗೆ ಸಕ್ಷಮ ಪ್ರಾಧಿಕಾರಗಳಿಂದ ಅಗತ್ಯ ತೀರುವಳಿ ಅನುಮೋದನೆ ಪಡೆದು ಯೋಜನೆಯನ್ನು ಅನುಷ್ಠಾನಗೊಳಿಸಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ವಿಧಾನ ಪರಿಷತ್‍ನಲ್ಲಿ ಸದಸ್ಯ ಟಿ.ಎ.ಶರವಣ ಅವರ ಚುಕ್ಕೆ ಗುರುತಿನÀ ಪ್ರಶ್ನೆಗೆ ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿಗಳು, ಮೇಕೆದಾಟು ಯೋಜನೆಗೆ ಇದುವರೆಗೆ ಯಾವುದೇ ಭೂಮಿಯನ್ನು ವಶಪಡಿಸಿಕೊಂಡಿರುವುದಿಲ್ಲ. ಕರ್ನಾಟಕ ಮತ್ತು ತಮಿಳುನಾಡು ಅಂತರ ರಾಜ್ಯ ಗಡಿಯಲ್ಲಿರುವ ಸಿಡಬ್ಲ್ಯೂಸಿ ಬಿಳಿಗುಂಡ್ಲುವಿನಲ್ಲಿ ಜುಲೈ 2023ರಿಂದ ನವೆಂಬರ್ 2023ರವರೆಗೆ 10.658 ಟಿಎಂಸಿ ನೀರನ್ನು ಹರಿಸಲಾಗಿದೆ. ಸಂಕಷ್ಟ ಜಲ ವರ್ಷಗಳಲ್ಲಿ ನೀರಿನ ಹಂಚಿಕೆ ಕುರಿತು ಸೂತ್ರ ರೂಪಿಸುವ ಬಗ್ಗೆ ಕಾವೇರಿ ಜಲ ನಿಯಂತ್ರಣಾ ಸಮಿತಿಯ ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರದ ಸಭೆಗಳಲ್ಲಿ ಚರ್ಚಿಸಲಾಗುತ್ತಿದ್ದು ಸಂಕಷ್ಟ ಹಂಚಿಕೆ ಸೂತ್ರವು ಅಂತಿಮವಾಗಬೇಕಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.

ಪ್ರಸ್ತುತ ಜಲವರ್ಷ 2023-24 ಆರಂಭದಿಂದಲೂ ಸಂಕಷ್ಟ ಜಲ ವರ್ಷವಾಗಿದ್ದು ಸಿಡಬ್ಲ್ಯೂಆರ್‍ಸಿ ಹಾಗೂ ಸಿಡಬ್ಲ್ಯುಎಂಎ ಸಭೆಗಳಲ್ಲಿ ಕಾವೇರಿ ಜಲಾನಯನಗಳ ಜಲಾಶಯಗಳಲ್ಲಿ ಕಳೆದ 30 ವರ್ಷಗಳ ಸರಾಸರಿ ಒಳಹರಿವು, ಕಾಲಕಾಲಕ್ಕೆ ಉಂಟಾದ ಮಳೆಯ ಪ್ರಮಾಣ/ಕೊರತೆ, ಕಣಿವೆಯಲ್ಲಿನ ಪ್ರಮುಖ ಜಲಾಶಯಗಳಲ್ಲಿನ ಶೇಖರಣೆ ಒಳಹರಿವು/ಹೊರಹರಿವಿನ ಪರಿಸ್ಥಿತಿ, ಹವಾಮಾನ ವಸ್ತುಸ್ಥಿತಿ, ಮಳೆಯ ಮುನ್ಸೂಚನೆ, ರಾಜ್ಯಗಳಲ್ಲಿನ ಬೆಳೆ ಪ್ರದೇಶ, ನಿಂತ ಬೆಳೆಗಳ ಪರಿಸ್ಥಿತಿ, ಕುಡಿಯುವ ನೀರಿನ ಹಾಗೂ ಕೈಗಾರಿಕಾ ಅವಶ್ಯಕತೆಗಳು, ಇತ್ಯಾದಿ ಅಂಶಗಳ ಪರಿಶೀಲನೆ ನಡೆಸಿ ರಾಜ್ಯದ ಜಲಾಶಯಗಳಲ್ಲಿನ ಒಳಹರಿವಿನ ಕೊರತೆಯನ್ನು ಪರಿಗಣಿಸಿ ಅಂತರ ರಾಜ್ಯ ಗಡಿಯಲ್ಲಿರುವ ಡಿಡಬ್ಲ್ಯೂಸಿ ಬಿಳಿಗುಂಡ್ಲು ಮಾಪನ ಕೇಂದ್ರದಲ್ಲಿ ತಮಿಳುನಾಡು ರಾಜ್ಯಕ್ಕೆ ಹರಿಸಬೇಕಾದ ನೀರಿನ ಪ್ರಮಾಣಗಳ ಬಗ್ಗೆ ನಿರ್ದೇಶನಗಳನ್ನು ನೀಡಲಾಗಿದೆ ಎಂದು ಅವರು ತಿಳಿಸಿದರು.

