ಕಲಬುರಗಿ: ಮಾಜಿ ಸಚಿವ ಗೋವಿಂದ ಕಾರಜೋಳರವರ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಗೂಂಡಾಗಳ ಗೂಂಡಾಗಿರಿಯನ್ನು ಖಂಡಿಸುವುದಾಗಿ ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ, ಬಿಜೆಪಿ ರಾಜ್ಯ ವಕ್ತಾರರು ಅವರು ಎಚ್ಚರಿಸಿದ್ದಾರೆ.
ನಿನ್ನೆ ಚಿತ್ರದುರ್ಗದಲ್ಲಿ ಬಿಜೆಪಿ ಮುಖಂಡ ಹಾಗೂ ಮಾಜಿ ಉಪ ಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ ಅವರು ಪತ್ರಿಕಾಗೋಷ್ಠಿ ಮಾಡುವಾಗ ಕೆಲವು ಕಾಂಗ್ರೆಸ್ ಗೂಂಡಾಗಳು ಬಂದು ಅವರ ಮೇಲೆ ಇಲ್ಲಸಲ್ಲದ ಆಪಾದನೆ ಮಾಡಿದ್ದಾರೆ. ಜೊತೆಗೆ ಅವರ ಪತ್ರಿಕಾಗೋಷ್ಠಿಗೆ ತೊಂದರೆಯನ್ನುಂಟು ಮಾಡಿ ಅವರ ಮೇಲೆ ಎರಗಿದ್ದು ಖಂಡನೀಯ ಎಂದು ತಿಳಿಸಿದರು.
ಕಾಂಗ್ರೆಸ್ ಸರಕಾರಕ್ಕೆ ಅಧಿಕಾರಕ್ಕೆ ಬಂದ ಬಳಿಕ ದಲಿತರಿಗಾಗಿ ಮೀಸಲಿಟ್ಟ ಎಸ್‍ಸಿಎಸ್‍ಪಿಎಸ್‍ಟಿಪಿ 11 ಸಾವಿರ ಕೋಟಿ ಹಣವನ್ನು ಬೇರೆ ಉದ್ದೇಶಕ್ಕೆ ವಿನಿಯೋಗಿಸುವುದನ್ನು ನಮ್ಮ ಪಕ್ಷ ಮೊದಲಿನಿಂದಲೂ ಖಂಡಿಸುತ್ತಿದೆ ಹಾಗೂ ವಿರೋಧಿಸುತ್ತಿದೆ. ಇದೇ ವಿಚಾರವನ್ನು ಬಳಸಿ, ಕಾರಜೋಳ, ರಾಜೀವ್, ಎನ್.ಮಹೇಶ್ ಹೀಗೆ ಅನೇಕ ಮುಖಂಡರು ಕಾಂಗ್ರೆಸ್ ವಿರುದ್ಧ ರಾಜ್ಯಾದ್ಯಂತ ಆಂದೋಲನ ಶುರು ಮಾಡಿದೆ ಎಂದು ವಿವರಿಸಿದ್ದಾರೆ.
ಕಾಂಗ್ರೆಸ್ ಪಕ್ಷ ದಲಿತರಿಗೆ ದೋಖಾ ಮಾಡಿದೆ; ಅನ್ಯಾಯ ಮಾಡುತ್ತಿದೆ. ಮೋಸ, ವಂಚನೆ ಮಾಡುವ ಕುರಿತು ಪರಿಶಿಷ್ಟ ಜಾತಿ, ವರ್ಗಗಳ ಜನರಿಗೆ ತಿಳಿಸುತ್ತಿದ್ದೇವೆ. ಇದೇ ಸಂದರ್ಭದಲ್ಲಿ ಕಾಂಗ್ರೆಸ್ಸಿಗರು ಕಾರಜೋಳರ ಮೇಲೆ ದಾಳಿಗೆ ಮುಂದಾಗಿದ್ದಾರೆ. ಈ ಗೂಂಡಾ ವರ್ತನೆ ವಿರುದ್ಧ ಪ್ರತಿಭಟನೆ ನಡೆಸಲಿದ್ದೇವೆ. 11 ಸಾವಿರ ಕೋಟಿ ಬಗ್ಗೆ ಸದನದಲ್ಲಿ ಪ್ರಶ್ನಿಸಿದರೆ ಅದಕ್ಕೂ ಹಾರಿಕೆ ಉತ್ತರ ನೀಡಿದ್ದಾರೆ ಎಂದು ಟೀಕಿಸಿದ್ದಾರೆ.
ದಲಿತರಿಗೆ ಇಲ್ಲಸಲ್ಲದ ಆಶ್ವಾಸನೆ ಕೊಟ್ಟು ಈ ಸರಕಾರ ಅಧಿಕಾರಕ್ಕೆ ಬಂದಿದೆ. ಆದರೆ, ಒಂದು ಕೈಯಲ್ಲಿ ಕೊಟ್ಟು ಇನ್ನೊಂದು ಕೈಯಲ್ಲಿ ಕಿತ್ತುಕೊಂಡಂತೆ 11 ಸಾವಿರ ಕೋಟಿ ರೂಪಾಯಿಯನ್ನು ದಲಿತರ ಹಣಕ್ಕೆ ಕನ್ನಾ ಹಾಕಿದ್ದೀರಿ. ಈ ನಿಮ್ಮ ನಡೆಯ ಕುರಿತು ಜನರಿಗೆ ತಿಳಿಸುವ ಆಂದೋಲನ ಮಾಡುತ್ತೇವೆ ಕಾಂಗ್ರೆಸ್ ಗೂಂಡಾಗಿರಿ ಮುಂದುವರೆದರೆ ಅದಕ್ಕೆ ತಕ್ಕ ಉತ್ತರವನ್ನು ಬಿಜೆಪಿ ಕಾರ್ಯಕರ್ತರು ಕೊಡಲಿದ್ದಾರೆ ಎಂದು ಎಚ್ಚರಿಕೆ ನೀಡಿದ್ದಾರೆ
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…