ಸುರಪುರ:ನಗರದಲ್ಲಿರುವ ಖಾಸಗಿ ವೈದ್ಯಕೀಯ ಪ್ರಯೋಗಾಲಯ ಮತ್ತು ಖಾಸಗಿ ಕ್ಲಿನಿಕ್‍ಗಳ ಮೇಲೆ ತಾಲೂಕು ಆರೋಗ್ಯಾಧಿಕಾರಿ ಡಾ:ಆರ್.ವಿ.ನಾಯಕ ನೇತೃತ್ವದ ತಂಡ ದಾಳಿ ನಡೆಸಿ ಪರವಾನಿಗೆ ತಪಾಸಣೆ ನಡೆಸಲಾಗಿದೆ.
ಈ ಕುರಿತು ತಾಲೂಕು ಆರೋಗ್ಯಾಧಿಕಾರಿ ಡಾ:ಆರ್.ವಿ ನಾಯಕ ಅವರು ಮಾಹಿತಿ ನೀಡಿ, ಕೆಂಭಾವಿ ರಸ್ತೆಯಲ್ಲಿನ ಪಾಟೀಲ್ ಡೈಗ್ನೋಸ್ಟಿಕ್ ಸೆಂಟರ್ ಮೇಲೆ ದಾಳಿ ನಡೆಸಿ ಕರ್ನಾಟಕ ಖಾಸಗಿ ವೈದ್ಯಕೀಯ ಸ್ಥಾಪನೆ (ಕೆ.ಪಿ.ಎಮ್.ಇ) ಕಾಯ್ದೆ ಅಡಿಯಲ್ಲಿ ಪರವಾನಿಗೆ ಪಡೆಯದೆ ಇರುವುದನ್ನು ಪರಿಶೀಲಿಸಿ ಸೀಜ್ ಮಾಡಲಾಗಿದೆ.ಅಲ್ಲದೆ ಡಾ:ವಿ.ಎಲ್.ಚೌದರಿ ಅವರು ಕೆ.ಪಿ.ಎಮ್.ಇ ಕಾಯ್ದೆಯ ಪರವಾನಿಗೆ ನವಿಕರಣಗೊಳಿಸಿರದ ಕಾರಣ ಅವರಿಗೆ ನೋಟಿಸ್ ನೀಡಲಾಗಿದೆ,ಅಲ್ಲದೆ ತಿಮ್ಮಾಪುರದ ಒಂದು ಖಾಸಗಿ ಕ್ಲಿನಿಕ್‍ಗೂ ಪರವಾನಿಗೆ ಪಡೆಯಲು ಒಂದು ವಾರಗಳ ಕಾಲಾವಕಾಶ ನೀಡಿ ನೋಟಿಸ್ ನೀಡಲಾಗಿದೆ ಎಂದು ತಿಳಿಸಿದರು.
ಅಲ್ಲದೆ ಸುರಪುರ ಮತ್ತು ಹುಣಸಗಿ ತಾಲೂಕಿನಾದ್ಯಂತ ಇರುವ ಅರ್ಹತೆ ಹೊಂದಿರುವ ವೈದ್ಯರು ನಡೆಸುವ ಖಾಸಗಿ ಕ್ಲೀನಿಕ್‍ಗಳಿಗೆ ಕಡ್ಡಾಯವಾಗಿ ಪಲೊಷನ್ ಬೋರ್ಡ್ ಲೈಸೆನ್ಸ್,ಮ್ಯಾನೆಜ್ಮೆಂಟ್ ಲೈಸೆನ್ಸ್ ಹಾಗೂ ಕೆ.ಪಿ.ಎಮ್.ಇ ಲೈಸೆನ್ಸ್ ಕಡ್ಡಾಯವಾಗಿ ಪಡೆದುಕೊಳ್ಳಬೇಕು ಎಂದು ಈ ಮೂಲಕ ಸೂಚಿಸಲಾಗುತ್ತಿದೆ ಎಂದು ತಿಳಿಸಿದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…