ಕಲಬುರಗಿ: ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ವತಿಯಿಂದ ಇದೇ ಡಿ. 29 ಮತ್ತು 30ರಂದು ಎರಡು ದಿನಗಳ ಕಾಲ ರಾಯಚೂರು ಜಿಲ್ಲೆಯ ಲಿಂಗಸೂಗೂರು ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ರಾಜ್ಯ ಮಟ್ಟದ ಮೂರನೇ ವೈಜ್ಞಾನಿಕ ಸಮ್ಮೇಳನ ನಡೆಯಲಿದೆ ಎಂದು ಪರಿಷತ್ ಜಿಲ್ಲಾ ಅಧ್ಯಕ್ಷ ರವೀಂದ್ರ ಶಾಬಾದಿ ತಿಳಿಸಿದರು.
ಸಮ್ಮೇಳನದ ಸರ್ವಾಧ್ಯಕ್ಷರಾಗಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಆಯ್ಕೆ ಮಾಡಲಾಗಿದ್ದು, ಈ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಸಚಿವರು ಹಾಗೂ ಶಾಸಕರು, ಗಣ್ಯರು ಭಾಗವಹಿಸಲಿದ್ದಾರೆ ಎಂದರು.
ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಜಸ್ಟಿಸ್ ಶಿವರಾಜ ಪಾಟೀಲ್ ಅವರಿಗೆ ಈ ಬಾರಿಯ ರಾಜ್ಯ ಮಟ್ಟದ ಎಚ್.ಎನ್. ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುತ್ತಿದೆ. ಅದರಂತೆ ಕಲಬುರಗಿ ಜಿಲ್ಲೆಯಿಂದ ಪ್ರಗತಿಪರ ಚಿಂತಕ ಪೆÇ್ರ.ಆರ್.ಕೆ. ಹುಡಗಿ ಅವರನ್ನು ಜಿಲ್ಲಾ ಮಟ್ಟದ ಎಚ್.ಎನ್. ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಶಾಬಾದಿ ವಿವರಿಸಿದರು.
ಈ ಸಮ್ಮೇಳನದಲ್ಲಿ ಮಹಾ ಅಧಿವೇಶನ, ವೈಚಾರಿಕ ವಿಷಯ ಕುರಿತು ವಿವಿಧ ಗೋಷ್ಠಿಗಳು, ವಿಜ್ಞಾನಿ-ವಿದ್ಯಾರ್ಥಿ ಸಂವಾದ, ಸಾಂಸ್ಕøತಿಕ ವೈಭವ, ಹಾಡು ಹಾಸ್ಯ, ಆಹಾರ ಮೇಳ, ಖಾದಿ, ಪುಸ್ತಕ, ವಿಜ್ಞಾನ ವಸ್ತು ಪ್ರದರ್ಶನ ಮುಂತಾದ ಕಾರ್ಯಕ್ರಮಗಳು ಜರುಗಲಿವೆ ಎಂದು ಮಾಹಿತಿ ಹಂಚಿಕೊಂಡರು.
ಕರಾವೈಸಂಪ ಪ್ರಧಾನ ಕಾರ್ಯದರ್ಶಿ ಡಾ. ಶಿವರಂಜನ ಸತ್ಯಂಪೇಟೆ, ರಾಜ್ಯ ನಿರ್ದೇಶಕ ಶರಣಬಸವ ಕಲ್ಲಾ, ಸಂಚಾಲಕ ಸತೀಶ್ ಸಜ್ಜನ್, ಉಪಾಧ್ಯಕ್ಷ
ನೀಲಕಂಠ ಅವಂಟಿ, ಪರಮೇಶ್ವರ ಶೆಟಕಾರ ಸೇರಿದಂತೆ ಇತರರಿದ್ದರು.
ಕರಾವೈಸಂಪ ಹೆಜ್ಜೆ ಗುರುತು; ಪವಾಡ ರಹಸ್ಯ ಬಯಲು ಖ್ಯಾತಿಯ ಡಾ. ಹುಲಿಕಲ್ ನಟರಾಜ್ ನೇತೃತ್ವದಲ್ಲಿ 2020 ಡಿಸೆಂಬರ್ 29ರಂದು ಆರಂಭವಾದ ಸಂಸ್ಥೆಯು ಕಳೆದ ಮೂರು ವರ್ಷಗಳಿಂದ ನಿರಂತರವಾಗಿ ರಾಜ್ಯಾದ್ಯಂತ ಸಂಘಟಿಸುತ್ತ ಬಂದಿದೆ ಎಂದು ಶಾಬಾದಿ ಪರಿಷತ್ ಚಟುವಟಿಕೆ ಕುರಿತು ವಿವರಿಸಿದರು.
ಪ್ರತಿ ವರ್ಷ ರಾಜ್ಯ ಮಟ್ಟದ ವೈಜ್ಞಾನಿಕ ಸಮ್ಮೇಳನ, ಕಾಯಕ ದಿನಾಚರಣೆ, ಯುವ ಸಂಸತ್ತು, ಎಚ್.ಎನ್. ಪ್ರಶಸ್ತಿ ಪ್ರದಾನ, ನಾಯಕತ್ವ ಶಿಬಿರ, ಆನ್‍ಲೈನ್ ಕಾರ್ಯಕ್ರಮ, ವಿಜ್ಞಾನ ಸಿರಿ ಮಾಸ ಪತ್ರಿಕೆ, ಎಚ್‍ಎನ್ ಟಿವಿ ಚಾನೆಲ್, ಪುಸ್ತಕ ಬಿಡುಗಡೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಮೂರು ವರ್ಷದಲ್ಲಿ ಮಾಡಿದೆ. ಅದೇರೀತಿ, ಕಲಬುರಗಿ ಜಿಲ್ಲೆಯಲ್ಲಿಯೂ ಪವಾಡ ಬಯಲು, ಬಸವ ಪಂಚಮಿ, ಮೂಢ ನಂಬಿಕೆ ನಿವಾರಿಸುವ ನಿಟ್ಟಿನಲ್ಲಿ ವಿವಿಧ ವಿಷಯಗಳ ಕುರಿತು ಉಪನ್ಯಾಸ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಸಮಾಜದಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಾ ಬಂದಿದೆ ಎಂದು ರವೀಂದ್ರ ಶಾಬಾದಿ ತಿಳಿಸಿದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…