ಅನುದಾನಿತ ಶಾಲಾ ಕಾಲೇಜುಗಳ ನೌಕರರಿಗೆ ಜ್ಯೋತಿ ಸಂಜೀವಿನಿ ವಿಸ್ತರಣೆಗೆ ಪರಿಶೀಲನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

0
9

ಬೆಂಗಳೂರು/ಬೆಳಗಾವಿ; ರಾಜ್ಯದಲ್ಲಿನ ಅನುದಾನಿತ ಶಾಲಾ-ಕಾಲೇಜುಗಳಲ್ಲಿನ ನೌಕರರಿಗೆ ಸಹ ಜ್ಯೋತಿ ಸಂಜೀವಿನಿ ಯೋಜನೆಯನ್ನು ವಿಸ್ತರಿಸುವ ಕುರಿತಂತೆ ರಾಜ್ಯದ ಹಣಕಾಸಿನ ಪರಿಸ್ಥಿತಿಯನ್ನು ನೋಡಿಕೊಂಡು ಪರಿಶೀಲನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ವಿಧಾನ ಪರಿಷತ್‍ನಲ್ಲಿ ತಿಳಿಸಿದರು.

ವಿಧಾನ ಪರಿಷತ್‍ನಲ್ಲಿ ಸದಸ್ಯೆ ಹೇಮಲತಾ ನಾಯಕ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ರಾಜ್ಯ ಸರ್ಕಾರವು ಸರ್ಕಾರಿ ನೌಕರರು ಮತ್ತು ಅವರ ಕುಟುಂಬದ ಅವಲಂಬಿತ ಸದಸ್ಯರುಗಳಿಗೆ ನಿರ್ಧಿಷ್ಟವಾಗಿ ಗುರುತಿಸಲಾಗಿರುವ ಏಳು ಮಾರಣಾಂತಿಕ ಖಾಯಿಲೆಗಳಾದ ಹೃದ್ರೋಗ, ಕ್ಯಾನ್ಸರ್, ನರರೋಗ, ಮೂತ್ರಪಿಂಡ ಮತ್ತು ಯೂರಿನರಿ ಚಿಕಿತ್ಸೆಗಳು, ನವಜಾತ ಶಿಶು ಹಾಗೂ ಚಿಕ್ಕಮಕ್ಕಳ ಖಾಯಿಲೆ, ಸುಟ್ಟಗಾಯ ಮತ್ತು ಅಪಘಾತಗಳಿಗೆ ಸಂಬಂಧಿಸಿದಂತೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ನೆಟ್‍ವರ್ಕ್ ಆಸ್ಪತ್ರೆಗಳೊಂದಿಗೆ ಒಡಂಬಡಿಕೆ ಮಾಡಿಕೊಂಡು ನಗದು ರಹಿತವಾಗಿ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸಲು ಜ್ಯೋತಿ ಸಂಜೀವಿನಿ ಯೋಜನೆಯನ್ನು 2015ರಿಂದ ಜಾರಿಗೊಳಿಸಿರುತ್ತದೆ. ಈ ಯೋಜನೆಯನ್ನು ಸರ್ಕಾರಿ ನೌಕರರಿಗೆ ಮಾತ್ರ ರೂಪಿಸಲಾಗಿದೆ. ಯಾವುದೇ ಅನುದಾನಿತ ನೌಕರರು ಯೋಜನೆಯ ವ್ಯಾಪ್ತಿಗೆ ಒಳಪಡುವುದಿಲ್ಲ. ಜ್ಯೋತಿ ಸಂಜೀವಿನಿ ಯೋಜನೆಯನ್ನು ಅನುದಾನಿತ ನೌಕರರಿಗೆ ವಿಸ್ತರಿಸುವ ಪ್ರಸ್ತಾವನೆ ಸರ್ಕಾರದ ಮುಂದೆ ಇರುವುದಿಲ್ಲ ಎಂದು ತಿಳಿಸಿದರು.

Contact Your\'s Advertisement; 9902492681

ಕರ್ನಾಟಕ ರಾಜ್ಯದಲ್ಲಿ ಅನುದಾನಿತ ಒಟ್ಟು 2686 ಪ್ರಾಥಮಿಕ ಶಾಲೆಗಳಲ್ಲಿ 11,677 ನೌಕರರು, 3756 ಪ್ರೌಢಶಾಲೆಗಳಲ್ಲಿ 24,383 ನೌಕರರು ಹಾಗೂ 821 ಪದವಿ ಪೂರ್ವ ಕಾಲೇಜುಗಳಲ್ಲಿ 5848 ನೌಕರರು ಕಾರ್ಯನಿರ್ವಹಿಸುತ್ತಿದ್ದು, ರಾಜ್ಯದ ಹಣಕಾಸಿನ ಪರಿಸ್ಥಿತಿಯನ್ನು ನೋಡಿಕೊಂಡು ಈ ಅನುದಾನಿತ ನೌಕರರನ್ನು ಈ ಯೋಜನೆಯ ವ್ಯಾಪ್ತಿಗೆ ಒಳಪಡಿಸುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here