ಬಿಸಿ ಬಿಸಿ ಸುದ್ದಿ

ಸೂಪರ್ ಫುಡ್ ಬ್ರಾಂಡ್ ಮಾಡಲು ಎಕ್ಸಿಲೆನ್ಸ್ ಕೇಂದ್ರ ಸ್ಥಾಪನೆಗೆ ಮುಂದಾಗಿ: ಪ್ರಿಯಾಂಕ್ ಖರ್ಗೆ

ಕಲಬುರಗಿ: ಕಲಬುರಗಿಯ ಕಮಲಾಪೂರದಲ್ಲಿ ಬೆಳೆಯುವ ಕೆಂಬಾಳೆ, ಏಶಿಯಾದಲ್ಲಿಯೆ ಗುಣಮಟ್ಟದಿಂದ ಕೂಡಿರುವ ಇಲ್ಲಿ ಬೆಳೆಯುವ ತೊಗರಿ, ಸಿರಿಧಾನ್ಯ ಸೇರಿದಂತೆ ಕೃಷಿ, ತೋಟಗಾರಿಕೆ ಉತ್ಪನ್ನಗಳ ಮಾರುಕಟ್ಟೆಗೆ ಸೂಕ್ತ ವೇದಿಕೆ ಮತ್ತು ಬ್ಯಾಂಡಿಂಗ್ ಗೆ ಎಕ್ಸಿಲೆನ್ಸ್ ಸೆಂಟರ್ ಸ್ಥಾಪನೆಗೆ ಮುಂದಾಗಿ ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಯಾವ ರಾಜ್ಯದಲ್ಲಿಯೂ ಇರದ ಕೃಷಿ, ತೋಟಗಾರಿಕೆ, ಪಶುಸಂಗೋನೆ ವಿಶ್ವವಿದ್ಯಾಲಯಗಳು, ಕೃಷಿ ಸಂಶೋಧನಾ ಕೇಂದ್ರಗಳು ಇಲ್ಲಿ ಹೆಚ್ಚಿವೆ. ಇವೆಲ್ಲದರ ಸಹಕಾರ ಪಡೆಯಬೇಕು. ಕೃಷಿ ಉತ್ಪನ್ನಗಳ ಮಾರುಕಟ್ಟೆಗೆ ಬ್ರ್ಯಾಂಡಿಂಗ್ ಗೆ ಸರ್ಕಾರ, ಕೆ.ಕೆ.ಆರ್.ಡಿ.ಬಿ. ಮಂಡಳಿ ಎಲ್ಲಾ ರೀತಿಯ ನೆರವು ನೀಡಲಿದೆ. ಡಿಟೇಲ್ ಪ್ರಜೆಕ್ಟ್ ರಿಪೋರ್ಟ್ ದೊಂದಿಗೆ ಬನ್ನಿ ಎಂದು ಅಧಿಕಾರಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

ಬುಧವಾರ ಇಲ್ಲಿ ನಡೆದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ( ಕೆ.ಡಿ.ಪಿ) ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕೃಷಿ ಮತ್ತು ತೋಟಗಾರಿಕೆ ಇಲಾಖೆ ಚರ್ಚೆ ವೇಳೆಯಲ್ಲಿ ಮಾತನಾಡಿದ ಅವರು ಕಳೆದ ಕೋವಿಡ್ ಸಮದರ್ಭದಲ್ಲಿ ಬಹಲಷ್ಉಟ ರೈತರು ಮಾರುಕಟ್ಟೆ ಇಲ್ಲದೆ ಸಂಕಟಕ್ಕೆ ಒಳಗಾಗಿದ್ದರು. ಮುಂದೆ ಹೀಗಾಗಬಾರದು. ಏನಾದರು ವಿನೂತನ ಪ್ರಯತ್ನ ಮಾಡಿ. ಇದರಿಂದ ರೈತರ ಆದಾಯ ದ್ವಿಗುಣವಾಗಬೇಕು. ಇತ್ತೀಚೆಗೆ ತೆಲಂಗಾಣಾಗೆ ಹೋಗಿದ್ದಾಗ ಇಲ್ಲಿನ ತೊಗರಿ ಅಲ್ಲಿ ಮೂರು ಪಟ್ಟು ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಸಂಸ್ಕರಣೆ, ಮಾರುಕಟ್ಟೆಗೆ ವೇದಿಕೆ ಕಲ್ಪಿಸಿದಲ್ಲಿ ನಮ್ಮ ರೈತರ ಆದಾಯ ವೃದ್ಧಿ ಜೊತೆಗೆ ಆರ್ಥಿಕವಾಗಿ ಸಬಲರಾಗಬಹುದು ಎಂದರು.

ಶಾಸಕ ಬಿ.ಆರ್.ಪಾಟೀಲ ಮಾತನಾಡಿ, ಆಳಂದ, ಕಲಬುರಗಿ ಸೇರಿದಂತೆ ಜಿಲ್ಲೆಯ ಅವಶ್ಯಕತೆ ಇದ್ದ ಕಡೆ ತೋಟಗಾರಿಕೆ ಬೆಳೆ ಸಂರಕ್ಷಣೆಗೆ ಕೋಲ್ಡ್ ಸ್ಟೋರೇಜ್ ಸ್ಥಾಪಿಸಬೇಕು ಎಂದು ಸಲಹೆ ನೀಡಿದರು. ಶಾಸಕ ಎಂ.ವೈ.ಪಾಟೀಲ ಮಾತನಾಡಿ ಜಿಲ್ಲೆಯಲ್ಲಿ ತೋಟಗಾರಿಕೆ ಪ್ರದೇಶ ವಿಸ್ತರಣೆ ಆಗುತ್ತಿಲ್ಲ. ಯಾವುದೇ ಕ್ರಿಯಾತ್ಮಕ ಚಟುವಟಿಕೆ ಇಲಾಖೆಯಿಂದ ಕಂಡುಬರುತ್ತಿಲ್ಲ ಎಂದರು.

ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಖಾತೆ ಸಚಿವ ಡಾ.ಶರಣಪ್ರಕಾಶ ಪಾಟೀಲ ಮಾತನಾಡಿ, ತೋಟಗಾರಿಕೆ ಇಲಾಖೆಯಲ್ಲಿ ಫಲಾನುಭವಿಗಳ ಆಯ್ಕೆ ಪಾರರ್ದರ್ಶಕತೆ ನಡೆಯುತ್ತಿಲ್ಲ, ಭೋಗಸ್ ಬಿಲ್ಲು ಪಾವತಿ ಆಗುತ್ತಿದೆ ಎಂಬ ಅರೋಪ ಕೇಳಿಬಂದಿದ್ದು, ಇದಕ್ಕೆಲ್ಲ ಕಡಿವಾಣ ಹಾಕಬೇಕು. ಇದು ಪುನರಾವರ್ತನೆಯಾದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನು ಅಮಾನತ್ತುಗೊಳಿಸಿ ಕ್ರಿಮಿನಲ್ ಪ್ರಕರಣ ದಾಖಲಿಸಿಲಾಗುವುದು ಎಂದು ಎಚ್ಚರಿಕೆ ನೀಡಿದರು.

*ಕೃಷಿ ವಲಯಕ್ಕೆ ಹೆಚ್ಚಿನ ಆದ್ಯತೆ:*

ಕೆ.ಕೆ.ಆರ್.ಡಿ.ಬಿ ಅಧ್ಯಕ್ಷ ಡಾ.ಅಜಯ್ ಸಿಂಗ್ ಮಾತನಾಡಿ, ಮುಂದಿನ‌ ವರ್ಷ 2024-25ನೇ ಸಾಲಿನಲ್ಲಿ ರೈತರ ಹಿತಕಾಯುವ ನಿಟ್ಟಿನಲ್ಲಿ ಕೃಷಿ ವಲಯಕ್ಕೆ ಮಂಡಳಿ ಹೆಚ್ಚಿನ ಒತ್ತು ನೀಡಲು ಹೆಚ್ಚಿನ‌ ಅನುದಾನ ಮೀಸಲಿರಿಸಲು ಚಿಂತನೆ ನಡೆದಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೇ.62 ರಷ್ಟು ಕೃಷಿ ಅವಲಂಬನೆ ಇದೆ. ಪ್ರದೇಶದಲ್ಲಿ ಕೃಷಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಮುಂದಿನ‌ ಒಂದು ತಿಂಗಳೊಳಗೆ ಕೃಷಿ ಹಾಗೂ ಸಂಬಂಧಿತ ಇಲಾಖೆಗಳ ಅಧಿಕಾರಿಗಳು ಡಿ.ಪಿ.ಆರ್. ಸಲ್ಲಿಸಬೇಕು ಎಂದು ಹೇಳಿದರು.

ಶಾಸಕರಾದ ಬಿ.ಆರ್.ಪಾಟೀಲ, ಎಂ.ವೈ.ಪಾಟೀಲ, ಕನೀಜ್ ಫಾತಿಮಾ, ಬಸವರಾಜ ಮತ್ತಿಮೂಡ, ಡಾ.ಅವಿನಾಶ ಜಾಧವ, ಅಲ್ಲಮಪ್ರಭು ಪಾಟೀಲ, ಶಶೀಲ ಜಿ. ನಮೋಶಿ, ವಿಧಾನ ಪರಿಷತ್ ಶಾಸಕರಾದ ಬಿ.ಜಿ.ಪಾಟೀಲ, ತಿಪ್ಪಣಪ್ಪ ಕಮಕನೂರ, ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷ ಸೋಮಶೇಖರ ಗೋನಾಯಕ್, ಡಿ.ಸಿ. ಬಿ.ಫೌಜಿಯಾ ತರನ್ನುಮ್, ನಗರ ಪೊಲೀಸ್ ಆಯುಕ್ತ ಆರ್.ಚೇತನಕುಮಾರ, ಎಸ್.ಪಿ. ಅಡ್ಡೂರು ಶ್ರೀನಿವಾಸಲು, ಮಹಾನಗರ ಪಾಲಿಕೆ ಆಯುಕ್ತ ಭುವನೇಶ ಪಾಟೀಲ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸುಮಿತ್ ಪಾಟೀಲ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಸೇರಿದಂತೆ ಅನೇಕ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

emedialine

Recent Posts

ವಕ್ಫ್ ಮಸೂದೆ ತಿದ್ದುಪಡಿಗೆ ಮುಸ್ಲೀಮ ವೈಯಕ್ತಿಕ ಕಾನೂನು ಮಂಡಳಿ ವಿರೋಧ

ಕಲಬುರಗಿ: ನ.25- ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆ-2024 ಜಾರಿಗೆ ತರಲು ಮುಂದಾಗಿದ್ದನ್ನು ಆಲ್ ಇಂಡಿಯಾ ಮುಸ್ಲೀಮ ವೈಯಕ್ತಿಕ ಕಾನೂನು…

9 mins ago

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

23 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago