ಬೆಂಗಳೂರು/ಬೆಳಗಾವಿ; ಬೆಳಗಾವಿ ಸಮೀಪದ ಹೊಸ ವಂಟಮುರಿ ಗ್ರಾಮದಲ್ಲಿ ಇತ್ತೀಚೆಗೆ ದೌರ್ಜನ್ಯಕ್ಕೆ ಒಳಗಾಗಿರುವ ಮಹಿಳೆಗೆ ಸರಕಾರವು 2.03 ಎಕರೆ ಜಮೀನು ಮಂಜೂರು ಮಾಡಿ ಆದೇಶಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ತಿಳಿಸಿದ್ದಾರೆ.
ದೌರ್ಜನ್ಯಕ್ಕೆ ಒಳಗಾಗಿರುವ ಕಾಕತಿ ಪೆÇಲೀಸ್ ಠಾಣೆ ವ್ಯಾಪ್ತಿಯ ಹೊಸ ವಂಟಮುರಿ ಗ್ರಾಮದ ಸಂತ್ರಸ್ತ ಮಹಿಳೆಗೆ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ ಭೂ ಒಡೆತನ ಯೋಜನೆಯಡಿ ಜಮೀನು ಮಂಜೂರು ಮಾಡಿ ಆದೇಶಿಸಲಾಗಿರುತ್ತದೆ.
ಪರಿಶಿಷ್ಟ ವರ್ಗಗಳ ಕಲ್ಯಾಣ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಚಿವರಾದ ಬಿ.ನಾಗೇಂದ್ರ ಅವರು ವಿಶೇಷ ಪ್ರಕರಣವೆಂದು ಪರಿಗಣಿಸಿ ತಕ್ಷಣವೇ ಜಮೀನು ಮಂಜೂರಾತಿಗೆ ನಿರ್ದೇಶನ ನೀಡಿದ್ದರು.
ಈ ಹಿನ್ನೆಲೆಯಲ್ಲಿ ನೊಂದ ಮಹಿಳೆಗೆ ಆರ್ಥಿಕ ಸ್ಥಿರತೆ ಒದಗಿಸುವ ದೃಷ್ಟಿಯಿಂದ ವಿಶೇಷ ಪ್ರಕರಣವೆಂದು ಪರಿಗಣಿಸಿ ಜಮೀನು ಮಂಜೂರು ಮಾಡಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಅನುಮೋದನೆ ನೀಡಿರುತ್ತದೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
2.03 ಎಕರೆ ಜಮೀನು ಮಂಜೂರಾತಿ ಜತೆಗೆ ಸರಕಾರವು ಈಗಾಗಲೇ ಐದು ಲಕ್ಷ ರೂಪಾಯಿ ಪರಿಹಾರವನ್ನು ಕೂಡ ಘೋಷಿಸಿರುತ್ತದೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…