ತಮಿಳುನಾಡು ರಾಜ್ಯವು ಪ್ರಸ್ತಕ ಜಲವರ್ಷ 2023-24ನೇ ಜಲವರ್ಷದಲ್ಲಿ ನ್ಯಾಯಾಧೀಕರಣದ ಆದೇಶದನ್ವಯ ತಮಿಳುನಾಡು ರಾಜ್ಯಕ್ಕೆ ಹರಿಯಬೇಕಿದ್ದ ಬಾಕಿ ನೀರಿನ ಪ್ರಮಾಣದ ಕುರಿತು 2023ರ ಆಗಸ್ಟ್ 14ರಂದು ಸರ್ವೋಚ್ಛ ನ್ಯಾಯಾಲಯದಲ್ಲಿ ಅರ್ಜಿಯನ್ನು ದಾಖಲಿಸಿತು. ಈ ಅರ್ಜಿಗೆ ಕರ್ನಾಟಕ ರಾಜ್ಯವು 2023ರ ಆಗಸ್ಟ್ 23ರಂದು ಸರ್ವೋಚ್ಛ ನ್ಯಾಯಾಲಯದಲ್ಲಿ ಸಲ್ಲಿಸಿರುವ ಪ್ರತಿ ಪ್ರಮಾಣ ಪತ್ರದಲ್ಲಿ ಪ್ರಸ್ತುತ ಜಲವರ್ಷ 2023-24 ಆರಂಭದಿಂದಲೂ ಸಂಕಷ್ಟ ವರ್ಷವಾಗಿದ್ದರೂ ಸಹ ಸರ್ವೋಚ್ಛ ನ್ಯಾಯಾಲಯದ 2018ರ ಆದೇಶದಲ್ಲಿ ಮಾರ್ಪಡಿಸಿರುವಂತೆ ಕಾವೇರಿ ಜಲ ವಿವಾದ ನ್ಯಾಯಾಧೀಕರಣ ಆದೇಶದಲ್ಲಿ ಸಾಮಾನ್ಯ ಜಲ ವರ್ಷಕ್ಕೆ ನಿಗದಿಪಡಿಸಿರುವ ಪ್ರಮಾಣದಂತೆ ನೀರು ಹರಿಸಬೇಕೆಂದು ತಮಿಳುನಾಡು ರಾಜ್ಯವು ಕೋರಿರುವುದನ್ನು ರಾಜ್ಯವು ವಿರೋಧಿಸಿರುತ್ತದೆ.

ಈ ಪ್ರಕರಣದಲ್ಲಿ ಕರ್ನಾಟಕ ರಾಜ್ಯವು ಸಹ ಅರ್ಜಿಯನ್ನು ಮಾನ್ಯ ಸರ್ವೋಚ್ಛ ನ್ಯಾಯಾಲಯದಲ್ಲಿ ಸಲ್ಲಿಸಿದೆ. ರಾಜ್ಯದ ಕಾನೂನು ತಂಡವು ನ್ಯಾಯಾಲಯದಲ್ಲಿ ರಾಜ್ಯದ ಪ್ರಸ್ತುತ ಜಲ ಸಂಕಷ್ಟದ ಕುರಿತು ಪ್ರತಿಪಾದಿಸಿದೆ. ಕರ್ನಾಟಕದ ಜಲಾಯಶಯಗಳಲ್ಲಿ ಕಡಿಮೆ ಪ್ರಮಾಣದ ನೀರಿನ ಶೇಖರಣೆ ಹಾಗೂ ಕಡಿಮೆ ಒಳ ಹರಿವು ಸೇರಿದಂತೆ ಹಲವು ಅಂಶಗಳನ್ನು ರಾಜ್ಯವು ನ್ಯಾಯಾಲಯದ ಮುಂದೆ ಪ್ರತಿಪಾದಿಸಿದೆ.

