ಬೆಳಗಾವಿ: 2023-24ನೇ ಸಾಲಿನ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‍ಡಿಬಿ)ಯ ಯೋಜನೆಯ ಕಲಬುರಗಿ ಜಿಲ್ಲಾ ಸಲಹಾ ಸಮಿತಿ ಸಭೆಯಲ್ಲಿ ಮೈಕ್ರೋ ಮತ್ತು ಮ್ಯಾಕ್ರೋ ಅಡಿಯ ಏಳು ಕಾಮಗಾರಿಗಳ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಯಿತು.
ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಗುರುವಾರ ಜಿಲ್ಲಾ ಸಲಹಾ ಸಮಿತಿ ಸಭೆಯ ಅಧ್ಯಕ್ಷರಾದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅಂಗೀಕಾರ ದೊರೆತಿದೆ.
2023-24ನೇ ಸಾಲಿನ ರೂ. 50878.48 ಲಕ್ಷಗಳ ಮೈಕ್ರೋ ಅನುದಾನದ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಯಿತು.
2023-24ನೇ ಸಾಲಿನ ರೂ. 21805.06 ಲಕ್ಷಗಳ ಮ್ಯಾಕ್ರೋ ಅನುದಾನದ ಕ್ರಿಯಾ ಯೋಜನೆಗೆ ಒಪ್ಪಿಗೆ ನೀಡಲಾಯಿತು.
2023-24ನೇ ಸಾಲಿನ ಮ್ಯಾಕ್ರೋ ಅನುದಾನದಲ್ಲಿ ಮಂಡಳಿಯಿಂದ ಸ್ವೀಕೃತವಾದ ರೂ. 3047.76 ಲಕ್ಷಗಳ 04 ಕಾಮಗಾರಿಗಳಿಗೆ ಅಂಗೀಕಾರ ನೀಡಲಾಯಿತು.
2018-19ನೇ ಸಾಲಿನಿಂದ 2021-22ನೇ ಸಾಲಿನವರೆಗೆ ಮ್ಯಾಕ್ರೋ ಅಡಿಯಲ್ಲಿ ಆರ್ಥಿಕವಾಗಿ ಪೂರ್ಣಗೊಂಡ ಕಾಮಗಾರಿಗಳಲ್ಲಿ ಉಳಿತಾಯವಾದ ಅನುದಾನದಲ್ಲಿ ರೂ.360.97 ಲಕ್ಷಗಳ ಅನುದಾನದ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಯಿತು.
2018-19ನೇ ಸಾಲಿನಿಂದ 2021-22ನೇ ಸಾಲಿನವರೆಗೆ ಮೈಕ್ರೋ ಅಡಿಯಲ್ಲಿ ಆರ್ಥಿಕವಾಗಿ ಪೂರ್ಣಗೊಂಡ ಕಾಮಗಾರಿಗಳಲ್ಲಿ ಉಳಿತಾಯವಾದ ಅನುದಾನದಲ್ಲಿ ರೂ.2307.71 ಲಕ್ಷಗಳ ಅನುದಾನಕ್ಕೆ ಕ್ರಿಯಾ ಯೋಜನೆಗೆ ಒಪ್ಪಿಗೆ ನೀಡಲಾಯಿತು.
2022-23ನೇ ಸಾಲಿನ ಮೆಗಾ ಮ್ಯಾಕ್ರೋ (ಬೃಹತ್) ಕ್ರಿಯಾ ಯೋಜನೆಯಲ್ಲಿ ಭೌತಿಕವಾಗಿ ಪ್ರಾರಂಭವಾಗದೇ ಇರುವ ಕಾಮಗಾರಿಗಳಲ್ಲಿ ಟೆಂಡರ ಆಗಿರುವ ಮತ್ತು ಟೆಂಡರ ಆಗದೇ ಇರುವ ಒಟ್ಟು 326 ಕಾಮಗಾರಿಗಳಿಗೆ ಸಮ್ಮತಿ ನೀಡಲಾಯಿತು.
ಸಭೆಯಲ್ಲಿ ಕಲಬುರಗಿ ಜಿಲ್ಲಾ ಸಲಹಾ ಸಮಿತಿಯ ಸದಸ್ಯರಾದ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ಶರಣಪ್ರಕಾಶ ಪಾಟೀಲ, ಕೆ.ಕೆ.ಆರ್.ಡಿ.ಬಿ. ಅಧ್ಯಕ್ಷ ಡಾ. ಅಜಯಸಿಂಗ್, ಶಾಸಕರಾದ ಬಿ.ಆರ್. ಪಾಟೀಲ, ಎಂ.ವೈ. ಪಾಟೀಲ, ಅಲ್ಲಮಪ್ರಭು ಪಾಟೀಲ, ಬಸವರಾಜ ಮತ್ತಿಮಡು, ವಿಧಾನ ಪರಿಷತ್ ಶಾಸಕರಾದ ಸುನೀಲ ವಲ್ಲ್ಯಾಪುರೆ, ಶಶೀಲ ಜಿ. ನಮೋಶಿ, ಬಿ.ಜಿ. ಪಾಟೀಲ, ಡಾ. ಚಂದ್ರಶೇಖರ ಪಾಟೀಲ ಹುಮನಾಬಾದ, ಡಾ. ತಳವಾರ ಸಾಬಣ್ಣ, ತಿಮ್ಮಣಪ್ಪ ಕಮಕನೂರ, ಕಲಬುರಗಿ ಮಹಾನಗರ ಪಾಲಿಕೆ ಮಹಾಪೌರ ವಿಶಾಲ ಎಸ್. ದರ್ಗಿ, ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರ್ ಸಿಂಗ್ ಮೀನಾ, ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಪಾಟೀಲ ಭುವನೇಶ ದೇವಿದಾಸ್, ಲೋಕೋಪಯೋಗಿ, ಕೆ.ಕೆ.ಆರ್.ಡಿ.ಬಿ. ಸೇರಿದಂತೆ ಮತ್ತಿತರ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಕಲಬುರಗಿಯಿಂದ ವಿಡಿಯೋ ಕಾನ್ಫ್‍ರೆನ್ಸ್ ಮೂಲಕ ಕೆ.ಕೆ.ಆರ್.ಡಿ.ಬಿ. ಕಾರ್ಯದರ್ಶಿ ಎಂ. ಸುಂದರೇಶ ಬಾಬು, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಸಣಸಗಿ ಹಾಗೂ ಸಂಬಂಧಪಟ್ಟ ಎಲ್ಲಾ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…