ಕಲಬುರಗಿ: ಬೆಳಗಾವಿ ಜಿಲ್ಲೆಯಲ್ಲಿ ನಡೆದ ಮಹಿಳೆಯನ್ನು ನಗ್ನಗೊಳಿಸಿದ ಅಮಾನವೀಯ ಪ್ರಕರಣ ಮತ್ತು ರಾಜ್ಯದಲ್ಲಿ ಅವ್ಯಾಹತವಾಗಿ ನಡೆದಿರುವ ಹೆಣ್ಣುಶಿಶು ಭ್ರೂಣಹತ್ಯೆ ಖಂಡಿಸಿ ರಾಜ್ಯ ಸರಕಾರದ ವಿರುದ್ಧ ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯಲ್ಲಿ ಡಾ.ಉಮೇಶ ಜಾಧವ, ದತ್ತಾತ್ರೇಯ ಪಾಟೀಲ ರೇವೂರ, ಮಾಲೀಕಯ್ಯ ಗುತ್ತೇದಾರ, ಚಂದು ಪಾಟೀಲ,ಶಶೀಲ ನಮೋಶಿ, ಅಮರನಾಥ ಪಾಟೀಲ, ಶಿವರಾಜ ಪಾಟೀಲ ರದ್ದೇವಾಡಗಿ, ಸಿದ್ದಾಜಿ ಪಾಟೀಲ ಅನೇಕರು ಪಾಲ್ಗೊಂಡರು.