ಬಿಸಿ ಬಿಸಿ ಸುದ್ದಿ

ಕ್ರೀಡೆಗೆ ಸದೃಢ ಮನಸ್ಸು ಮತ್ತು ದೈಹಿಕ ಪರಿಶ್ರಮ ಮುಖ್ಯ

ಕಲಬುರಗಿ: ಪ್ರತಿಯೊಬ್ಬ ವ್ಯಕ್ತಿಯು ಉತ್ತಮ ವ್ಯಕ್ತಿತ್ವ ಮತ್ತು ಸಾಧನೆಗೆ ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದರಿಂದ ಸಾಧ್ಯವಿದೆ. ಮಾನಸಿಕ ಸ್ಥೈರ್ಯ ಮತ್ತು ಸದೃಢ ಪರಿಶ್ರಮದಿಂದ ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಬಹುದು. ಕ್ರೀಡೆಯಲ್ಲಿ ಸದೃಢ ಮನಸ್ಸು ಮತ್ತು ದೈಹಿಕ ಪರಿಶ್ರಮ ಮುಖ್ಯವಾಗಿದೆ ಎಂದು ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ದಯಾನಂದ ಅಗಸರ ಅಭಿಪ್ರಾಯಪಟ್ಟರು.

ಗುಲಬರ್ಗಾ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ಪ್ರಸಕ್ತ ಶೈಕ್ಷಣಿಕ ಸಾಲಿನ 42ನೇ ಅಂತರ್ ಮಹಾವಿದ್ಯಾಲಯಗಳ (ಪುರುಷ ಮತ್ತು ಮಹಿಳಾ) ಕ್ರೀಡಾ ಕೂಟವನ್ನು ವಿಶ್ವವಿದ್ಯಾಲಯ ಕ್ರೀಡಾಂಗಣದಲ್ಲಿ ಕ್ರೀಡಾಧ್ವಜರೋಹಣ ನೆರವೇರಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳಿಗೆ ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳುವಿಕೆಯಿಂದ ಸಂತೋಷ ಮತ್ತು ತೃಪ್ತಿದಾಯಕ ಜೀವನಾನುಭವದ ಪಾಠವನ್ನು ಕಲಿಸುತ್ತದೆ. ಸೋಲು ಗೆಲುವಿನ ಹಾಗೂ ಬಹುಮಾನದ ಬಗೆ ಚಿಂತಿಸುವ ಅಗತ್ಯವಿಲ್ಲ. ಕ್ರೀಡೆಗಳಲ್ಲಿ ಶ್ರದ್ಧೆ ಮತ್ತು ಕ್ರಿಯಾಶೀಲ ಮನಸ್ಸು ಮುಖ್ಯವಾಗಿರುತ್ತದೆ. ಶಿಕ್ಷಣ ಸಂಸ್ಥೆಗಳಲ್ಲಿನ ಕ್ರೀಡಾ ಮಾರ್ಗದರ್ಶಕರು ವಿದ್ಯಾರ್ಥಿಗಳಿಗೆ ಉತ್ತಮ ಸ್ಫೂರ್ತಿ ಮತ್ತು ಪ್ರೇರಣೆ ನೀಡಿದರೆ ಭವಿಷ್ಯದ ಕ್ರೀಡಾಪಟುಗಳನ್ನು ರೂಪಿಸಬಹುದು. ಗುಲಬರ್ಗಾ ವಿಶ್ವವಿದ್ಯಾಲಯದ ಅಧೀನದಲ್ಲಿರುವ ಕಾಲೇಜುಗಳ ಕ್ರೀಡಾ ಶಿಕ್ಷಕರು ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸಬೇಕಿದೆ ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿರುವ ವಿದ್ಯಾರ್ಥಿಗಳು ಅತ್ಯುತ್ತಮ ಪ್ರತಿಭೆ ಪ್ರದರ್ಶಿಸಿ ಎಂದು ಹೇಳುವ ಮೂಲಕ ಶುಭ ಹಾರೈಸಿದರು.

ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ. ಎನ್. ಜಿ. ಕಣ್ಣೂರು ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ ಯುವಕರು ಅಧ್ಯಯನದ ಜೊತೆಗೆ ಪಠ್ಯೇತರ ಚಟುವಟಿಕೆಗಳ ಬಗೆ ಆಸಕ್ತಿ ಬೆಳೆಸಿಕೊಳ್ಳಬೇಕು. ದೈಹಿಕ ಶಿಕ್ಷಣ ಅಧ್ಯಯನ ಜೊತೆಗೆ ಕ್ರೀಡಾಕೂಟಗಳಲ್ಲಿರುವ ಅವಕಾಶಗಳನ್ನು ಬಳಸಿಕೊಂಡು ಅತ್ಯುತ್ತಮ ಸಾಧನೆ ಮಾಡಬಹುದಾಗಿದೆ. ಕ್ರೀಡಾ ಕಾರ್ಯಗಳಲ್ಲಿ ಸದಾ ಕ್ರೀಯಾಶೀಲರಾದರೆ ಮಾನಸಿಕ ಮತ್ತು ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದರು.

