ಕಲಬುರಗಿ: ಇಲ್ಲಿನ ಸರಕಾರಿ ಜಿಮ್ಸ್ ಮೆಡಿಕಲ್ ಕಾಲೇಜಿನ ವಸತಿ ನಿಲಯದ ವಿದ್ಯಾರ್ಥಿನಿಯರಲ್ಲಿ ಗಂಟಲು ಮಾರಿ (ಡಿಫ್ತೀರಿಯಾ) ಸೋಂಕು ಪತ್ತೆಯಾಗಿದ್ದು ಆಸ್ಪತ್ರೆಯ ವಸತಿ ನಿಯಲದ ಆವರಣದಲ್ಲಿ ಆತಂಕದ ವಾತವರಣ ಸೃಷ್ಠಿಯಾಗಿದೆ.
ಜಿಲ್ಲೆಯ ಸರಕಾರಿ ಜಿಮ್ಸ್ ಮೆಡಿಕಲ್ ವಸತಿ ನಿಲಯದ 21 ವಿದ್ಯಾರ್ಥಿನಿಯರಲ್ಲಿ ಗಂಟಲು ಮಾರಿ ಈ ಸೋಂಕು ಕಾಣಿಸಿಕೊಂಡಿದ್ದು, ಸೋಂಕು ತಗುಲಿದ ವಿದ್ಯಾರ್ಥಿನಿಯರಿಗೆ ಜಿಮ್ಸ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.
ನಗರದ ಸರಕಾರಿ ಆಸ್ಪತ್ರೆಯ ಎರಡನೇ ಅಂತಸ್ಥಿನಲ್ಲಿ ಸೋಂಕು ಪತ್ತೆಯಾದ ವಿದ್ಯಾರ್ಥಿಯರನ್ನು ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಮೇಲಿನ ಅಂತಸ್ಥಿಗೆ ಸಾಮಾನ್ಯ ಜನರಿಗೆ ಪ್ರವೇಶ ನಿರ್ಭಂದಿಸಲಾಗಿದೆ ಎಂದು ತಿಳಿದು ಬಂದಿದೆ.
ನಗರದ ಸರಕಾರಿ ಮೆಡಿಕಲ್ ಕಾಲೇಜಿನ ವಸತಿ ನಿಲಯದಲ್ಲಿನ 110 ವಿದ್ಯಾರ್ಥಿನಿಯರು ಸೇರಿ 30ಕ್ಕೂ ಹೆಚ್ಚು ಸಿಬ್ಬಂದಿಗೂ ತಪಾಸಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದ್ದು, ಈ ಪೈಕಿ 21 ವಿದ್ಯಾರ್ಥಿನಿಯರಲ್ಲಿ ಡಿಫ್ತೀರಿಯಾ ಸೋಂಕು ಪತ್ತೆಯಾಗಿದ್ದು, ಈ ಸೋಂಕು ಇತರರಿಗೆ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಪ್ರತ್ಯೇಕ ವಾರ್ಡ್ನಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿದುಬಂದಿದೆ.
ಸೋಂಕು ಪತ್ತೆಯಾಗಿದ ತಪಾಸಣೆಯ ಮಾದರಿ ವೈದ್ಯಕೀಯ ಪರೀಕ್ಷೆಗಾಗಿ ಬೆಂಗಳೂರಿನ ಲ್ಯಾಬ್ಗೆ ರವಾನೆ ಮಾಡಲಾಗಿದೆ ಎಂದು ಆಸ್ಪತ್ರೆಯ ಮೂಲಗಳಿಂದ ತಿಳಿದುಬಂದಿದೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಮಾಹಿತಿ ನೀಡಿರೋ ಜಿಮ್ಸ್ ಅಧಿಕಾರಿಗಳು, ಜಿಮ್ಸ್ ವಸತಿ ನಿಲಯದಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮ ವಹಿಸಿರುವುದಾಗಿ ಮಾಹಿತಿ ತಿಳಿದು ಬಂದಿದೆ.
ಒಟ್ಟಾರೆಯಾಗಿ ಜಮ್ಸ್ ಆಸ್ಪತ್ರೆಯ ಆವರಣದಲ್ಲಿ ಆತಂಕದ ವಾತವರಣ ನಿರ್ಮಾಣವಾಗಿದೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…