ಕೇಂದ್ರ ಸರ್ಕಾರ ಹಾಗೂ ರಾಜ್ಯಗಳು ಮಂಡಿಸಿದ ವಾದಗಳನ್ನು ಆಲಿಸಿ ಸಿಡಬ್ಲ್ಯೂಆರ್‍ಸಿ ಸಿಡಬ್ಲ್ಯೂಎಂಎ ಇವುಗಳಲ್ಲಿ ನೀರಾವರಿ ಕೃಷಿ ಇತ್ಯಾದಿ ವಿಷಯಗಳಲ್ಲಿ ಪರಿಣಿತರು ಇರುವುದನ್ನು ಉಲ್ಲೇಖಿಸಿ ಅದರ ನಿರ್ದೇಶನಗಳನ್ನು ನಿರಾಕರಿಸಲು ಕಾರಣವಿಲ್ಲವೆಂದು ಹಾಗೂ ಸಿಡಬ್ಲ್ಯೂಎಂಎ ನಿರ್ದೇಶನಗಳನ್ನು ಕರ್ನಾಟಕವು ಪಾಲಿಸಿದೆ ಎಂದು ಸಿಡಬ್ಲ್ಯೂಎಂಯು ಸಲ್ಲಿಸಿದ ಅಫಿಡವಿಟ್‍ನಲ್ಲಿಯ ಅಂಶಗಳನ್ನು ಪರಿಗಣಿಸಿ ಸರ್ವೋಚ್ಚ ನ್ಯಾಯಾಲಯವು 2023ರ ಸೆಪ್ಟೆಂಬರ್ 21ರಂದು ಆದೇಶದಲ್ಲಿ ಪ್ರಕರಣಕ್ಕೆ ಸಂಬಂಧಿಸಿದ ತಮಿಳುನಾಡು ರಾಜ್ಯದ ಅರ್ಜಿಯನ್ನು ತಿರಸ್ಕರಿಸಿ ಇತ್ಯರ್ಥಗೊಳಿಸಿದೆ ಎಂದು ಉಪ ಮುಖ್ಯಮಂತ್ರಿಗಳು ತಿಳಿಸಿದರು.

ಬೆಂಗಳೂರನ್ನು ವಾಸಯೋಗ್ಯ ನಗರವಾಗಿಸಲು ಕ್ರಮ: ಬೆಂಗಳೂರನ್ನು ಜಾಗತಿಕ ಮಟ್ಟದ ವಾಸಯೋಗ್ಯ ನಗರವನ್ನಾಗಿ ರೂಪಿಸಲು ಉದ್ದೇಶಿಸಲಾಗಿದೆ ಎಂದು ವಿಧಾನ ಪರಿಷತ್‍ನಲ್ಲಿ ಹೇಳಿದರು.

ಸದಸ್ಯೆ ಭಾರತಿ ಶೆಟ್ಟಿಯವರ 122ನೇ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬೆಂಗಳೂರು ದಿನೇ ದಿನೇ ಬೆಳೆಯುತ್ತಿರುವ ಮಹಾನಗರ. ಸಹಜವಾಗಿ ಸಂಚಾರ ದಟ್ಟಣೆ ಹೆಚ್ಚುತ್ತಿದೆ. ಕಸ ವಿಲೇವಾರಿಯದ್ದು ದೊಡ್ಡ ದಂಧೆಯಾಗಿದೆ. ಇದಕ್ಕೆಲ್ಲ ಕಡಿವಾಣ ಹಾಕಲಾಗುತ್ತಿದೆ. ಬೆಂಗಳೂರಿನ ಘನತಾಜ್ಯ ನಿರ್ವಹಣೆಗಾಗಿ ಕನಿಷ್ಟ ಮೂರು ದಿಕ್ಕುಗಳಲ್ಲಿ ಸುಮಾರು ತಲಾ 100 ಎಕರೆ ಪ್ರದೇಶದಲ್ಲಿ ಎಲ್ಲಾ ಬಗೆಯ ತ್ಯಾಜ್ಯಗಳ ಸಂಸ್ಕರಣಾ ಘಟಕಗಳನ್ನು ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಗಮ ನಿಯಮಿತದ ಮೂಲಕ ಸ್ಥಾಪಿಸಲು ಯೋಜಿಸಲಾಗಿದೆ ಎಂದು ತಿಳಿಸಿದರು.

ಬೆಂಗಳೂರನ್ನು ಉನ್ನತ ಮಟ್ಟಕ್ಕೆ ವಿಸ್ತರಿಸುವ ಯೋಚನೆಯಡಿ ಈಗಾಗಲೇ ಬ್ರ್ಯಾಂಡ್ ಬೆಂಗಳೂರು ಪರಿಕಲ್ಪನೆಯನ್ನು ಘೋಷಿಸಲಾಗಿದೆ. ಈ ಯೋಜನೆಗೆ ಸಂಬಂಧಿಸಿದಂತೆ 70,000 ಕ್ಕು ಹೆಚ್ಚು ಅಭಿಪ್ರಾಯ ಸಲಹೆಗಳು ನಾಗರಿಕರು ಮತ್ತು ತಜ್ಞರಿಂದ ಆನ್‍ಲೈನ್ ಮೂಲಕ ಸ್ವೀಕೃತಗೊಂಡಿವೆ.

ಬೆಂಗಳೂರಿನ ವಾಹನ ದಟ್ಟನೆ ತಪ್ಪಿಸಲು ಒಟ್ಟು 25 ಜಂಕ್ಷನ್‍ಗಳನ್ನು ಅಭಿವೃದ್ಧಿಪಡಿಸುವ 27.90 ಕೋಟಿ ರೂಗಳ ವೆಚ್ಚದ ಕಾಮಗಾರಿ ಪ್ರಗತಿಯಲ್ಲಿದೆ.

ಬೆಂಗಳೂರು ಈಗ ಉತ್ತರದ ಕಡೆಗೆ ಹೆಚ್ಚು ಅಭಿವೃದ್ಧಿ ಹೊಂದುತ್ತಿದೆ. ಹಾಗಾಗಿ ತುಮಕೂರು ಸೇರಿದಂತೆ ನಾನಾ ಭಾಗಗಳ ವಾಹನಗಳು ಅಧಿಕವಾಗಿರುವುದರಿಂದ ವಾಹನ ದಟ್ಟಣೆ, ಸಂಚಾರ ದಟ್ಟಣೆ ಹೆಚ್ಚಾಗಿದೆ. ಇವುಗಳಿಗೆಲ್ಲ ಕಡಿವಾಣ ಹಾಕಲು ಜನರು-ಜನಪ್ರತಿನಿಧಿಗಳ ಸಲಹ ಮೇರೆಗೆ ಪ್ರಾಯೋಗಿಕ ಕಾರ್ಯಕ್ರಮ ರೂಪಿಸಲು ಸರಕಾರ ಯೋಚಿಸಿದೆ. ಜೊತೆಗೆ ಪ್ರವಾಸೋದ್ಯಮ ತಾಣವಾಗಿ ಬೆಂಗಳೂರಿನ ಅಭಿವೃದ್ಧಿ ಕುರಿತು ಚಿಂತನೆ ನಡೆದಿದೆ ಎಂದರು.

ಸರಗಳ್ಳತನ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಭಾರತಿ ಶೆಟ್ಟಿಯವರ ಪ್ರಶ್ನೆಗೆ ಉತ್ತರಿಸಿದ ಅವರು, ಗೃಹ ಸಚಿವರು ಮತ್ತು ತಾವು ಸೇರಿ ಈ ಬಗ್ಗೆ ಚಿಂತನೆ ನಡೆಸಿದ್ದೇವೆ. ಜನದಟ್ಟಣೆ ಇರುವಲ್ಲಿ ಸಿಸಿ ಕ್ಯಾಮೆರಾಗಳು, ಪೆÇಲೀಸ್ ಕಣ್ಗಾವಲು ಹೆಚ್ಚಿಸಿದ್ದೇವೆ ಎಂದು ಉಪ ಮುಖ್ಯಮಂತ್ರಿಗಳು ವಿವರಿಸಿದರು.

ಇದೆ ವೇಳೆ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ಅವರು ಮಾತನಾಡಿ, ಬೆಂಗಳೂರಿನಾದ್ಯಂತ 7,500 ಎಚ್.ಡಿ.ಗುಣಮಟ್ಟದ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಸರಗಳ್ಳತನ, ಹಲ್ಲೆ, ದರೋಡೆ ಮತ್ತಿತರ ಅಪರಾಧ ಕೃತ್ಯಗಳ ಪತ್ತೆ ಕ್ರಮದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸುತ್ತೇವೆ ಎಂದು ತಿಳಿಸಿದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

8 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

18 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

18 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

18 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago