ಮತ್ತೆ ದೇಶದಲ್ಲಿ ಕೋವಿಡ್ 19 ಪ್ರಕರಣಗಳ ಏರಿಕೆ: ರಾಜ್ಯದಲ್ಲಿ ಸಾರ್ವಜನಿಕರು ಪಾಲಿಸಬೇಕಾದ ಕ್ರಮಗಳು

0
8

ಬೆಂಗಳೂರು; ತಮಿಳುನಾಡು ಹಾಗೂ ಕೇರಳ ರಾಜ್ಯದಲ್ಲಿ ಕೋವಿಡ್ 19ನ ಉಪತಳಿ ಎಓ.1 ವರದಿಯಾಗಿರುವುದು, ಚಳಿಗಾಲದ ಹವಾಮಾನ, ಕ್ರಿಸ್ ಮಸ್ ಹಾಗೂ ಹೊಸ ವμರ್Áಚರಣೆಯ ಸಂದರ್ಭದಲ್ಲಿ ಹೆಚ್ಚಾಗುವ ಸಂಭವನೀಯ ಜನದಟ್ಟಣೆಯಂತಹ ಅಂಶಗಳನ್ನು ಗಮನದಲ್ಲಿರಿಸಿಕೊಂಡು, ಕೋವಿಡ್ – 19 ರಾಜ್ಯ ತಾಂತ್ರಿಕ ಸಲಹಾ ಸಮಿತಿಯು ಶಿಫಾರಸ್ಸು ಮಾಡಿರುವ ಅಂಶಗಳನ್ನು ಸಾರ್ವಜನಿಕರು ಪಾಲಿಸುವಂತೆ ಸಲಹೆ ನೀಡಲಾಗಿದೆ.

ಎಲ್ಲಾ ಹಿರಿಯ ನಾಗರೀಕರು (60 ವರ್ಷ ಹಾಗೂ ಮೇಲ್ಪಟ್ಟವರು), ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ( ವಿಶೇಷವಾಗಿ ಕಿಡ್ನಿ, ಹೃದಯ, ಲಿವರ್ ಸಮಸ್ಯೆಗಳು), ಗರ್ಭಿಣಿಯರು, ಎದೆ ಹಾಲುಣಿಸುವ ತಾಯಂದಿರು, ಹೊರಾಂಗಣ ಪ್ರದೇಶಗಳಿಗೆ ತೆರಳಿದಾಗ ಮಾಸ್ ಧರಿಸಬೇಕು. ಅಗತ್ಯ ಗಾಳಿ-ಬೆಳಕಿನ ವ್ಯವಸ್ಥೆಯಿಲ್ಲದ ಮತ್ತು ಹೆಚ್ಚು ಜನಸಂದಣಿಯಿರುವ ಪ್ರದೇಶಗಳಿಗೆ ತೆರಳದಿರುವುದು ಸೂಕ್ತವಾಗಿದೆ.

Contact Your\'s Advertisement; 9902492681

ಜ್ವರ, ಕೆಮ್ಮು, ನೆಗಡಿ, ಇತ್ಯಾದಿ ಉಸಿರಾಟದ ಸೋಂಕಿನ ಲಕ್ಷಣಗಳನ್ನು ಹೊಂದಿದವರು ತಕ್ಷಣವೇ ಅಗತ್ಯ ವೈದ್ಯಕೀಯ ಸಲಹೆಯನ್ನು ಪಡೆಯಬೇಕು. ಮೂಗು ಹಾಗೂ ಬಾಯಿ ಮುಚ್ಚುವಂತೆ ಮಾಸ್ಕ್ ಧರಿಸುವುದು, ಅಗತ್ಯ ಗಾಳಿ-ಬೆಳಕಿನ ವ್ಯವಸ್ಥೆಯಿಲ್ಲದ ಮತ್ತು ಹೆಚ್ಚು ಜನಸಂದಣಿಯಿರುವ ಪ್ರದೇಶಗಳಿಗೆ ಭೇಟಿ ನೀಡದಿರುವುದು ಸೂಕ್ತವಾಗಿದೆ.

ಉತ್ತಮ ವೈಯಕ್ತಿಕ ಸ್ವಚ್ಛತೆ. ಆಗಾಗ್ಗೆ, ಕೈಗಳನ್ನು ಸೋಪು ಹಾಗೂ ನೀರಿನಿಂದ ತೊಳೆದುಕೊಳ್ಳುವುದು, ಇತ್ಯಾದಿಗಳ ಪಾಲನೆಯು ಅಗತ್ಯವಾಗಿದೆ. ಆರೋಗ್ಯ ಸಮಸ್ಯೆಗಳು ಕಂಡುಬಂದಲ್ಲಿ ಮನೆಯಲ್ಲಿರುವುದು ಸೂಕ್ತ. ಇತರ ವ್ಯಕ್ತಿಗಳೊಂದಿಗೆ, ವಿಶೇಷವಾಗಿ ಹಿರಿಯ ನಾಗರೀಕರು / ದುರ್ಬಲರನ್ನು (vuಟಟಿeಡಿಚಿbಟe) ಅವಶ್ಯವಿದ್ದಲ್ಲಿ ಮಾತ್ರವೇ ಭೇಟಿ ಮಾಡುವುದು. ಆರೋಗ್ಯ ಸಮಸ್ಯೆಗಳನ್ನು ಹೊಂದಿದವರು, ಜನಸಂದಣಿಯ ಪ್ರದೇಶಗಳಿಗೆ ಭೇಟಿ ನೀಡಬೇಕಾದ ಸಂದರ್ಭದಲ್ಲಿ ಮಾಸ್ಕ್ ಧರಿಸುವಂತೆ ಸಲಹೆ ನೀಡಲಾಗಿದೆ.

ಅಂತರ ರಾಷ್ಟ್ರೀಯ ಪ್ರಯಾಣದ ಸಂದರ್ಭದಲ್ಲಿ ಎಚ್ಚರಿಕೆಯಿಂದಿದ್ದು ವಿಮಾನ ನಿಲ್ದಾಣದಲ್ಲಿ ಹಾಗೂ ವಿಮಾನದ ಒಳಗೆ ಮಾಸ್ಕ್ ಧರಿಸುವುದು, ಹೆಚ್ಚಿನ ಗಾಳಿ-ಬೆಳಕು ಇಲ್ಲದ ಮತ್ತು ಜನದಟ್ಟಣೆ ಇರುವ ಸ್ಥಳಗಳಿಗೆ ತೆರಳದಿರುವುದೂ ಸೇರಿದಂತೆ ಇತರ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವುದು ಸೂಕ್ತವಾಗಿದೆ.

ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಕೋವಿಡ್ 19ನ ಮುಂಜಾಗ್ರತಾ ಕ್ರಮಗಳ ಕುರಿತು ಸಾರ್ವಜನಿಕರಿಗೆ ಅಗತ್ಯ ಮಾಹಿತಿಯನ್ನು ಒದಗಿಸುವುದು. ಸಾರ್ವಜನಿಕರು ಎಲ್ಲಾ ಅಂಶಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಿಳಿಸಿದೆ.

ಕೋವಿಡ್ – 19ರ ನಿಯಮಗಳನ್ನು ಸಾರ್ವಜನಿಕರು ಪಾಲಿಸುವ ಬಗ್ಗೆ ಖಚಿತಪಡಿಸಿಕೊಳ್ಳುವುದು ಬಿ.ಬಿ.ಎಂ.ಪಿ ಹಾಗೂ ಜಿಲ್ಲಾಡಳಿತಗಳ ಜವಬ್ದಾರಿಯಾಗಿರುತ್ತದೆ ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here