ಬಿಸಿ ಬಿಸಿ ಸುದ್ದಿ

ಸಿದ್ದರಾಮಯ್ಯ ಅವರಿಂದ ಪ್ರಧಾನಿ ಮೋದಿಗೆ ಭೇಟಿ: ರಾಜ್ಯಕ್ಕೆ 18,177.44 ಕೋಟಿ ರೂ. ಬರ ಪರಿಹಾರ ಬಿಡುಗಡೆಗೆ ಮನವಿ

ಬೆಂಗಳೂರು/ನವದೆಹಲಿ; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನವದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿಯ ಕುರಿತು ವಿವರಿಸಿ, ಶೀಘ್ರವೇ 18,177.44 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.

ಇದರಲ್ಲಿ 4663.12 ಕೋಟಿ ರೂ. ಇನ್‍ಪುಟ್ ಸಬ್ಸಿಡಿ, 12,577.86 ಕೋಟಿ ರೂ. ತುರ್ತು ಪರಿಹಾರ, 566.78 ಕೋಟಿ ರೂ. ಕುಡಿಯುವ ನೀರಿಗಾಗಿ ಹಾಗೂ 363.68 ಕೋಟಿ ರೂ. ಜಾನುವಾರುಗಳ ಸಂರಕ್ಷಣೆಗಾಗಿ ಒದಗಿಸುವಂತೆ ಕೋರಲಾಗಿದೆ.

ರಾಜ್ಯದಲ್ಲಿ 236 ರಲ್ಲಿ 223 ತಾಲ್ಲೂಕುಗಳು ಬರಪೀಡಿತವಾಗಿದ್ದು, ಅದರಲ್ಲಿ 196 ತಾಲ್ಲೂಕುಗಳಲ್ಲಿ ಬರದ ತೀವ್ರತೆ ಹೆಚ್ಚಾಗಿದೆ. ಇದರಿಂದಾಗಿ 48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ನಷ್ಟವಾಗಿದ್ದು, ಇದರಿಂದ ಹೆಚ್ಚಿನ ಸಂಖ್ಯೆಯ ಸಣ್ಣ ಮತ್ತು ಅತಿ ಸಣ್ಣ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ವಿವರಿಸಿದರು. ಎನ್.ಡಿ.ಆರ್.ಎಫ್. ನಿಂದ 4663.12 ಕೋಟಿ ರೂ. ಇನ್‍ಪುಟ್ ಸಬ್ಸಿಡಿ ಒದಗಿಸುವಂತೆ ಮನವಿ ಮಾಡಲಾಗಿದೆ.

ರೈತರಿಗೆ ಇನ್‍ಪುಟ್ ಸಬ್ಸಿಡಿ ನೀಡಲು 2015-16 ರ ಕೃಷಿ ಗಣತಿಯನ್ನು ಪರಿಗಣಿಸಲಾಗುತ್ತಿದ್ದು, ಇದು 8 ವರ್ಷ ಹಳೆಯ ಮಾಹಿತಿಯಾಗಿದೆ. ಅಲ್ಲದೆ, ರಾಜ್ಯದಲ್ಲಿ ರೈತರ ದತ್ತಾಂಶವನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ದಾಖಲಿಸಲಾಗಿದ್ದು, ಪಿಎಂ-ಕಿಸಾನ್ ಯೋಜನೆಗೆ ಇದನ್ನು ಪರಿಗಣಿಸಲಾಗುತ್ತಿದೆ. ಇದರನ್ವಯ ರಾಜ್ಯದಲ್ಲಿ 83 ಲಕ್ಷ ಜನ ಸಣ್ಣ ಮತ್ತು ಅತಿ ಸಣ್ಣ ರೈತರಿದ್ದು, ಪರಿಹಾರ ವಿತರಣೆಗೆ ಈ ದತ್ತಾಂಶವನ್ನು ಪರಿಗಣಿಸುವಂತೆ ಮನವಿ ಮಾಡಿದರು. ಜೊತೆಗೆ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಬರಪೀಡಿತ ತಾಲ್ಲೂಕುಗಳಲ್ಲಿ ಉದ್ಯೋಗದ ದಿನಗಳನ್ನು 100 ರಿಂದ 150 ದಿನಗಳಿಗೆ ಹೆಚ್ಚಿಸುವಂತೆ ಆಗ್ರಹಿಸಿದರು.

ಬರ ಪರಿಹಾರಕ್ಕಾಗಿ ರಾಜ್ಯದ ಮೊದಲ ಪ್ರಸ್ತಾವನೆಯನ್ನು ಕೇಂದ್ರ ಕೃಷಿ ಸಚಿವಾಲಯಕ್ಕೆ ದಿನಾಂಕ 22-09-2023 ರಂದ ಸಲ್ಲಿಸಲಾಗಿತ್ತು ಭಾರತ ಸರ್ಕಾರದ ಬರ ಅಧ್ಯಯನ ತಂಡವು ಅಕ್ಟೋಬರ್ ತಿಂಗಳ 4 ರಿಂದ 9ರ ನಡುವೆ ಭೇಟಿ ನೀಡಿ, ವರದಿಯನ್ನು ಸಲ್ಲಿಸಿದೆ. ಅದರ ನಂತರ ಇನ್ನೂ 21 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಯಿತು. ಆದ್ದರಿಂದ ಅಕ್ಟೋಬರ್ 20 ರಂದು ಕೇಂದ್ರ ಕೃಷಿ ಸಚಿವಾಲಯಕ್ಕೆ ಎನ್.ಡಿ.ಆರ್.ಎಫ್. ಅಡಿ 17,901.73 ಕೋಟಿ ರೂ. ಪರಿಹಾರ ಒದಗಿಸುವಂತೆ ಪ್ರಸ್ತಾವನೆ ಸಲ್ಲಿಸಲಾಯಿತು. ಇದರಲ್ಲಿ ತುರ್ತು ಪರಿಹಾರದ12,577.86 ಕೋಟಿ ರೂ. ಮೊತ್ತವೂ ಸೇರಿದೆ. ನವೆಂಬರ್ 4 ರಂದು ಹೆಚ್ಚುವರಿಯಾಗಿ 7 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಯಿತು. ಈ ಹಿನ್ನೆಲೆಯಲ್ಲಿ ಸಲ್ಲಿಸಿದ ಪೂರಕ ಮನವಿಯೊಂದಿಗೆ ಕೇಂದ್ರದಿಂದ 18,177 ಕೋಟಿ ರೂ. ಪರಿಹಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಮೊದಲ ಮನವಿ ಸಲ್ಲಿಸಿ ಈಗಾಗಲೇ ಮೂರು ತಿಂಗಳು ಕಳೆದಿದ್ದು, ರೈತರು ಅತ್ಯಂತ ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾರೆ. ಬೆಳೆ ವಿಫಲವಾಗಿರುವ ಹಿನ್ನೆಲೆಯಲ್ಲಿ ರೈತರಿಗೆ ಇನ್‍ಪುಟ್ ಸಬ್ಸಿಡಿ ನೀಡುವುದು ಅತ್ಯಗತ್ಯವಾಗಿದೆ ಎಂದು ಮುಖ್ಯಮಂತ್ರಿಗಳು ಪ್ರಧಾನ ಮಂತ್ರಿಗಳಿಗೆ ಮನವರಿಕೆ ಮಾಡಿಕೊಟ್ಟ ಮುಖ್ಯಮಂತ್ರಿಗಳು ರೈತರ ಹಿತರಕ್ಷಣೆಯ ದೃಷ್ಟಿಯಿಂದ ಪರಿಹಾರ ಬಿಡುಗಡೆ ಮಾಡುವಂತೆ ಮಾನ್ಯ ಪ್ರಧಾನ ಮಂತ್ರಿಗಳಿಗೆ ಕೋರಿದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

16 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

18 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

1 day ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

1 day ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

2 days ago