ಕಲಬುರಗಿ: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕಲಬುರಗಿ ಶಾಖೆಯಿಂದ 2020-21ನೇ ಸಾಲಿನಲ್ಲಿ ಕೈಗೊಂಡ ಅತ್ಯುತ್ತಮ ಸಮಾಜ ಮುಖಿ ಕಾರ್ಯ ಪರಿಗಣಿಸಿ ಮಂಗಳವಾರ ಬೆಂಗಳೂರಿನ ರಾಜಭವನದ ಗಾಜಿನ ಮನೆಯಲ್ಲಿ ನಡೆದ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ವಾರ್ಷಿಕ ಸರ್ವ ಸದಸ್ಯರ ಸಭೆಯಲ್ಲಿ ರಾಜ್ಯದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕಲಬುರಗಿ ಜಿಲ್ಲಾಧಿಕಾರಿ ಮತ್ತು ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷರಾಗಿರುವ ಬಿ.ಫೌಜಿಯಾ ತರನ್ನುಮ್ ಅವರಿಗೆ ಪ್ರಥಮ ಬಹುಮಾನದ ಪ್ರಶಸ್ತಿ ನೀಡಿ ಗೌರವಿಸಿದರು.
ಗಾಜಿನ ಮನೆಯಲ್ಲಿ ನಡೆದ ಕರ್ನಾಟಕ ಶಾಖೆಯ ಸರ್ವ ಸದಸ್ಯರ ಸಭೆಯಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ರಾಜ್ಯಾಧ್ಯಕ್ಷರಾಗಿರುವ ಥಾವರ್ ಚಂದ್ ಗೆಹ್ಲೋಟ್ ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕರ್ನಾಟಕ ಶಾಖೆಯ ರಾಜ್ಯ ಸಭಾಪತಿ ವಿಜಯಕುಮಾರ್ ಪಾಟೀಲ್ ಸಾವಂತ್ಗೆರಾ ಅವರಿಂದ ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿಯಾಗಿರುವ ಅಪ್ಪಾರಾವ ಅಕ್ಕೋಣೆ ಅವರೊಂದಿಗೆ ಜಿಲ್ಲಾಧಿಕಾರಿಗಳು ಪ್ರಶಸ್ತಿ ಪಡೆದರು.
ಕಲಬುರಗಿ ರೆಡ್ ಕ್ರಾಸ್ ಸಂಸ್ಥೆಯ ಉಪ ಸಭಾಪತಿ ಅರುಣಕುಮಾರ್ ಲೋಯಾ, ಕಾರ್ಯದರ್ಶಿ ರವೀಂದ್ರ ಶಾಬಾದಿ, ಖಜಾಂಚಿ ಭಾಗ್ಯಲಕ್ಷ್ಮಿ, ಪದ್ಮಣ್ಣ ರಾಸಣಗಿ, ಜಯಪ್ರಕಾಶ ಕಟ್ಟಿಮನಿ ಮುಂತಾದವರು ಇದಕ್ಕೆ ಸಾಕ್ಷಿಯಾದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…