ಕಲಬುರಗಿ: ಶಿಕ್ಷಣವೇ ಶಕ್ತಿ. ಶಿಕ್ಷಣದಿಂದಲೇ ಸಮಾಜ ಸುಧಾರಣೆ . ಹೀಗಾಗಿ ವಿದ್ಯಾರ್ಥಿಗಳು ತಮ್ಮ ಗುರಿ ಸಾಧನೆಯ ಜೊತೆಗೆ ಸಾರ್ವಜನಿಕ, ದೀನ, ದಲಿತರಿಗೆ ನೆರವಾಗುವ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿ ಫೌಜಿಯಾ ಡಿ.ತರನ್ನುಮ್ ಕರೆ ನೀಡಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ವತಿಯಿಂದ ನಗರದ ಪತ್ರಿಕಾ ಭವನದಲ್ಲಿ ಭಾನುವಾರ ಪತ್ರಕರ್ತರ ಮಕ್ಕಳಿಗೆ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳಾದವರು ತಮ್ಮ ಆಸಕ್ತಿಯ ಕ್ಷೇತ್ರದಲ್ಲಿ ಮುನ್ನಡೆಯಬೇಕು. ಸರ್ಕಾರಿ, ಖಾಸಗಿ ಸೇವೆ, ಸ್ವಯಂ ಉದ್ಯೋಗ ಸೇರಿದಂತೆ ಯಾವುದೇ ಕ್ಷೇತ್ರದಲ್ಲಿ ಸಾಧನೆ ಮಾಡಿದರೂ ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಅಹರ್ನಿಶಿ ದುಡಿಯಬೇಕು ಎಂದು ತಿಳಿಸಿದರು.
ಮುಖ್ಯ ಅತಿಥಿಯಾಗಿದ್ದ ಶಾಸಕ ಅಲ್ಲಮಪ್ರಭು ಪಾಟೀಲ ಮಾತನಾಡಿ, ಪತ್ರಕರ್ತರಿಗೆ ಜಾತಿಯಿಲ್ಲ. ಪತ್ರಕರ್ತ ಸಮುದಾಯದ ಪ್ರತಿಭಾವಂತ
ಮಕ್ಕಳಿಗೆ ಪುರಸ್ಕಾರ ಮಾಡುತ್ತಿರುವುದು ಸಂತಸದ ವಿಷಯವಾಗಿದೆ ಎಂದು ಹೇಳಿದರು.
ಮುಖ್ಯ ಅತಿಥಿಯಾಗಿದ್ದ ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಅಡ್ಡೂರು ಶ್ರೀನಿವಾಸಲು ಮಾತನಾಡಿ, ಮನುಷ್ಯನಿಗೆ ಶಿಕ್ಷಣ ಬಹಳ ಮುಖ್ಯ. ಹಣ, ಅಧಿಕಾರ ಮುಖ್ಯ ಅಲ್ಲ. ಬದುಕಿನಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಗೌರವ ಸಿಗುತ್ತದೆ. ಪ್ರತಿಭಾವಂತರಿಗೆ ಪೆÇ್ರೀತ್ಸಾಹ ಅಗತ್ಯ ಎಂದು ಹೇಳಿದರು.
ಅತಿಥಿ ಉಪನ್ಯಾಸ ನೀಡಿದ ಕಮಲಾಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕಿ ಡಾ. ಶಾಂತಾ ಅಸ್ಟಿಗೆ ಮಾತನಾಡಿ, ಎಸ್ಎಸ್ಎಲ್ಸಿ ಮತ್ತು ಪಿಯುಸಿ ನಂತರ ನಡು ದಾರಿಯಲ್ಲಿ ನಿಂತ ಅನುಭವ. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಯೋಚಿಸಿ ದಿಟ್ಟ ಹೆಜ್ಜೆಯನ್ನಿಡಬೇಕು. ಆತ್ಮವಿಶ್ವಾಸ, ಶಿಸ್ತು, ಪರಿಶ್ರಮದಿಂದ ಗುರಿ ಸಾಧಿಸಬೇಕು ಎಂದರು.
ಸಂಘದ ಜಿಲ್ಲಾಧ್ಯಕ್ಷ ಬಾಬುರಾವ ಯಡ್ರಾಮಿ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಡಾ. ಶಿವರಂಜನ ಸತ್ಯಂಪೇಟೆ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಸಂಗಮನಾಥ ರೇವತಗಾಂವ ನಿರೂಪಿಸಿದರು. ಬಾಬುರಾವ ಕೋಬಾಳ ಪ್ರಾರ್ಥಿಸಿದರು. ವೀರೇಂದ್ರ ಕೊಲ್ಲೂರ ವಂದಿಸಿದರು.
ಪದಾಧಿಕಾರಿಗಳಾದ ಅಶೋಕ ಕಪನೂರ, ಬಿ.ವಿ. ಚಕ್ರವರ್ತಿ, ರವೀಂದ್ರ ವಕೀಲ್, ರಾಜು ಕೋಷ್ಟಿ, ಸಂತೋಷ ನಾಡಗಿರಿ, ಮಲ್ಲಿಕಾರ್ಜುನ ಜೋಗ್, ಅರುಣ ಕದಮ್, ರಾಮಕೃಷ್ಣ ಬಡಶೇಷಿ, ಜಯತೀರ್ಥ ಪಾಟೀಲ ಸೇರಿದಂತೆ ಪಾಲಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಭೂಮಿ ಹದವಾಯಿತು ಬುದ್ಧ ಬೀಜವಾದ. ಬಸವಣ್ಣ ಮರವಾದರು. ಅಂಬೇಡ್ಕರ್ ರು ಫಲವಾದರು. ನಾವೆಲ್ಲ ಫಲಾನುಭವಿಗಳಾದೆವು. – ಡಾ. ಶಾಂತಾ ಅಸ್ಟಿಗೆ, ಪ್ರಾಧ್ಯಾಪಕರು, ಕಮಲಾಪುರ
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…