ಬೆಂಗಳೂರು/ಬೆಳಗಾವಿ; ಕಳೆದ ಸರ್ಕಾರದ ಅವಧಿಯಲ್ಲಿ ಹುಬ್ಬಳ್ಳಿಗೆ ಮಂಜೂರಾಗಿದ್ದ ಪ್ರಾದೇಶಿಕ ಕ್ಯಾನ್ಸರ್ ಚಿಕಿತ್ಸಾ ಕೇಂದ್ರವನ್ನು ಬೆಳಗಾವಿಗೆ ವರ್ಗಾಯಿಸಲಾಗಿದೆ. ಶಾಸಕರ ಒತ್ತಾಯದ ಹಿನ್ನಲೆಯಲ್ಲಿ ಹುಬ್ಬಳ್ಳಿಯಲ್ಲೂ ಪ್ರಾದೇಶಿಕ ಕ್ಯಾನ್ಸರ್ ಚಿಕಿತ್ಸಾ ಕೇಂದ್ರ ಸ್ಥಾಪನೆ ಕುರಿತು ಹೊಸದಾಗಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸುವುದಾಗಿ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ.ಶರಣಪ್ರಕಾಶ ಆರ್ ಪಾಟೀಲ ಹೇಳಿದರು.
ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಗುರುವಾರ ವಿಧಾನ ಸಭೆ ಪ್ರಶ್ನೋತ್ತರ ಕಲಾಪದಲ್ಲಿ ಶಾಸಕರ ಪ್ರಶ್ನೆಗಳಿಗೆ ಅವರು ಉತ್ತರಿಸಿದರು.
ಹುಬ್ಬಳ್ಳಿಯ ಕಿಮ್ಸ್ (ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ)ನಲ್ಲಿ ಕ್ಯಾನ್ಸರ್ ಚಿಕಿತ್ಸೆಗಾಗಿ ಪ್ರತ್ಯೇಕ ವಿಭಾಗವಿದೆ. ಈ ವಿಭಾಗವನ್ನು ಮತ್ತಷ್ಟು ಬಲವರ್ಧನೆಗೊಳಿಸಲು ಸರ್ಕಾರ ಚಿಂತಿಸಿದೆ. ಕಿಮ್ಸ್‍ನಲ್ಲಿ ಕ್ಯಾನ್ಸರ್ ರೋಗಿಗಳಿಗೆ ಮೆಡಿಕಲ್, ಶಸ್ತ್ರ ಚಿಕಿತ್ಸೆ, ವಿಕಿರಣ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಈ ಎಲ್ಲಾ ವಿಭಾಗಗಲ್ಲಿ ತಜ್ಞ ವೈದ್ಯರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕ್ಯಾನ್ಸರ್ ವಿಭಾಗಕ್ಕೆ ಅಗತ್ಯವಿರುವ ಯಂತ್ರೋಪಕರಣ ಹಾಗೂ ಮಾನವ ಸಂಪನ್ಮೂಲ ಒದಗಿಸಿ ಮತ್ತಷ್ಟು ಬಲವರ್ಧನೆಗೊಳಿಸಲಾಗುವುದು ಎಂದು ಸಚಿವ ಡಾ.ಶರಣಪ್ರಕಾಶ ಆರ್ ಪಾಟೀಲ ಹೇಳಿದರು.
ಹುಬ್ಬಳ್ಳಿ ಉತ್ತರ ಕರ್ನಾಟಕದ ಪ್ರಮುಖ ನಗರವಾಗಿದ್ದು, ಸುತ್ತಮುತ್ತಲಿನ ಜಿಲ್ಲೆಗಳ ರೋಗಿಗಳು ಚಿಕಿತ್ಸೆ ಹರಸಿ ಬರುತ್ತಾರೆ. ಇಲ್ಲಿ ಪ್ರಾದೇಶಿಕ ಕ್ಯಾನ್ಸರ್ ಚಿಕಿತ್ಸೆ ಕೇಂದ್ರ ತೆರೆದು, ರಕ್ತ, ಮೂಳೆ ಹಾಗೂ ಮಕ್ಕಳ ಕ್ಯಾನ್ಸರ್ ಚಿಕಿತ್ಸೆಗೆ ಅನುಕೂಲ ಮಾಡಕೊಡಬೇಕು ಎಂದು ಶಾಸಕ ಮಹೇಶ್ ಟೆಂಗಿನಕಾಯಿ ಸಚಿವರಲ್ಲಿ ಕೋರಿದರು. ಇದಕ್ಕೆ ಉಪಸಭಾಪತಿ ರುದ್ರಪ್ಪ ಲಮಾಣಿ, ಶಾಸಕರಾದ ಅರವಿಂದ ಬೆಲ್ಲದ್, ಕೋನರೆಡ್ಡಿ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಯ ಶಾಸಕರು ಧ್ವನಿಗೂಡಿಸಿದರು.
ಸಭಾಧ್ಯಕ್ಷ ಯು.ಟಿ.ಖಾದರ್ ಹುಬ್ಬಳ್ಳಿ ಹಾಗೂ ಮಂಗಳೂರಿನಲ್ಲಿ ಪ್ರಾದೇಶಿಕ ಕ್ಯಾನ್ಸರ್ ಚಿಕಿತ್ಸೆ ಕೇಂದ್ರ ತೆರೆಯುವುದು ಅಗತ್ಯವಿದೆ. ಕೂಡಲ ಸರ್ಕಾರ ಈ ಕುರಿತು ಕ್ರಮ ಕೈಗೊಳ್ಳುವಂತೆ ಸಚಿವರಿಗೆ ಸೂಚಿಸಿದರು. ಸಚಿವ ಡಾ.ಶರಣಪ್ರಕಾಶ ಆರ್ ಪಾಟೀಲ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಆರ್ಥಿಕ ಇಲಾಖೆ ಪ್ರಸ್ತಾವನೆ ಸಲ್ಲಿಸುವುದಾಗಿ ತಿಳಿಸಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…