ಬಿಸಿ ಬಿಸಿ ಸುದ್ದಿ

ಮನೋರಂಜನ SFI ಸಂಘಟನೆಗೆ ಸೇರಿದು ಎಂದು ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಕ್ರಮಕ್ಕೆ ಆಗ್ರಹ

ಲಿಂಗಸ್ಗೂರು: ಸಂಸತ್ತಿನಲ್ಲಿ ನಡೆದ ಘಟನೆಯ ಮನೋರಂಜನ ಎಂಬ ವ್ಯಕ್ತಿಯು SFI ಸಂಘಟನೆಯವರು ಎಂದು ಸುಳ್ಳು ಸುದ್ದಿ ಹಂಚುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮಕೈಗಳಲು ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ ( ಎಸ್ಎಫ್ಐ ) ನಿಂದ ಶುಕ್ರವಾರದಂದು ಪ್ರತಿಭಟಿಸಿ ಗೃಹ ಸಚಿವರಿಗೆ ಲಿಂಗಸ್ಗೂರು ಸಹಾಯಕ ಆಯುಕ್ತರ ಮೂಲಕ ಮನವಿ ಸಲ್ಲಿಸಲಾಯಿತು.

ದೇಶದ ಪ್ರಜೆಗಳನ್ನು ಪ್ರತಿನಿಧಿಸುವ ಪವಿತ್ರ ಸ್ಥಳವಾದ ಲೋಕಸಭೆಯಲ್ಲಿ ಇಂದು ಕೆಲವು ಕಿಡಿಗೆಡಿಗಳು ನುಗ್ಗಿ ಕಲರ್ ಗ್ಯಾಸ್ ಸಿಂಪಡಿಸುವ ಮೂಲಕ ಭಾರಿ ಭದ್ರತಾ ಲೋಪವನ್ನು ಎಸಗಿದ್ದಾರೆ ಇದು ಅಕ್ಷಮ್ಯ ಅಪರಾಧ ಮತ್ತು ಖಂಡನೀಯ ಇದನ್ನು ಭಾರತ ವಿದ್ಯಾರ್ಥಿ ಫೆಡರೇಷನ್ ( ಎಸ್ಎಫ್ಐ ) ಕರ್ನಾಟಕ ಬಲವಾಗಿ ಖಂಡಿಸುತ್ತದೆ.

ಈ ಕೃತ್ಯ ಎಸಗಿದವರನ್ನು ಈಗಾಗಲೇ ಬಂಧಿಸಿಲಾಗಿದೆ ಅವರನ್ನು ಸೂಕ್ತ ವಿಚಾರಣೆ ಒಳಪಡಿಸಿ ಕಾನೂನಿನ ಕ್ರಮಕ್ಕೆ ಮುಂದಾಗಬೇಕೆಂದು ಎಸ್ಎಫ್ಐ ಕರ್ನಾಟಕ ರಾಜ್ಯ ಸಮಿತಿ ಒತ್ತಾಯಿಸುತ್ತದೆ. ಕೃತ್ಯ ಎಸಗಿದವರ ಪೈಕಿ ಇಬ್ಬರೂ ಕರ್ನಾಟಕ, ಒಬ್ಬರು ಹರಿಯಾಣ ಮತ್ತೋರ್ವರು ಮಹಾರಾಷ್ಟ್ರ ಮೂಲದವರೆಂದು ಮೇಲ್ನೋಟಕ್ಕೆ ತಿಳಿದು ಬಂದಿದೆ. ಇವರೆಲ್ಲ ಲೋಕಸಭೆ ಪ್ರವೇಶ ಮಾಡಲು ಇವರಿಗೆ ಪಾಸ್ ನೀಡಿದವರು ಯಾರು? ಇವರ ಹಿಂದೆ ಯಾರೆಲ್ಲಾ ಇದ್ದಾರೆ, ಇದಕ್ಕೆ ಕುಮ್ಮಕ್ಕು ನೀಡಿದವರು ಯಾರು? ಮತ್ತು ಇವರ ಉದ್ದೇಶ ಏನಾಗಿತ್ತು ಎಂಬುದರ ಕುರಿತು ಸಮಗ್ರ ತನಿಖೆ ನಡೆಯಲಿ.

