ಬಿಸಿ ಬಿಸಿ ಸುದ್ದಿ

ರೈತ ಉತ್ಪಾದಕ ಸಂಘಗಳಿಗೆ ರೂ.2 ಕೋಟಿ ಅನುದಾನ: ಸಚಿವ ಎಂ.ಸಿ.ಸುಧಾಕರ್

ಬೆಳಗಾವಿ: ಸಮಗ್ರ ತೋಟಗಾರಿಕೆ ಯೋಜನೆಯಡಿ ರೈತ ಉತ್ಪಾದಕ ಸಂಸ್ಥೆಗಳಿಗೆ ಆರಂಭಿಕವಾಗಿ ಪ್ರೊತ್ಸಾಹ ನೀಡಲು 2022-23ನೇ ಸಾಲಿನಲ್ಲಿ ರೂ.2.73 ಕೋಟಿ ಬಿಡುಗಡಿ ಮಾಡಲಾಗಿದೆ ಹಾಗೂ 2023-24ನೇ ಸಾಲಿನಲ್ಲಿ ರೂ.2 ಕೋಟಿ ಅನುದಾನವನ್ನು ಮೀಸಲು ಇರಿಸಲಾಗಿದೆ ಎಂದು ಉತನ್ನ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ಹೇಳಿದರು.

ಬೆಳಗಾವಿ ಚಳಿಗಾಲದ ಅಧಿವೇಶನಲ್ಲಿ ಶುಕ್ರವಾರÀ ಪ್ರಶ್ನೋತ್ತರ ಕಲಾಪದಲ್ಲಿ ಶಾಸಕ ಸುನೀಲ್ ಕುಮಾರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರ ಪರವಾಗಿ ಉತ್ತರಿಸಿದರು.

ರೈತರ ಬೆಳೆಗಳನ್ನು ಸಂಸ್ಕರಿಸಿ ನೇರವಾಗಿ ಗ್ರಾಹಕರಿಗೆ ತಲುಪಿಸಲು ರೈತ ಉತ್ಪಾದಕ ಸಂಸ್ಥೆಗಳು ಸಹಕಾರಿಯಾಗಿವೆ. ರೈತರು ಉತ್ಪಾದಕ ಸಂಸ್ಥೆಗಳನ್ನು ರಚಿಸಿಕೊಳ್ಳಲು ಆರಂಭದಲ್ಲಿ ಸರ್ಕಾರದಿಂದ, ಸಂಗ್ರಹಣೆ, ಸಂಸ್ಕರಣೆ, ಮತ್ತು ಶೇಖರಣೆ ಘಟಕ ನಿರ್ಮಾಣ, ಯಂತ್ರೋಪಕರಣ ಹಾಗೂ ಇತರೆ ಮೂಲ ಸೌಕರ್ಯಗಳಿಗೆ ಆರ್ಥಿಕ ಸಹಾಯಕ ಒದಗಿಸಲಾಗುವುದು. ರಾಜ್ಯದಲ್ಲಿ 1262 ರೈತ ಉತ್ಪಾದಕ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ ಎಂದರು.

ಶಾಸಕ ಸುನೀಲ್ ಕುಮಾರ್ ಮಾತನಾಡಿ, ರೈತ ಉಪಯೋಗಿ ಯೋಜನೆ ಅನುಷ್ಠಾನಗಳು ಬಿಳಂಬವಾಗುತ್ತಿವೆ ಇದರ ಬಗ್ಗೆ ಸರ್ಕಾರ ಗಮನ ಹರಿಸಬೇಕು. ರಾಜ್ಯದಲ್ಲಿರುವ 1262 ರೈತ ಉತ್ಪಾದಕ ಸಂಸ್ಥೆಗಳಿಗೆ ಸರ್ಕಾರ ಮೀಸಲು ಇರಿಸಿದ ಅನುದಾನ ಸಾಲುವುದಿಲ್ಲ. ಸರ್ಕಾರ ಅನುದಾನವನ್ನು ಹೆಚ್ಚಿಸುವಂತೆ ಒತ್ತಾಯಿಸಿದರು.

ಇದೇ ಸಂದರ್ಭದಲ್ಲಿ ಶಾಸಕ ಅರಗ ಜ್ಞಾನೇಂದ್ರ ಮಾತನಾಡಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ ರೈತ ಉತ್ಪಾದಕ ಸಂಸ್ಥೆಗಳಿಗೆ ಸರ್ಕಾರದಿಂದ ವ್ಯಾಪಾರ ಹಾಗೂ ರಪ್ತು ಪರವಾನಿಗೆಯನ್ನು ನೀಡುವಂತೆ ಕೋರಿದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

3 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

5 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

12 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

12 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

13 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

23 hours ago