ಗುಲಬರ್ಗಾ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ಕ್ರೀಡಾಪಟುಗಳು ಕ್ರೀಡಾಂಗಣದಲ್ಲಿ ಕ್ರೀಡಾಜ್ಯೋತಿ ಪ್ರದರ್ಶಿಸುವ ಮೂಲಕ ಕುಲಪತಿಗಳಿಗೆ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಅತಿಥಿ ಗಣ್ಯರು ಶಾಂತಿದ್ಯೋತಕವಾಗಿ ಪಾರಿವಾಳಗಳನ್ನು ಹಾರಿಬಿಟ್ಟರು. ದೈಹಿಕ ಶಿಕ್ಷಣ ವಿಭಾಗದ ಎಂ.ಪಿ.ಎಡ್ ವಿದ್ಯಾರ್ಥಿನಿ ನಾಗೇಂದ್ರಮ್ಮ ಕ್ರೀಡಾಪ್ರತಿಜ್ಞೆ ಬೋಧಿಸಿದರು. ವಿಶ್ವವಿದ್ಯಾಲಯದ ಪ್ರೌಢಶಾಲೆಯ ವಿದ್ಯಾರ್ಥಿಗಳು ಬ್ಯಾಂಡ್ ಬಾರಿಸುವ ಮೂಲಕ ಸ್ಪರ್ಧಿಗಳ ಕ್ರೀಡಾ ಪಥಸಂಚಲನಕ್ಕೆ ಸಾಥ್ ನೀಡಿದರು.

ಮುಖ್ಯ ಅತಿಥಿಗಳಾಗಿ ಗುಲಬರ್ಗಾ ವಿಶ್ವವಿದ್ಯಾಲಯದ ಶಿಕ್ಷಣ ನಿಕಾಯದ ಡೀನ್ ಪ್ರೊ. ಹೂವಿನಬಾವಿ ಬಾಬಣ್ಣ, ವಾಣಿಜ್ಯ ವಿಭಾಗದ ಪ್ರಾಧ್ಯಾಪಕ ಪ್ರೊ. ಎ. ಎಸ್. ಹೊಸಮನಿ, ಅಂತರಾಷ್ಟ್ರೀಯ ಕ್ರೀಡಾಪಟು ತವಡೇಜಿ, ಸ್ಥಳೀಯ ಅಭಿಯಂತರ ಜಯಪ್ರಕಾಶ್ ಕರ್ಜಗಿ ಉಪಸ್ಥಿತರಿದ್ದರು.

ವಿಶ್ವವಿದ್ಯಾಲಯ ಅಧೀನದ ಪದವಿ ಕಾಲೇಜುಗಳ ನಿರ್ದೇಶಕರು ಹಾಗೂ ಕ್ರೀಡಾ ತಂಡಗಳು, ದೈಹಿಕ ಶಿಕ್ಷಣ ವಿಭಾಗದ ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿ, ದೈಹಿಕ ಶಿಕ್ಷಣ ವಿಭಾಗದ ಸಂಯೋಜಕ ಹಾಗೂ ಪ್ರಾಂಶುಪಾಲ ಡಾ. ಹನುಮಂತ ಜಂಗೆ ವಂದಿಸಿದರು. ಗುಲಬರ್ಗಾ ನ್ಯಾಯಾಲಯದ ಸುನಿಲ್ ಚಾಂದೆ ಪ್ರಾರ್ಥಿಸಿದರು. ಸೇಡಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ. ಜಗನ್ನಾಥ ಪಟ್ಟಣಕರ್ ಕಾರ್ಯಕ್ರಮ ನಿರ್ವಹಿಸಿದರು.

ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ 1981-82ನೇ ಶೈಕ್ಷಣಿಕ ಸಾಲಿನಲ್ಲಿ ನಾನು 24 ವರ್ಷದ ವಿದ್ಯಾರ್ಥಿಯಾಗಿ ಅಧ್ಯಯನ ಮಾಡುತ್ತಿದ್ದ ಸಂದರ್ಭದಲ್ಲಿ ಇದೇ ಕ್ರೀಡಾಂಗಣದಲ್ಲಿ ಅಭ್ಯಾಸ ಮಾಡಿ ಅಥ್ಲೆಟಿಕ್ ಚಾಂಪಿಯನ್ನಾಗಿದ್ದೆ. ಕ್ರೀಡೆಯಲ್ಲಿ ಅಸಾಧ್ಯವನ್ನು ಸಾಧಿಸಬಹುದು. ಅದಕ್ಕೆ ಸದೃಢ ಮನಸ್ಸು ಮತ್ತು ಸತತ ಪರಿಶ್ರಮ ಬೇಕಿದೆ. ಯುವಕರು ಸಾಕಷ್ಟು ಕ್ರೀಡಾ ಚಟುವಟಿಕೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದರೆ ಸಾಧನೆ ನಿಮ್ಮದಾಗಲಿದೆ.- ಪ್ರೊ. ದಯಾನಂದ ಅಗಸರ, ಕುಲಪತಿ, ಗುಲಬರ್ಗಾ ವಿಶ್ವವಿದ್ಯಾಲಯ.
emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

6 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

6 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

6 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

23 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago