ಕಲಬುರಗಿ: ನಗರದ ಸಿದ್ದಾರ್ಥ ಕಾನೂನು ಮಹಾವಿದ್ಯಾಲಯದಲ್ಲಿ ಶುಕ್ರವಾರ ಆಯೋಜಿಸಿದ ವಿಶ್ವ ಮಾನವ ಹಕ್ಕುಗಳ ದಿನಾಚರಣೆಯನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀಮತಿ ನಾಗಶ್ರೀ ಅವರು ಉದ್ಘಾಟಿಸಿ ಮಾತನಾಡಿದರು.
ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ಶ್ರೀನಿವಾಸ ನವಲೆ, ಕರ್ನಾಟಕ ಪೀಪಲ್ಸ್ ಎಜ್ಯಕೇಶನ್ ಸೊಸೈಟಿ ಕಾರ್ಯದರ್ಶಿ ಶಾಂತಪ್ಪ ಸೂರನ್, ಪ್ರಾಂಶುಪಾಲ ಡಾ.ಚಂದ್ರಶೇಖರ ಎಸ್, ಡಾ.ಅಪರ್ಣಾ ಶಿಂಧೆ, ಡಾ.ತಿಪ್ಪೇಸ್ವಾಮಿ ಎಸ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.