ಎಸ್ಎಫ್ಐ ಸಂಘಟನೆ ತ್ಯಾಗ ಬದ್ದತೆ ಮತ್ತು ಸಿದ್ದಾಂತವನ್ನು ಮೈಗೂಡಿಸಿಕೊಂಡು ವಿದ್ಯಾರ್ಥಿಗಳ, ಶಿಕ್ಷಣದ ಮತ್ತು ಸಮಾಜದ ಪ್ರಗತಿಗಾಗಿ ಹಾಗೂ ಸೌಹಾರ್ದ, ಸಾಮರಸ್ಯದ ಘನತೆಯ ಬದುಕಿಗಾಗಿ ದಶಕಗಳಿಂದ ವಿದ್ಯಾರ್ಥಿ ಸಮುದಾಯದ ಪರವಾಗಿ ದೇಶಾದ್ಯಂತ ಹೋರಾಟ ಮಾಡುತ್ತಾ ಬರುತ್ತಿದೆ. ಇದನ್ನು ಸಹಿಸದ ಈ ದೇಶದ ಕೋಮುವಾದಿ BJP ಪಕ್ಷದ ಕಾರ್ಯಕರ್ತರು ಸೈದ್ದಾಂತಿಕವಾಗಿ ಸಂಘಟನೆಯನ್ನು ಎದುರಿಸಲಾಗದೆ.

ಈ ಪ್ರಕರಣದಲ್ಲಿ ವಿನಾಕಾರಣ ಎಸ್ಎಫ್ಐ ಮೈಸೂರು ಜಿಲ್ಲಾ ಅಧ್ಯಕ್ಷರಾದ ವಿಜಯ್ ಕುಮಾರ್ ಇವರ ಪೋಟೋವನ್ನು ದುರ್ಬಳಕೆ ಮಾಡಿಕೊಂಡು ಇವನೆ ಮನೋರಂಜನ ಎಂದು ಅಪ ಪ್ರಚಾರ ಮಾಡುತ್ತ ಇದ್ದಾರೆ ಸೈದ್ಧಾಂತಿಕವಾಗಿ ಎದುರಿಸಲಾಗದ BJP ಯವರು ಸೋಶಿಯಲ್ ಮೀಡಿಯಾದಲ್ಲಿ ಅಪ್ರಚಾರ ಮಾಡುತ್ತಾ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಈ ಕೃತ್ಯ ಎಸಗಿದ ವ್ಯಕ್ತಿಗಳ ಬಂಧನ ಆದರೂ ದುರುದ್ದೇಶದಿಂದ ಇಂತಹ ಕೆಲಸ ಮಾಡುತ್ತಿರುವ BJP ಯ ಐಟಿ ಸೆಲ್ ಗಳು ಹಾಗೂ ಅದನ್ನು ನಿರ್ವಹಿಸುವ ಅಡ್ಮಿನ್ ಗಳನ್ನು ಮತ್ತು ಸುಳ್ಳು ಸುದ್ದಿಯನ್ನು ಶೇರ್ ಮಾಡುತ್ತಿರುವ ಎಲ್ಲಾ ವ್ಯಕ್ತಿಗಳು ಹಾಗೂ ಗುಂಪುಗಳ ವಿರುದ್ಧ ದೂರು ದಾಖಲಿಸಿಕೊಂಡು ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿದೆ.

ಈ ಸಂದರ್ಭದಲ್ಲಿ ಎಸ್ಎಫ್ಐ ಜಿಲ್ಲಾಧ್ಯಕ್ಷ ರಮೇಶ ವೀರಾಪೂರು, ಜಿಲ್ಲಾ ಸಮಿತಿ ಸದಸ್ಯರಾದ ವಿಶ್ವ ಅಂಗಡಿ, ಸುಮಿತ್ರಾ ಕರಿಓಣಿ, ಶಂಕ್ರಮ್ಮ ನಾಗರಾಳ, ತಾಲೂಕು ಸಮಿತಿ ಮುಖಂಡರಾದ ಆಕಾಶ, ಸಿದ್ದಾರ್ಥ, ಶರಣಬಸವ ಆನೆಹೊಸೂರು, ಕೃಷ್ಣ, ಶಿವಪುತ್ರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

