ಸುರಪುರ: ತಾಲೂಕಿನ ದೇವಾಪುರ ಕ್ರಾಸ್ ಬಳಿಯಲ್ಲಿ ಹತ್ತಿ ಲಾರಿಯಲ್ಲಿ ಲೋಡ ಮಾಡುತ್ತಿದ್ದ ಸಂದರ್ಭದಲ್ಲಿ ವಿದ್ಯುತ್ ತಂತಿ ತಗುಲಿ ಬೆಂಕಿ ಹೊತ್ತಿ ಅಪಾರ ಪ್ರಮಾಣದ ಹತ್ತಿ ಸುಟ್ಟು ಕರಕಲಾಗಿರುವ ಘಟನೆ ಜರುಗಿದೆ.
ಖಾಜಾಸಾಬ್ ಖಾಸಿಂ ಸಾಬ್ ನಾಗರಾಳ ಎನ್ನುವವರು ದೇವಾಪುರ ಕ್ರಾಸ್‍ಲ್ಲಿ ರೈತರಿಂದ ಹತ್ತಿ ಖರಿದಿ ಮಾಡಿ ಗುಡ್ಡೆ ಹಾಕಿದ್ದು,ಬೇರೆಡೆಗೆ ಸಾಗಿಲು ಲಾರಿಯಲ್ಲಿ ಲೋಡ್ ಮಾಡುವಾಗ ಮೇಲ್ಭಾಗದಲ್ಲಿದ್ದ ವಿದ್ಯುತ್ ತಂತಿ ತಗುಲಿ ಬೆಂಕೊ ಹೊತ್ತಿಕೊಂಡಿದೆ ಎಂದು ಹೇಳಲಾಗುತ್ತಿದೆ.ನಿಖರವಾಗಿ ಬೆಂಕಿ ಹೇಗೆ ಹೊತ್ತಿಕೊಂಡಿದೆ ಎನ್ನುವುದು ಇನ್ನಷ್ಟೆ ತಿಳಿದುಬರಬೇಕಿದೆ.
ಘಟನೆಯ ಸುದ್ದಿ ತಿಳಿದು ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ.ಆದರೆ ಅಷ್ಟರೊಳಗೆ ಎಲ್ಲಾ ಹತ್ತಿ ಸುಟ್ಟು ಕರಕಲಾಗಿದ್ದು,ಸುಮಾರು 200 ಕ್ವಿಂಟಲ್ ಹತ್ತಿ ಇರಬಹುದು ಎಂದು ಹೇಳಲಾಗಿದೆ.ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದ್ದು ಸಾಲ ಸೂಲ ಮಾಡಿ ವ್ಯಾಪಾರ ಮಾಡಲು ಮುಂದಾಗಿದ್ದ ಬಡಪಾಯಿಗೆ ಸರಕಾರ ನೆರವಾಗಬೇಕು ಎಂದು ಕಾಂಗ್ರೆಸ್ ಮುಖಂಡ ಚೆನ್ನಪ್ಪಗೌಡ ಜಕ್ಕನಗೌಡರ್ ದೇವಾಪುರ ಸರಕಾರಕ್ಕೆ ವಿನಂತಿಸಿದ್ದಾರೆ.
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…
ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…
ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಯವರು ಮೂರು ವರ್ಷಗಳು ಪೂರೈಸಿರುವ…
ಕಲಬುರಗಿ: ವಿದ್ಯಾರ್ಥಿನಿಯರ ಸರ್ವತೋಮುಖ ಬೆಳವಣಿಗೆಯೇ ಶಿಕ್ಷಣ, ಶಿಕ್ಷಣವೆಂದರೆ ಕೇವಲ ಆನಲೈನ ಮಾಹಿತಿಯಲ್ಲ, ಪುಸ್ತಕದ ಜ್ಞಾನವೂ ಅಲ್ಲ, ವಿದ್ಯಾರ್ಥಿನಿಯರ ಬೌದ್ಧಿಕ, ಮಾನಸಿಕ,…
ಶಹಾಬಾದ: ನಗರದ ಶಿವಯೋಗಿಸ್ವಾಮಿ ಪ್ರೌಢಶಾಲೆಯಲ್ಲಿ ಪ್ರಿಯಾಂಕ್ ಖರ್ಗೆ ಅಭಿಮಾನಿ ಬಳಗದ ವತಿಯಿಂದ ಶುಕ್ರವಾರ ಸಚಿವರಾದ ಪ್ರಿಯಾಂಕ್ ಖರ್ಗೆ ಅವರ ಜನ್ಮ…