ಬೆಳಗಾವಿ; ಅನೇಕ ಹೋರಾಟಗಾರರ ತ್ಯಾಗ, ಬಲಿದಾನದ ಪ್ರತಿಫಲವಾಗಿ ಕರ್ನಾಟಕ ರಾಜ್ಯ ಏಕೀಕೃತವಾಗಿದೆ. ಅಭಿವೃದ್ಧಿಯ ಹಿನ್ನಡೆಯಲ್ಲಿ ರಾಜ್ಯ ಪ್ರತ್ಯೇಕತೆ ಬಗ್ಗೆ ಮಾತನಾಡುವುದು ಅಂತಹ ಮಹನೀಯರಿಗೆ ಅಪಮಾನ ಮಾಡಿದಂತೆ. ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ಎಲ್ಲರಲ್ಲೂ ಇಚ್ಛಾಶಕ್ತಿ ಬೇಕು. ರಾಜ್ಯ ಸರ್ಕಾರವು ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ ಸೇರಿದಂತೆ ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅವರು ಇಂದು ವಿಧಾನಸಭೆಯಲ್ಲಿ ಜರುಗಿದ ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತ ಚರ್ಚೆಯ ಕೊನೆಗೆ ಉತ್ತರಿಸಿ, ಮಾತನಾಡಿದರು.
ಕರ್ನಾಟಕ ರಾಜ್ಯದ ಕನ್ನಡಿಗರು ಏಕೀಕರಣ ಪೂರ್ವದಲ್ಲಿ ವಿವಿಧ ಪ್ರಾಂತಗಳಲ್ಲಿ ಹಂಚಿ ಹೋಗಿದ್ದರು. ಕರ್ನಾಟಕ ಒಂದಾಗಬೇಕು. ಕನ್ನಡಿಗರು ಒಟ್ಟಾಗಬೇಕು ಎಂದು ಬಯಸಿ ಉತ್ತರ, ದಕ್ಷಿಣ ಭಾಗದ ಅನೇಕ ನಾಯಕರು ನಿರಂತರ ಹೋರಾಟ ಮಾಡಿ ರಾಜ್ಯ ಒಗ್ಗೂಡಿಸಿದರು. ಉತ್ತರ ಕರ್ನಾಟಕ ಸೇರಿದಂತೆ ಈ ಭಾಗಗಳು ಅಬಿವೃದ್ಧಿಯಲ್ಲಿ ಹಿಂದೆ ಉಳಿಯಲು ಅನೇಕ ಐತಿಹಾಸಿಕ ಕಾರಣಗಳು ಇವೆ ಎಂದು ವಿವರಿಸಿದ ಸಿಎಂ ಅವರು ಏಕೀಕರಣಕ್ಕಿಂತ ಮುಂಚೆ ವಿವಿಧೆಡೆ ಹಂಚಿಹೋಗಿದ್ದ ಕರ್ನಾಟಕದ ಪ್ರದೇಶಗಳ ಸ್ಥಿತಿಗತಿ ಬಗ್ಗೆ ಸದನದಲ್ಲಿ ವಿವರಿಸಿದರು.
ಕರ್ನಾಟಕದ ಅಭಿವೃದ್ಧಿಗೆ ಪ್ರೊ. ಡಿ.ಎಂ. ನಂಜುಂಡಪ್ಪ ವರದಿ ಸೇರಿದಂತೆ ವಿವಿಧ ಶಿಫಾರಸ್ಸುಗಳ ಆಧಾರದ ಮೇಲೆ ಕ್ರಮಕೈಗೊಳ್ಳಲಾಗಿದೆ. ನಮ್ಮ ಸರ್ಕಾರವು ಈ ಭಾಗದ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಲಿದೆ ಎಂದು ಹೇಳಿದ ಮುಖ್ಯಮಂತ್ರಿಗಳು ಅಭಿವೃದ್ಧಿಯ ಅಷ್ಟಸೂತ್ರಗಳನ್ನು ಸಭೆಯಲ್ಲಿ ಪ್ರಕಟಿಸಿದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…