emedialine

Recent Posts

371 (ಜೆ) ವಿಧಿಯ ನಿಬಂಧನೆಗಳ ಪರಿಣಾಮಕಾರಿ ಅನುμÁ್ಠನಕ್ಕೆ ಒತ್ತಾಯ

ಕಲಬುರಗಿ: ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿಯು, ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಚುನಾಯಿತ ಪ್ರತಿನಿಧಿಗಳು ಮತ್ತು ಸಚಿವರ ಸಭೆ ನಡೆಸಿ,…

1 hour ago

ಮರಗಮ್ಮ ದೇವಿ ಮೂರ್ತಿ ಗಂಗಾಸ್ನಾನ | ಎಂಟು ಗಂಟೆಗಳ ಕಾಲ ಮೆರವಣಿಗೆ

ಸುರಪುರ: ಇಲ್ಲಿಯ ರಂಗಂಪೇಟೆ-ತಿಮ್ಮಾಪುರದ ಆರಾಧ್ಯ ದೇವತೆ ಮರಗಮ್ಮ ದೇವಿಯ ನೂತನ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ದೇವಿಯ ಬೆಳ್ಳಿಯ ಮೂರ್ತಿ ಗಂಗಾಸ್ನಾನ…

1 hour ago

ಒತ್ತಡ ನಿಭಾಯಿಸಲು ಪರಿಹಾರ ಒದಗಿಸುವುದು ಯುವ ಸ್ಪಂದನೆ ಉದ್ದೇಶ

ಸುರಪುರ: ಯುವ ಸಬಲೀಕರಣ, ಅರೋಗ್ಯ ಜೀವನಶೈಲಿ,ಲೈಂಗಿಕತೆ ಮತ್ತು ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ನಿಭಾಯಿಸುತ್ತಿರುವ ಸವಾಲುಗಳು, ಭಾವನಾತ್ಮಕ ಸಮಸ್ಯೆಗಳು ಭಾವನೆಗಳ ನಿಭಾಯಿಸುವಿಕೆ,ನೆನಪಿನ…

1 hour ago

ಶಹಾಬಾದ: ಸಂಪೂರ್ಣತಾ ಅಭಿಯಾನ ಉತ್ಸವಕ್ಕೆ ಚಾಲನೆ

ಶಹಾಬಾದ: ನೀತಿ ಆಯೋಗವು ಮಾನವ ಅಭಿವೃದ್ಧಿ ಸೂಚಕಗಳಲ್ಲಿ ಹಿಂದುಳಿದ ತಾಲೂಕಗಳಿಗೆ ಆರೋಗ್ಯ, ಪೆÇೀಷಣೆ, ಕೃಷಿ ಮೇಲೆ ಕೇಂದ್ರೀಕರಿಸಿದ ಸಂಪೂರ್ಣತಾ ಅಭಿಯಾನ…

1 hour ago

ಗಿಡ-ಮರಗಳ ಸಂರಕ್ಷಣೆ ಮಾಡದಿದ್ದರೇ ಪ್ರಕೃತಿಗೆ ಗಂಡಾಂತರ ತಪ್ಪಿದ್ದಲ್ಲ

ಶಹಾಬಾದ: ಕೇವಲ ಒಂದು ದಿನ ವನಮಹೋತ್ಸವ ಪರಿಸರ ದಿನಾಚರಣೆಯಂತಹ ಕಾರ್ಯಕ್ರಮ ಮಾಡಿದರೆ ಸಾಲದು, ಬದಲಾಗಿ ಗಿಡ-ಮರಗಳ ಸಂರಕ್ಷಣೆ ಮಾಡುವುದು ಅವಶ್ಯವಾಗಿದೆ.…

1 hour ago

ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮ

ಶಹಾಬಾದ: ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು ಎಂದು ಕಾರ್ಮಿಕ ಪ್ರಧಾನ…

1 hour ago