ಸುರಪುರ:ಇಲ್ಲಿಯ ತಹಸೀಲ್ದಾರ್ ಕಚೇರಿಗೆ ಕಲಬುರ್ಗಿ ಪ್ರಾದೇಶಿಕ ಆಯುಕ್ತರಾದ ಕೃಷ್ಣ ಭಾಜಪೇಯಿ ಭೇಟಿ ನೀಡಿದರು.
ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ-2024 ರ ಅಂಗವಾಗಿ ಸಿದ್ಧಪಡಿಸಲಾಗಿರುವ ಮತದಾರರ ಪಟ್ಟಿಯ ಪರಿಶೀಲನೆ ಹಾಗೂ ನಮೂನೆ-18ರ ಪರಿಶೀಲನೆ ಮತ್ತು ಚುನಾವಣೆಯ ಕುರಿತು ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಯಾದಗಿರಿಯ ಸಹಾಯಕ ಆಯುಕ್ತರಾದ ಹಂಪಣ್ಣ ಸಜ್ಜನ್,ತಹಸೀಲ್ದಾರ್ ಕೆ.ವಿಜಯಕುಮಾರ,ಚುನಾವಣಾ ಶಾಖೆಯ ಅವಿನಾಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.