ಬಿಸಿ ಬಿಸಿ ಸುದ್ದಿ

ವೇದಾ ಪಬ್ಲಿಕ್ ಶಾಲೆಗೆ ಪ್ರತಿಷ್ಠಿತ ಪ್ರಶಸ್ತಿ

ಕಲಬುರಗಿ: ಬೆಂಗಳೂರಿನ ವಿಮಾನ ನಿಲ್ದಾಣದ ಹತ್ತಿರ ತಾಜ್ ಹೋಟೆಲನಲ್ಲಿ ನಡೆದ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕಲಬುರಗಿಯ ಪ್ರತಿಷ್ಠಿತ ವೇದಾ ಪಬ್ಲಿಕ್ ಸ್ಕೂಲ್‍ಗೆ ಎರಡು ವಿಭಾಗದಲ್ಲಿ ಪ್ರತಿಷ್ಠಿತ ಪ್ರಶಸ್ತಿಗೆ ಭಾಜನವಾಗಿದೆ.

ವಿದ್ಯಾರ್ಥಿಗಳಿಗೆ ವೈಯಕ್ತಿಕ ಕಾಳಜಿ ವಹಿಸಿದ ಅನುಪಮ ಸೇವೆ ಸಲ್ಲಿಸಿದ ಸಿಬಿಎಸ್‍ಸಿ ಪ್ಯಾರಾಮೀಟರ್ ವೈಸ್ ವಿಭಾಗದ ಅಡಿ (ಭಾರತದ ಶಾಲಾ ಮೆರಿಟ್ ಪ್ರಶಸ್ತಿ) ಮತ್ತು ವೈಯಕ್ತಿಕ ವಿಭಾಗದಡಿ ಶಾಲೆಯ ಸಂಸ್ಥಾಪಕ ಅಧ್ಯಕ್ಷ ಡಾ. ರವಿ ಎಸ್ ಮಲಶೆಟ್ಟಿ ಅವರಿಗೆ 2023ನೇ ವರ್ಷದ ಅತ್ಯಂತ ಪ್ರಭಾವಶಾಲಿ ಶಿಕ್ಷಣ ತಜ್ಞ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಪ್ರತಿಷ್ಠಿತ ಪ್ರಶಸ್ತಿಯು ಶಾಲೆಯ ಸಮಗ್ರ ಅಭಿವೃದ್ಧಿ ಹಾಗೂ ಶಾಲೆಯ ಅಧ್ಯಕ್ಷರ ಸಮರ್ಪಿತ ಪ್ರಯತ್ನಗಳು ಮತ್ತು ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಅತ್ಯುತ್ತಮ ಕೊಡುಗೆಗಳನ್ನು ಗುರುತಿಸಿ ಆಯೋಜಕರು ಪ್ರಶಸ್ತಿಗೆ ಆಯ್ಕೆ ಮಾಡಿರುತ್ತಾರೆ. ಶಾಲೆಯ ಕ್ಯಾಂಪಸ್ ಆವರಣದಲ್ಲಿ ಮೂಲಸೌಕರ್ಯ ಒತ್ತುಕೊಟ್ಟು, ಸ್ವಚ್ಛತೆ, ಶುಚಿತ್ವ, ವಿದ್ಯಾರ್ಥಿಗಳಲ್ಲಿ ಶಿಸ್ತುಬದ್ಧ ಬೋಧನೆ, ನುರಿತ ಸಿಬ್ಬಂದಿ, ಅತ್ಯಾಧುನಿಕ ಪೀಠೋಪಕರಣ, ಸುಸಜ್ಜಿತ ಕಟ್ಟಡ ಹೀಗೆ ಎಲ್ಲದರಲ್ಲೂ ಗುಣಮಟ್ಟದ ಕಾಯ್ದುಕೊಂಡ ವೇದಾ ಪಬ್ಲಿಕ್ ಶಾಲೆ ಜನಮನ್ನಣೆಗೆ ಪಾತ್ರವಾಗಿದೆ.

ಈ ದಿಸೆಯಲ್ಲಿ ಗುಣಮಟ್ಟದ ಶಿಕ್ಷಣ ನೀಡುತ್ತಿರುವುದಕ್ಕೆ ರಾಜ್ಯ, ರಾಷ್ಟ್ರೀಯ ಪ್ರಶಸ್ತಿಗಳು ಹುಡುಕಿಕೊಂಡು ಬರುತ್ತಿವೆ. ಈ ಎಲ್ಲ ಯಶಸ್ಸಿಗೆ ಕಾರಣಿಭೂತರಾದ ಶಿಕ್ಷಣ ಪ್ರೇಮಿಗಳು, ಪೋಷಕರು, ವಿದ್ಯಾರ್ಥಿಗಳು, ಸಿಬ್ಬಂದಿ ವರ್ಗದ ಪರಿಶ್ರಮಕ್ಕೆ ವೇದಾ ಪಬ್ಲಿಕ್ ಸ್ಕೂಲ್‍ನ ಪ್ರಿನ್ಸಿಪಾಲ್ ಆರತಿ ಮಾಲಶೆಟ್ಟಿ ಹರ್ಷ ವ್ಯಕ್ತಪಡಿಸಿದ್ದಾರೆ. ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ಹೆಜ್ಜೆ ಇಡುತ್ತಿರುವ ಶಾಲೆಯ ಆಡಳಿತ ಮಂಡಳಿ ವರ್ಗ, ಬೋಧಕ-ಬೋಧಕೇತರ ಸಿಬ್ಬಂದಿ ಸಹ ಅಭಿನಂದಿಸಿದ್ದಾರೆ.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 hour ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 hour ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 hour ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

18 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

20 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago