ಬಿಸಿ ಬಿಸಿ ಸುದ್ದಿ

ಕ್ರಿಸ್‍ಮಸ್ ಹಬ್ಬಕ್ಕೆ ಕರಾರಸಾ ನಿಗಮದಿಂದ ವಿಶೇಷ ಸಾರಿಗೆ ವ್ಯವಸ್ಥೆ

ಬೆಂಗಳೂರು; ಕ್ರಿಸ್‍ಮಸ್ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ 1000 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಡಿಸೆಂಬರ್ 22, 23 ಮತ್ತು 25 ವಾರಾಂತ್ಯ ದಿನಗಳು ಸೇರಿದಂತೆ ಕ್ರಿಸ್‍ಮಸ್À ಹಬ್ಬದ ಪ್ರಯುಕ್ತ ಕರಾರಸಾ ನಿಗಮವು, ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ಹಾಗೂ ರಾಜ್ಯಗಳಿಗೆ ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿರುತ್ತದೆ. ನಂತರ ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ದಿನಾಂಕ: ಡಿಸೆಂಬರ್ 25 ರಂದು ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುವುದು.

ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಕಾರ್ಯಾಚರಣೆ.
ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಕಾರ್ಯಾಚರಣೆ.

ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕೋಯಿಕೋಡ್, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ಮಾಡಲಾಗುವುದು.

ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯವÀನ್ನು ಕಲ್ಪಿಸಲಾಗಿದ್ದು, ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೇಟುಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ/ಪಿಕ್‍ಅಪ್ ಪಾಯಿಂಟ್‍ನ ಹೆಸರನ್ನು ಗಮನಿಸುವುದು. ಇ-ಟಿಕೇಟ್ ಬುಕಿಂಗ್‍ನ್ನು ತಿತಿತಿ.ಞsಡಿಣಛಿ.ಞಚಿಡಿಟಿಚಿಣಚಿಞಚಿ.gov.iಟಿ ವೆಬ್ ಸೈಟ್ ಮುಖಾಂತರ ಮಾಡಬಹುದು.

ಅಲ್ಲದೆ ಸಾರ್ವಜನಿಕ ಪ್ರಯಾಣಿಕರು ಕರ್ನಾಟಕ ಹಾಗೂ ಅಂತರರಾಜ್ಯದಲ್ಲಿ ಇರುವ 691 ಗಣಕೀಕೃತ ಬುಕಿಂಗ್ ಕೌಂಟರ್‍ಗಳ ಮೂಲಕ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದಾಗಿದೆ. ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೇಟು ಕಾಯ್ದಿರಿಸಿದಲ್ಲಿ ಶೇಕಡ 5 ರಷ್ಟು ರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ & ಬರುವ ಪ್ರಯಾಣದ ಟಿಕೇಟ್‍ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವÀ ಪ್ರಯಾಣ ದರದಲ್ಲಿ ಶೇಕಡ 10 ರಷ್ಟು ರಿಯಾಯಿತಿ ನೀಡಲಾಗುವುದು.

ನೆರೆ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟ್ರ ಹಾಗೂ ಪುದುಚೆರಿಯಲ್ಲಿ ಇರುವ ಪ್ರಮುಖ ನಗರಗಳಲ್ಲಿ ನಿಗಮದ ಮುಂಗಡ ಆಸನಗಳನ್ನು ಕಾಯ್ದಿರಿಸುವ ಕೌಂಟರ್‍ಗಳು ಇದ್ದು, ಇವುಗಳ ಮೂಲಕ ಸಹ ಮುಂಗಡವಾಗಿ ಆಸನಗಳನ್ನು ನಿಗಮದ ಸಾರಿಗೆಗಳಿಗೆ ಕಾಯ್ದಿರಿಸಬಹುದು.

ಕಾರ್ಯಾಚರಣೆ ಮಾಡಲಾಗುವ ಹೆಚ್ಚುವರಿ ಸಾರಿಗೆಗಳು, ಅವುಗಳು ಹೊರಡುವ ಸ್ಥಳ ಹಾಗೂ ವೇಳಾ ವಿವರಗಳನ್ನು ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಅಂತರ್‍ಜಾಲ ವ್ಯವಸ್ಥೆಯಲ್ಲಿ ಹಾಗೂ ಕರಾರಸಾ ನಿಗಮದ ವೆಬ್‍ಸೈಟ್‍ನಲ್ಲಿ ಸಾರ್ವಜನಿಕ ಮಾಹಿತಿಗಾಗಿ ಒದಗಿಸಲಾಗಿದೆ ಹಾಗೂ ಸದರಿ ಹೆಚ್ಚುವರಿ ಸಾರಿಗೆಗಳಲ್ಲಿ ಸಂಚರಿಸುವ ಪ್ರಯಾಣಿಕರು ಕಾಯ್ದಿರಿಸುವ ಮುಂಗಡ ಚೀಟಿಗಳಲ್ಲೂ ಕೂಡ ವಾಹನ ಹೊರಡುವ ಸ್ಥಳದ ವಿವರ ನಮೂದಿಸಲಾಗಿದೆ. ಅಲ್ಲದೇ, ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲಾ ತಾಲ್ಲೂಕು/ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕನುಗುಣವಾಗಿ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮುಖ್ಯ ಸಂಚಾರ ವ್ಯವಸ್ಥಾಪಕರು (ಕಾ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

emedialine

Recent Posts

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

44 mins ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

2 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

5 hours ago

ಶರಣ ಮಾರ್ಗಕ್ಕೆ ನಿಮ್ಮೆಲ್ಲರ ಸಹಾಯ ಸಹಕಾರ ಅಗತ್ಯ: 10ನೇ ವರ್ಷದ ಹೊಸ್ತಿಲಲ್ಲಿ ನಿಂತು ನಿಮ್ಮೊಂದಿಗಿಷ್ಟು

ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…

6 hours ago

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

19 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

19 hours ago