ಕಲಬುರಗಿ: ಮಾಜಿ ಮುಖ್ಯಮಂತ್ರಿ ಡಾ. ಎನ್. ಧರ್ಮಸಿಂಗ್ ಅವರ 87 ನೇ ಜನ್ಮದಿನದ ಪ್ರಯುಕ್ತ ವಿಶ್ವಜ್ಯೋತಿ ಪ್ರತಿಷ್ಠಾನದ ವತಿಯಿಂದ ಡಿ.24 ರ ಬೆಳಗ್ಗೆ 10.15 ಕ್ಕೆ ನಗರದ ಕನ್ನಡ ಭವನದಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಅವರ ಒಡನಾಡಿಗಳಿಗೆ `ಧರ್ಮಪ್ರಜೆ’ ಪ್ರಶಸ್ತಿ ಪ್ರದಾನ ಮಾಡುವ ಮೂಲಕ ಆಚರಿಸಲಾಗುವುದು ಎಂದು ಪ್ರತಿಷ್ಠಾನದ ಅಧ್ಯಕ್ಷ ಶ್ರೀಕಾಂತ ಪಾಟೀಲ ತಿಳಗೂಳ ಹಾಗೂ ಸಂಚಾಲಕ ಬಿ.ಎಂ.ಪಾಟೀಲ ಕಲ್ಲೂರ ತಿಳಿಸಿದ್ದಾರೆ.
ಧರ್ಮಸಿಂಗ್‍ರ ಕಟ್ಟಾ ಅನುಯಾಯಿಗಳಾದ ಭೀಮರಾಯಗೌಡ ಬಿರಾದಾರ ಮಾಗಣಗೇರಾ, ಅಹ್ಮದ್ ಪಟೇಲ್ ಬಣಮಗಿ, ಮೈಲಾರಿ ಹೊನಗುಂಟಿ, ಹೊನ್ನಪ್ಪ ಹೊನಕೇರಿ, ಶರಣಪ್ಪ ದೊಡ್ಮನಿ ಕರಕಿಹಳ್ಳಿ, ಗುಂಡಪ್ಪ ನಾಟೀಕಾರ ನೆಲೋಗಿ ಅವರಿಗೆ `ಧರ್ಮಪ್ರಜೆ’ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಶ್ರೀಶೈಲಂ ನ ಸಾರಂಗಮಠದ ಜಗದ್ಗುರು ಶ್ರೀ ಡಾ. ಸಾರಂಗಧರ ದೇಶಿಕೇಂದ್ರ ಮಹಾಸ್ವಾಮಿಗಳವರ ದಿವ್ಯ ಸಾನಿಧ್ಯದಲ್ಲಿ ಜರುಗಲಿರುವ ಸಮಾರಂಭ ಇಂಡಿ ಶಾಸಕ ಯಶ್ವಂತರಾಯಗೌಡ ಪಾಟೀಲ ಉದ್ಘಾಟಿಸಲಿದ್ದಾರೆ.
ಮಾಜಿ ಸಚಿವ ಪಿ.ಜಿ.ಆರ್. ಸಿಂಧ್ಯಾ ಪ್ರಶಸ್ತಿ ಪ್ರದಾನ ಮಾಡಲಿದ್ದು, ಜಿಲ್ಲಾ ಕಸಾಪ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಅಧ್ಯಕ್ಷತೆ ವಹಿಸಲಿದ್ದಾರೆ. ನೇತ್ರ ತಜ್ಞೆ ಡಾ. ರಾಜಶ್ರೀ ರೆಡ್ಡಿ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ಅವರು ವಿವರಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…