ಸುರಪುರ: ನಗರದ ತಾಲೂಕು ಪಂಚಾಯತ ಸಭಾಂಗಣದಲ್ಲಿ ಯಾದಗಿರಿ ಜಿ.ಪಂ ಯೋಜನಾ ನಿರ್ದೇಶಕರಾದ ಬಿ.ಎಸ್ ರಾಠೋಡ ರವರ ಅಧ್ಯಕ್ಷತೆಯಲ್ಲಿ ಸ್ವಚ್ಛ ಭಾರತ ಮಿಷನ್ (ಗ್ರಾ) ಹಾಗೂ ನರೇಗಾ ಯೋಜನೆಯ ಸಾಮಾಜೀಕ ಲೆಕ್ಕ ಪರಿಶೋಧನೆಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನ ಸಭೆ ನಡೆಯಿತು.
ವೈಯಕ್ತಿಕ ಶೌಚಾಲಯ ನಿರ್ಮಾಣದ ಕಾರ್ಯಾದೇಶ. ನರೇಗಾ ಕಾಮಗಾರಿಗಳ ಪೂರ್ಣಗೊಳಿಸುವಿಕೆ. ಸಾಮಾಜಿಕ ಲೆಕ್ಕ ಪರಿಶೋಧನೆ ವರದಿಯಲ್ಲಿ ಸೂಚಿಸಿದ ವಸೂಲಾತಿ ಕಂಡಿಕೆಗಳ ತಿರುವಳಿ ಸೇರಿದಂತೆ ವಿವಿಧ ಯೋಜನೆಗಳ ಪ್ರಗತಿ ಕುರಿತು ಮಾಹಿತಿಯನ್ನು ಪಡೆದುಕೊಂಡರು.
ಈ ಸಂದರ್ಭದಲ್ಲಿ ಸುರಪುರ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಬಸವರಾಜ ಸಜ್ಜನ, ಸಹಾಯಕ ನಿರ್ದೇಶಕರಾದ ರವಿಚಂದ್ರ ರಡ್ಡಿ, ಎಸ್.ಬಿ.ಎಮ್ ಜಿಲ್ಲಾ ಸಮಾಲೋಚಕರು, ಜಿಲ್ಲಾ ಹಾಗೂ ತಾಲೂಕ ಸಾಮಾಜಿಕ ಲೆಕ್ಕ ಪರಿಶೋಧಕರು, ತಾಲೂಕಿನ ಎಲ್ಲ ಗ್ರಾಮ ಪಂಚಾಯತಿಗಳು ಅಭಿವೃಧ್ಧಿ ಅಧಿಕಾಆರಿಗಳು,ಸಿಡಿಇಓ,ಟಿ.ಸಿ,ಟಿ.ಎಮ್.ಐ.ಎಸ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.