ಆನೇಕಲ್, ಡಿ 17: ನೇಪಾಳದ ಕಠ್ಮಂಡುವಿನಲ್ಲಿ ನಡೆದ ಮೊಟ್ಟ ಮೊದಲ ಅಂತಾರಾಷ್ಟ್ರೀಯ ಟಾರ್ಗೆಟ್ ಬಾಲ್ ಪ್ರೇಸಿಡೆಂಟ್ ಕಪ್ ಪಂದ್ಯದಲ್ಲಿ ಪ್ರಶಸ್ತಿ ಗೆದ್ದ ಭಾರತ ತಂಡದಲ್ಲಿ ಕರ್ನಾಟಕದ ಏಳು ಆಟಗಾರರು ಇದ್ದಾರೆ. ಅದರಲ್ಲಿ ನದೀಮ್ ಪಾಷಾ, ಪ್ರವೀಣ್ ಕುಮಾರ್ ಆನೇಕಲ್ ತಾಲ್ಲೂಕಿನ ಆಟಗಾರರು ಎಂಬುದು ವಿಶೇಷವಾಗಿದೆ.
ಪ್ರತಿಯೊಬ್ಬ ಕ್ರೀಡಾಪಟುಗಳು ತಮ್ಮದೇ ಆದ ಕ್ರೀಡಾ ಕ್ಷೇತ್ರದಲ್ಲಿ ಬೆಳೆಯಬೇಕು. ಹಾಗೂ ಆರ್ಥಿಕತೆಯ ಸಮಸ್ಯೆಯಿಂದ ಕ್ರೀಡಾಪಟುಗಳಿಗೆ ಸಾಧನೆಯು ಅಡ್ಡಿಯಾಗಬಾರದು ಎಂಬ ನಿಟ್ಟಿನಲ್ಲಿ ಕ್ರೀಡಾ ಪ್ರತಿಭೆಗಳಿಗೆ ಎಲ್ಲರೂ ಕೈಲಾದ ಸಹಾಯ, ಸಹಕಾರ ನೀಡಬೇಕೆಂದು ಸಮಾಜ ಸೇವಕ ಆನೇಕಲ್ ರವಿ ತಿಳಿಸಿದ್ದಾರೆ.
ನದೀಮ್ ಪಾಷಾ ಅವರು ಕಡು ಬಡತನದಿಂದ ಮೇಲೆ ಬಂದ ಕ್ರೀಡಾಪಟು ಆಗಿದ್ದಾರೆ. ಅವರ ಈ ಸಾಧನೆಯಿಂದ ಆನೇಕಲ್ ತಾಲ್ಲೂಕಿನ ಹೆಸರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸಿದೆ. ಅವರಿಗೆ ಆನೇಕಲ್ ಜನತೆಯ ಪರವಾಗಿ ಶುಭಾಶಯ ಕೋರುತ್ತೇನೆ. ಅವರು ಕ್ರೀಡಾ ಕ್ಷೇತ್ರದಲ್ಲಿ ಮತ್ತಷ್ಟು ಸಾಧನೆಗಳನ್ನು ಮಾಡಲಿ ಎಂದು ಶುಭ ಹಾರೈಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…