ಬಿಸಿ ಬಿಸಿ ಸುದ್ದಿ

ಅತಿಥಿ ಉಪನ್ಯಾಸಕ ಸೇವಾ ಖಾಯಂಮಾತಿಗೆ ಒತ್ತಾಯಿಸಿ ಪ್ರತಿಭಟನೆ

ಶಹಾಬಾದ: ನಗರದಲ್ಲಿ ಅತಿಥಿ ಉಪನ್ಯಾಸಕರು ಸೇವಾ ಖಾಯಂಮಾತಿ ಮಾಡುವಂತೆ ಒತ್ತಾಯಿಸಿ 24 ದಿನಗಳಿಂದ ನಡೆಯುತ್ತಿರುವ ಧರಣಿ ಸ್ಥಳಕ್ಕೆ ಜಿಪಂ ವಿರೋಧ ಪಕ್ಷದ ನಾಯಕ ಶಿವಾನಂದ ಪಾಟೀಲ್ ಮರತೂರ ಹಾಗೂ ಮುಖಂಡ ಅಜಿತ್‍ಕುಮಾರ ಪಾಟೀಲ ಆಗಮಿಸಿ ಅತಿಥಿ ಉಪನ್ಯಾಸಕರ ಸಮಸ್ಯೆಯ ಅಹವಾಲು ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ಮಾತನಾಡಿ, ನಮ್ಮ ರಾಜ್ಯದ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸುಮಾರು 11,000 ಕ್ಕಿಂತ ಅಧಿಕ ಅತಿಥಿ ಉಪನ್ಯಾಸಕರು ಹತ್ತಾರು ವರ್ಷಗಳಿಂದ ಅತ್ಯಂತ ಕಡಿಮೆ ಗೌರವ ಭತ್ಯೆ ಪಡೆದು ಸೇವೆ ಸಲ್ಲಿಸುತ್ತಾ ಬಂದಿರುತ್ತಾರೆ. ಇವರಲ್ಲಿ ಸಾವಿರಾರು ಅತಿಥಿ ಉಪನ್ಯಾಸಕರು ವಯೋಮಿತಿ ಮೀರಿದ/ಮೀರುತ್ತಿರುವವರು ಇದ್ದಾರೆ.

ಉಪನ್ಯಾಸಕರಿಗೆ ಸೇವಾ ಖಾಯಂಮಾತಿ ಇಲ್ಲದೆ ನಮ್ಮೆಲ್ಲರ ಬದುಕು ಅಭದ್ರತೆಯಲ್ಲಿದೆ.ಅತಿಥಿ ಉಪನ್ಯಾಸಕ, ತಾತ್ಕಾಲಿಕ ಎಂಬುದು ಅವೈಜ್ಞಾನಿಕ ಪದ್ಧತಿ ಉನ್ನತ ಶಿಕ್ಷಣ ವ್ಯವಸ್ಥೆಗೆ ಮತ್ತು ಕಾಲೇಜುಗಳ ಅಭಿವೃದ್ಧಿ ಹಾಗೂ ವಿದ್ಯಾರ್ಥಿಗಳ ಗುಣಮಟ್ಟದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ.

ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರು ವೃತ್ತಿಯಲ್ಲಿ ಸಾಕಷ್ಟು ಪ್ರತಿಭಾವಂತ, ಅರ್ಹರು ಮತ್ತು ಬೋಧನಾ ಕೌಶಲ್ಯವುಳ್ಳ ಅಭ್ಯರ್ಥಿಗಳು ಇದ್ದರೂ ಸಹ ಅವರು ತಮ್ಮ ಸಾಮಥ್ರ್ಯಕ್ಕೆ ತಕ್ಕ ಹಾಗೆ ಶೈಕ್ಷಣಿಕ ಚಟುವಟಿಕೆಯಲ್ಲಿ ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಾಗದ ಪರಿಸ್ಥಿತಿ ಇದೆ. ಜತೆಗೆ ಅತ್ಯಂತ ಕಡಿಮೆ ವೇತನ ಸಮಯಕ್ಕೆ ಸರಿಯಾಗಿ ಗೌರವಧನ ಪಾವತಿಯಾಗದಿರುವುದರಿಂದ ಸಾಕಷ್ಟು ಸಂಕಷ್ಟಕ್ಕೆ ಒಳಗಾಗಿದ್ದೆವೆ.ಕೂಡಲೇ ನಮ್ಮ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದರು.

ಶಿವಾನಂದ ಪಾಟೀಲ್ ಮರತೂರ ಅತಿಥಿ ಉಪನ್ಯಾಸಕರ ಸಮಸ್ಯೆಯ ಅಹವಾಲು ಸ್ವೀಕರಿಸಿ, ನಿಮ್ಮ ಬೇಡಿಕೆಗಳನ್ನು ಸರ್ಕಾರದ ಉನ್ನತ ವ್ಯಕ್ತಿಗಳ ಗಮನಕ್ಕೆ ತರುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಸಂಘದ ಅಧ್ಯಕ್ಷಚಂದ್ರಕಾಂತ ಶಿರೋಣಿ,ಡಾ.ರವೀಂದ್ರ ನರೋಣಿ, ಡಾ.ಜ್ಞಾನಮಿತ್ರಮಡಾ.ಮಮತಾ ಪಾಟೀಲ,ಡಾಬಾಬುರಾಯ ಸಾಗರ,ಡಾ.ಅನೀಲಕುಮಾರ ಕುದನೂರ,ಡಾಪ್ರೇಮಸಿಂಗ,ನಾಗವೇಣಿ ಹಿರೇಮಠ,ಡಾ.ದಯಾನಂದ, ಸುಧಾಕರ ದೇಶಪಾಂಡೆ, ಡಾ.ನಾಗೇಂದ್ರಪ್ಪ, ಡಾಗುರುರಾಜ ಕುಲಕರ್ಣಿ,ಡಾ.ಸುರೇಖಾ ಇತರರು ಇದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

6 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

6 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

6 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

22 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago