ಬಿಸಿ ಬಿಸಿ ಸುದ್ದಿ

ಮೋಹನ್ ದಾನಪ್ಪರ ಕಾರ್ಯ ಕಲ್ಯಾಣ ಕರ್ನಾಟಕ ಗರ್ವ ಪಡುವಂತಾಗಿಸಿದೆ; ಸಚಿವ ರಹಿಂ ಖಾನ್

ಬೆಂಗಳೂರು: ದೇಶದ ಯುವಕರು ಸೇನೆ ಸೇರುವಂತೆ ಜಾಗೃತಿಗಾಗಿ ಕೇಂದ್ರಾಡಳಿತ ಪ್ರದೇಶ ಲಡಾಖ್ ನ ಕಾರ್ಗಿಲ್ ನಲ್ಲಿ ಮ್ಯಾರಥಾನ್ ಮಾಡಿದ ಬಳ್ಳಾರಿ ಜಿಲ್ಲೆಯ ಕಂಪ್ಲಿಯ ನಿವಾಸಿ ಕರ್ನಾಟಕ ಉಚ್ಚ ನ್ಯಾಯಾಲಯದ ಕೇಂದ್ರ ಸರ್ಕಾರಿ ವಕೀಲರಾದ ಮೋಹನ್ ಕುಮಾರ್ ದಾನಪ್ಪನವರಿಗೆ ರಾಜ್ಯದ ಪೌರಾಡಳಿತ ಮತ್ತು ಹಜ್ ಇಲಾಖೆಯ ಸಚಿವರಾದ ರಹೀಂ ಖಾನ್ ರವರು ಪತ್ರದ ಮುಖಾಂತರ ಅಭಿನಂದಿಸಿದ್ದಾರೆ!

ಸಚಿವ ರಹೀಂ ಖಾನ್ ರವರ ಪತ್ರದಲ್ಲಿ “ಕಲ್ಯಾಣ ಕರ್ನಾಟಕ ಭಾಗದ ಬಳ್ಳಾರಿ ಜಿಲ್ಲೆಯ ಕಂಪ್ಲಿ ನಗರ ನಿವಾಸಿ ಕರ್ನಾಟಕ ಉಚ್ಛ ನ್ಯಾಯಾಲಯದ ಕೇಂದ್ರ ಸರ್ಕಾರಿ ವಕೀಲರಾಗಿ ಕಾರ್ಯನಿರ್ವಹಿಸುತ್ತಿರುವ ಶ್ರೀ ಮೋಹನ್ ಕುಮಾರ್ ದಾನಪ್ಪರವರು 77 ನೇ ಸ್ವಾತಂತ್ರ್ಯ ದಿನಾಚರಣೆ ಮತ್ತು 24 ನೇ ಕಾರ್ಗಿಲ್‌ ವಿಜಯ ದಿವಸ ಅಂಗವಾಗಿ ಆಗಸ್ಟ್ 15, 2023 ರಂದು ಕೇಂದ್ರಾಡಳಿತ ಪ್ರದೇಶ ಲಡಾಖ್ ನ ಕಾರ್ಗಿಲ್ ನಗರದಲ್ಲಿ “ಸಲಾಂ ಸೋಲ್ಮರ್ಸ್” ಶೀರ್ಷಿಕೆಯಡಿಯಲ್ಲಿ ” ಯುವಕರೇ ದೇಶ ಸೇವೆಗೆ ಒಂದಾಗಿ, ಸೇನೆ ಸೇರಲು ಮುಂದಾಗಿ” ಎನ್ನುವ ವಾಕ್ಯದಡಿಯಲ್ಲಿ ಯುವಕರು ದೇಶ ಸೇವೆಗೆ ಸೇರುವ ಬಗ್ಗೆ ಜಾಗೃತಿಗಾಗಿ ಕಾರ್ಗಿಲ್ ನಗರದಿಂದ ಕಾರ್ಗಿಲ್‌ ಯುದ್ಧ ಸ್ಮಾರಕದವರೆಗೆ ಬಲಗೈನಲ್ಲಿ ರಾಷ್ಟ್ರಧ್ವಜ ಹಿಡಿದು ನಿರಂತರ 5 ಗಂಟೆಗಳ ಕಾಲ 42 ಕಿಲೋ ಮೀಟರ್ ನಷ್ಟು ಉದ್ದದಷ್ಟು ಆಮ್ಲಜನಕ ಕಡಿಮೆಯಿರುವ ಮತ್ತು ಸಮುದ್ರ ಮಟ್ಟಕ್ಕಿಂತ 10.800 ಅಡಿ ಮೇಲಿರುವ ಪ್ರದೇಶದಲ್ಲಿ ಓಡುವ ಮೂಲಕ ಅಸಾಧಾರಣ ಸಾಧನೆ ಮಾಡಿರುವ ತಮಗೆ ಅಭಿನಂದಿಸಲಾಗಿದೆ.

ಸರ್ಕಾರಿ ಸೇವೆಯಲ್ಲಿರುವ ತಾವು ಸೇವೆಯೊಂದಿಗೆ ಸಾಮಾಜಿಕ ಸಮಸ್ಯೆಗಳ ಬಗ್ಗೆ ಕ್ರೀಡೆಯ ಮೂಲಕ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ, ತಮ್ಮ ಈ ಕಾರ್ಯ ಮತ್ತು ಸಾಧನೆ ತಮ್ಮ ದೇಶ ಪ್ರೇಮವನ್ನು ಎತ್ತಿ ತೋರಿಸುತ್ತಿದೆ, ತಮ್ಮ ಈ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್, ಏಷ್ಯಾ ಬುಕ್ ಆಫ್ ರೆಕಾರ್ಡ್‌, ಬ್ರಾವೊ ಇಂಟರ್ನ್ಯಾಷನಲ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್, ಹಾರ್ವಡ್ ವರ್ಲ್ಡ್ ರೆಕಾರ್ಡ್ ನಲ್ಲಿ ದಾಖಲೆಯಾಗಿ ಸೇರಿರುವುದು ದೇಶಕ್ಕೆ ಮತ್ತು ರಾಜ್ಯಕ್ಕೆ, ಹಮ್ಮೆಯ ವಿಷಯವಾಗಿರುತ್ತದಲ್ಲದ ಕಲ್ಯಾಣ ಕರ್ನಾಟಕಕ್ಕೆ, ಗರ್ವ ಪಡುವಂತ ಸಂಗತಿಯಾಗಿದೆ,

ಮುಂದುವರೆದು, ಇಂತಹ ಸಮಾಜಮುಖಿ ಕಾರ್ಯಗಳನ್ನು ನಡೆಸುತ್ತಿರುವುದು ಸಂತಸ ತಂದಿದೆ ಮುಂದಿನ ದಿನಗಳಲ್ಲಿ ತಾವು ಇನ್ನಷ್ಟು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ರಾಜ್ಯದ ಕೀರ್ತಿ ಇನ್ನಷ್ಟು ಎತ್ತರಕ್ಕೆ ಏರುವಂತಾಗಲಿ ಎಂದು ಸಚಿವ ರಹೀಂ ಖಾನ್ ಹಾರೈಸಿ ಅಭಿನಂದಿಸಿದ್ದಾರೆ.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

17 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago