ಬಿಸಿ ಬಿಸಿ ಸುದ್ದಿ

ಕೆ.ಕೆ.ಆರ್.ಟಿ.ಸಿ. ಸಿಬ್ಬಂದಿಗಳಿಗೆ 1.20 ಕೋಟಿ ರೂ. ವಿಮಾ ಯೋಜನೆಗೆ ಒಪ್ಪಂದ

ಕಲಬುರಗಿ,ಡಿ.21: ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ದೇಶದ ಸಾರಿಗೆ ನಿಗಮಗಳ ಇತಿಹಾಸದಲ್ಲಿಯೇ ಪ್ರಥಮವಾಗಿ ತನ್ನ ನೌಕರರಿಗೆ ಪ್ರೀಮಿಯಂ ರಹಿತ ರೂ.1.20 ಕೋಟಿ ವಿಮಾ ಯೋಜನೆಗೆ ಗುರುವಾರ ಬೆಂಗಳೂರಿನಲ್ಲಿ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರ ಉಪಸ್ಥಿತಿಯಲ್ಲಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಜೊತೆಗೆ ಒಡಂಬಡಿಕೆ ಮಾಡಿಕೊಂಡಿದೆ.

ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಎಂ.ರಾಚಪ್ಪ ಮತ್ತು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಕರ್ನಾಟಕ ವಲಯ ಮೂಖ್ಯಸ್ಥ ನವನೀತ್ ಕುಮಾರ್ ಅವರು ಪರಸ್ಪರ ಒಪ್ಪಂದ ಪತ್ರಕ್ಕೆ ಸಹಿ ಹಾಕಿ ಪತ್ರ ವಿನಿಮಯ ಮಾಡಿಕೊಂಡರು. ಈ ಮೂಲಕ ತನ್ನ ನೌಕರರಿಗೆ ಕಷ್ಟಕಾಲದಲ್ಲಿ ಕೈಹಿಡಿಯುವ ಕೆ.ಕೆ.ಆರ್.ಟಿ.ಸಿ ಕಾರ್ಯಕ್ಕೆ ಸಿಬ್ಬಂದಿಗಳು ಸಂತಸಗೊಂಡಿದ್ದಾರೆ.

ಕೆ.ಕೆ.ಆರ್.ಟಿ.ಸಿ. ಸಂಸ್ಥೆಯು ಪ್ರಯಾಣಿಕರಿಗೆ ಉತ್ತಮ ಸಾರಿಗೆ ಸೌಲಭ್ಯವನ್ನು ಕಲ್ಪಿಸುವುದರ ಜೊತೆಗೆ ಸಂಸ್ಥೆಗೆ ಹಗಲಿರಳು ಶ್ರಮಿಸುತ್ತಿರುವ ತನ್ನ ನಿಗಮದ ಸಿಬ್ಬಂದಿಗಳಿಗೆ ಹಲವಾರು ಕಾರ್ಮಿಕ ಕಲ್ಯಾಣ ಯೋಜನೆಗಳನ್ನು ಜಾರಿಗೆ ತಂದಿದ್ದು, ಇದಕ್ಕೆ ದಾಖಲೆಯಾಗಿ ಇದೀಗ 1.20 ಕೋಟಿ ರೂ. ವಿಮೆ ಯೋಜನೆ ಸೇರಿದೆ

ಒಡಂಬಡಿಕೆ ಪತ್ರ ವಿನಿಮಯದ ನಂತರ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು, ಇತ್ತೀಚಿನ ದಿನಗಳಲ್ಲಿ ಅಪಘಾತದಿಂದಾಗಿ ಸಾರಿಗೆ ನಿಗಮದ ಸಿಬ್ಬಂದಿಗಳ ಸಾವು-ನೋವಿನ ಪ್ರಮಾಣ ಗಮನಿಸಿ ನಿಗಮವು ನೌಕರರಿಗೆ ವೈಯಕ್ತಿಕ / ಕರ್ತವ್ಯ ನಿರತ ಸಮಯದಲ್ಲಿ ಅಪಘಾತದಿಂದಾಗಿ ಮೃತಪಟ್ಟಲ್ಲಿ ಅವರ ಅವಲಂಬಿತರಿಗೆ, ಅಂಗನ್ಯೂನ್ಯತೆಗೆ ಒಳಗಾದಲ್ಲಿ ಸಿಬ್ಬಂದಿಗಳಿಗೆ ಗಣನೀಯ ಮೊತ್ತದಷ್ಟು ಹಣ ದೊರೆಯುವಂತೆ ಮಾಡುವ ಉದ್ದೇಶದಿಂದ ಇಂದಿಲ್ಲಿ ಯೂನಿಯನ್ ಬ್ಯಾಕ್ ಆಫ್ ಇಂಡಿಯಾ ಅವರೊಂದಿಗೆ Union Super Salary Account (USSA) ಯೋಜನೆಯ ಸೌಲಭ್ಯಕ್ಕೆ ಒಪ್ಪಂದ ಮಾಡಿಕೊಂಡಿದೆ. ಪ್ರೀಮಿಯಂ ರಹಿತವಾಗಿ ಈ ಯೋಜನೆಯನ್ನು ಜಾರಿಗೊಳಿಸಲು ಸಹಕರಿಸಿದ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಅವರಿಗೆ ಧನ್ಯವಾದಗಳನ್ನು ತಿಳಿಸುವೆ ಎಂದರು.

ಈ ವಿಮೆ ಯೋಜನೆಯಡಿ ಯೂನಿಯನ್ ಬ್ಯಾಂಕಿನಲ್ಲಿ ವೇತನ ಪಡೆಯುತ್ತಿರುವ ನೌಕರರು ಅಪಫಾತದಲ್ಲಿ ನಿಧನರಾದಲ್ಲಿ ಅಂತಹ ನೌಕರರ ಅವಲಂಬಿತರಿಗೆ 1.20 ಕೋಟಿ ರೂ. ಅಪಘಾತ ವಿಮೆ ಹಣ ದೊರಕಲಿದೆ. ನೌಕರರು ಶಾಶ್ವತ ಅಂಗನ್ಯೂನ್ಯತೆ / ಭಾಗಶಃ ಶಾಶ್ವತ ಅಂಗನ್ಯೂನ್ಯತೆ ಒಳಗಾದಲ್ಲಿ 1 ಕೋಟಿ ರೂ. ವಿಮೆ ಪಡೆಯಬಹುದಾಗಿದೆ. ಇನ್ನು ಡೆಬಿಟ್ ಕಾರ್ಡ್ ಮೇಲೆ 15 ಲಕ್ಷ ರೂ. ಅಪಘಾತ ವಿಮಾ ಸೌಲಭ್ಯ ಇದೆ. ಇದಲ್ಲದೆ ಯೋಜನೆಯಡಿ ಅಪಘಾತವಲ್ಲದ ಸ್ವಾಭಾವಿಕ ಮರಣಕ್ಕೆ 5 ಲಕ್ಷ ರೂ. ವಿಮೆದೊಂದಿಗೆ ಇತರೆ ಹೆಚ್ಚುವರಿ ಸೌಲಭ್ಯಗಳನ್ನು ನೀಡಲಾಗುತ್ತದೆ.

ಒಡಂಬಡಿಕೆ ಸಂದರ್ಭದಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಎಸ್. ಭರತ್, ಕೆ.ಎಸ್.ಆರ್.ಟಿ.ಸಿ. ಸಂಸ್ಥೆಯ ನಿರ್ದೇಶಕಿ (ಸಿ&ಜಾ) ಡಾ. ಕೆ .ನಂದಿನಿ ದೇವಿ, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಪ್ರತಿನಿಧಿಯಾಗಿ ಕಲಬುರಗಿ ವಲಯದ ಪ್ರಾದೇಶಿಕ ಮುಖ್ಯಸ್ಥ ವೆಂಕಟ್ ಸುಧೀರ ಚೀದೆಲ್ಲ, ಸಹಾಯಕ ಪ್ರಧಾನ ವ್ಯವಸ್ಥಾಪಕ (ಸಿ.ಆರ್.ಸಿ.) ನಾಗಭೂಷಣ. ಜಿ.ಆರ್., ಮುಖ್ಯ ವ್ಯವಸ್ಥಾಪಕ (ಸಿ.ಆರ್.ಸಿ.) ನಾಗರಾಜ್ ದೇಶನೂರು ಸೇರಿದಂತೆ ಇನ್ನಿತರ ಹಿರಿಯ ಅಧಿಕಾರಿಗಳು ಹಾಜರಿದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 hour ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 hour ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 hour ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

18 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

20 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago