೦೧೦೯ ಸುರಪುರ ೦೧
ನಗರದ ತಹಶಿಲ್ದಾರ ಕಚೇರಿ ಸಭಾಂಗಣದಲ್ಲಿ ಭಾನುವಾರ ತಹಶಿಲ್ದಾದರ ಸುರೇಶ ಅಂಕಲಗಿ ಅಧ್ಯಕ್ಷತೆಯಲ್ಲಿ ಮತದಾರರ ಪರಿಶೀಲನಾ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.
ಸುರಪುರ: ಮತದಾರರ ಪಟ್ಟಿಯಲ್ಲಿರುವ ಲೋಪದೋಷಗಳು ಹಾಗೂ ನಕಲಿ ಮತದಾರರನ್ನು ತಡೆಯುವ ನಿಟ್ಟಿನಲ್ಲಿ ಕೇಂದ್ರ ಚುನಾವಣಾ ಆಯೋಗವು ಮತದಾರರ ಪರಿಶೀಲನೆ ಕಾರ್ಯ ಆರಂಭಿಸಲಾಗಿದೆ ಎಂದು ತಹಶಿಲ್ದಾರ ಸುರೇಶ ಅಂಕಲಗಿ ತಿಳಿಸಿದರು.
ನಗರದ ತಹಶಿಲ್ದಾರ ಕಚೇರಿಯ ಸಭಾಂಗಣದಲ್ಲಿ ನಡೆದ ಮತದಾರರ ಪರಿಶೀಲನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ತಾಲೂಕಿನಲ್ಲಿ ನಕಲಿ ಮತದಾರರ ಹಾವಳಿ ಇದೆ ಎಂದು ಸಾಕಷ್ಟು ದೂರುಗಳು ಬಂದಿವೆ ಮತ್ತು ಮತದಾರರ ಪಟ್ಟಿಯಲ್ಲಿನ ಹೆಸರು ಮತ್ತು ವಿಳಾಸಗಳು ತಪ್ಪಾಗಿ ನಮೂದಾಗಿದ್ದರೆ ಅವುಗಳನ್ನು ಪರಿಶೀಲಿಸಿ ತಿದ್ದುಪಡಿ ಮಾಡಿಕೊಳ್ಳಬಹುದಾಗಿದೆ ಎಂದು ತಿಳಿಸಿದರು.
ಮತದಾರರ ಪಟ್ಟಿಯನ್ನು ಸಮಗ್ರವಾಗಿ ಪರಿಷ್ಕಿರಿಸುವ ಉದ್ದೇಶಹೊಂದಿದೆ ಕಾರಣ ಮತಗಟ್ಟೆ ಅಧಿಕಾರಿಗಳು ತಪ್ಪದೆ ಪ್ರತಿಯೊಬ್ಬ ಮತದಾರರನ್ನು ಸಂಪರ್ಕಿಸಿ ಮತದಾರರ ಪಟ್ಟಿಯಲ್ಲಿರುವ ಅವರ ಹೆಸರು ಮತ್ತು ವಿಳಾಸ ಹಾಗೂ ಭಾವಚಿತ್ರಗಳನ್ನು ಪರಿಶೀಲಿಸಿ ಲೋಪದೋಶ ವಿದ್ದಲ್ಲಿ ತಮಗೆ ನೀಡಿರುವ ಮೊಬೈಲ ಅಪ್ಲಿಕೇಶನ ಮೂಲಕ ತಿದ್ದುಪಡಿಮಾಡಿ ಈ ಕಾರ್ಯದ ಕುರಿತು ನಿರ್ಲಕ್ಷ ಸಲ್ಲದು ಎಂದು ಮತಗಟ್ಟೆ ಅಧಿಕಾರಿಗಳಿಗೆ ಎಚ್ಚರಿಸಿದರು.
ಶಿವರಾಜ ನಾಯಕ ಬೊಮ್ಮನಳ್ಳಿ, ವೆಂಕಟೇಶ ಭಕ್ರಿ, ಶಿವರಾಜ ವಾಗಣಗೇರಾ ಅಧಿಕಾರಿಗಳಾದ ಅಶೋಕ ಸುರಪುರ, ಬಸವರಾಜ ಇನಾಮದಾರ, ವಿಶ್ವನಾಥ, ಸೋಮಶೇಕರ, ಪ್ರದೀಪ ಸೇರಿದಂತೆ ಇನ್ನಿತರರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…