ಶಹಾಬಾದ: ನಗರಸಭೆಯ ವ್ಯಾಪ್ತಿಯ ವಾರ್ಡ ನಂ 25ರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಶುಕ್ರವಾರ ವಿವಿಧ ಪಕ್ಷದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು.
ಈಗಾಗಲೇ ವಾರ್ಡ ನಂ. 25ರ ಸದಸ್ಯೆ ಅಂಜಲಿ ಗಿರೀಶ ಕಂಬಾನೂರ ನಗರಸಭೆಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ.ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಕಾಂಗ್ರೆಸ್‍ನ ಅಭ್ಯರ್ಥಿಯಾಗಿ ಪುತಲಾ ಕಾಶಿನಾಥ ಜೋಗಿ ನಾಮಪತ್ರ ಸಲ್ಲಿಸಿದರು. ಈ ಸಂಧರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಶೀದ್ ಮರ್ಚಂಟ್, ರಮೇಶ ಮರಗೋಳ, ಸಂತೋಷ ಪಾಟೀಲ, ಈರಣ್ಣ ಝಳಕಿ, ನಾಗೇಂದ್ರ ನಾಟೀಕಾರ, ರಾಜೇಶ ಯನಗುಂಟಿ, ಫಜಲ ಪಟೇಲ ಉಪಸ್ಥಿತರಿದ್ದರು.
ಬಿಜೆಪಿಯಿಂದ ಅಭ್ಯರ್ಥಿಯಾಗಿ ಸಂಗೀತ ವೆಂಕಟೇಶ ದಂಡಗುಲಕರ್ ನಾಮಪತ್ರ ಸಲ್ಲಿಸಿದರು. ಈ ಸಂಧರ್ಭದಲ್ಲಿ ಅಣವೀರ ಇಂಗಿನಶೆಟ್ಟಿ, ಚಂದ್ರಕಾಂತ ಗೊಬ್ಬೂರಕರ, ಅರುಣ ಪಟ್ಟಣಕರ, ರವಿ ರಾಠೋಡ, ಜ್ಯೋತಿ ಶರ್ಮಾ, ಸದಾನಂದ ಕುಂಬಾರ, ಸಿದ್ರಾಮ ಕುಸಾಳೆ ಉಪಸ್ಥಿತರಿದ್ದರು.
ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ ನೇತೃತ್ವದಲ್ಲಿ ಜೆಡಿಎಸ್‍ನಿಂದ ಅಭ್ಯರ್ಥಿಯಾಗಿ ಲತಾ ದೇವಾನಂದ ನಾಮಪತ್ರ ಸಲ್ಲಿಸಿದರು. ಈ ಸಂಧರ್ಭದಲ್ಲಿ ಸುರೇಶ ಮಹಗಾಂವಕರ, ಡಾ. ಸಿದ್ದಣ್ಣ ಪಾಟೀಲ,ಜೆಡಿಎಸ್ ತಾಲೂಕಾಧ್ಯಕ್ಷ ಅಬ್ದುಲ ಘನಿ ಸಾಬೀರ, ಶ್ರೀಧರ ಕೊಲ್ಲೂರ ಉಪಸ್ಥಿತರಿದ್ದರು.
ಅಲ್ಲದೇ ಎಸ್‍ಡಿಪಿಐ ವತಿಯಿಂದ ಅಭ್ಯರ್ಥಿಯಾಗಿ ಬಿಜಾನಬೇಗಂ ಮೆಹಬೂಬ ನಾಮಪತ್ರ ಸಲ್ಲಿಸಿದರು. ಈ ಸಂಧರ್ಭದಲ್ಲಿ ಅಬ್ದುಲ ರಹೀಮ ಪಟೇಲ, ಮಹ್ಮದ ಯೂನುಷ, ರಹೀಮ ಖಾನ ಉಪಸ್ಥಿತರಿದ್ದರು. ಚುನಾವಣಾಧಿಕಾರಿ ಬಾಲರಾಜ ಮಾಚನೂರ,ಸಹಾಯಕ ಚುನಾವಣಾಧಿಕಾರಿ ಶರಣಬಸಪ್ಪ ಪಾಟೀಲ, ಲೆಕ್ಕಪತ್ರ ಅಧಿಕಾರಿ ನಾರಾಯಣರೆಡ್ಡಿ ಇತರರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…