ಕಲಬುರಗಿ: 2024-25 ನೇ ಸಾಲಿಗಾಗಿ 6 ನೇ ತರಗತಿಯ ಪ್ರವೇಶಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಆಸಕ್ತ ಪೋಸಕರು 5 ನೇ ತರಗತಿ ಒದುತ್ತಿರುವ ವಿದ್ಯಾರ್ಥಿಗಳು ತಮ್ಮು ಸಮೀಪದ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚನ್ನಮ್ಮ, ಏಕಲವ್ಯ, ಡಾ. ಬಿ.ಆರ್. ಅಂಬೇಡ್ಕರ ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಗಳ ಪ್ರಾಂಶುಪಾಲರಿಂದ ಅರ್ಜಿಗಳನ್ನು ಸ್ವೀಕರಿಸಿ ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 7 ರಿಂದ 31 ರ ವರಗೆ ಸಲ್ಲಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗ ಹಿಂದುಳಿದ ವರ್ಗದ ಪ್ರವರ್ಗ-1, ಹಿಂದುಳಿದ ವರ್ಗ 2ಎ, 2ಬಿ, 3ಎ,3ಬಿ ವಿಶೇಷ ವರ್ಗದ ಅಂಗವಿಕಲ, ದೇವದಾಸಿ ಮಕ್ಕಳು, ವಿಧವಾ ಮಕ್ಕಳು, ಅನಾಥ ಮಕ್ಕಳು, ಸಫಾಯಿ ಕರ್ಮಚಾರಿಗಳ ಮಕ್ಕಳು, ಆಶ್ರಮ ಶಾಲೆಗಳ ಮಕ್ಕಳು, ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳು, ಸ್ಮಶಾನ ಕಾರ್ಮಿಕರ ಮಕ್ಕಳು, ಆತ್ಮ ಹತ್ಯೆ ಮಾಡಿಕೊಂಡ ರೈತರ ಮಕ್ಕಳು ಅರ್ಜಿ ಸಲ್ಲಿಸಸುವವರು ಅರ್ಜಿಯೊಂದಿಗೆ ಸಲ್ಲಿಸುವ ಪ್ರಮಾಣ ಪತ್ರಗಳ ಬಗ್ಗೆ ವಸತಿ ಶಾಲೆಯ ಪ್ರಾಂಶುಪಾಲರನ್ನು ಸಂಪರ್ಕಿಸಬಹುದು.
ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗ ಹಾಗೂ ಹಿಂದುಳಿದ ವರ್ಗದ ಪ್ರವರ್ಗ-1 ವಾರ್ಷಿಕ ಆದಾಯ ಮಿತಿ ರೂ 2.50.000, ಹಿಂದುಳಿದ ವರ್ಗ 2ಎ, 2ಬಿ, 3ಎ,3ಬಿ ವಾರ್ಷಿಕ ಮಿತಿ ರೂ 1.00.000 ಹೊಂದಿರಬೇಕು ಹೆಚ್ಚಿನ ಮಾಹಿತಿಗಾಗಿ ಶಿವಪುತ್ರಪ್ಪ ಕಕ್ಕಳಮೇಲಿ, ಜಿಲ್ಲಾ ಸಮನ್ವಯಾಧಿಕಾರಿಗಳು, ಕ.ವ.ಶಿ.ಸ.ಸಂ ಕಲಬುರಗಿ 9448650647 ಇವರನ್ನು ಮತ್ತು ಆನಂದ ಕೆ ಹಾಗೂ ಕುಮಾರ ಸ್ವಾಮಿ, ಜಿಲ್ಲಾ ಮಾಹಿತಿ ಸಹಾಯಕರು, ಕ.ವ.ಶಿ.ಸ.ಸಂ.ಕಲಬುರಗಿ 8095534843, 8971643125 ಇವರನ್ನು ಸಂಪರ್ಕಿಸಬಹುದು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…